ಬುಕ್ಕಿಂಗ್ ನಂತರ ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಕಾರು ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ರೆನಾಲ್ಟ್ ಕಂಪನಿಯು ತನ್ನ ಬಹುನೀರಿಕ್ಷಿತ ಬಜೆಟ್ ಬೆಲೆಯ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಕಾರಿನ ವಿತರಣೆಯನ್ನು ಶೀಘ್ರದಲ್ಲೇ ಆರಂಭಿಸುವ ಸಿದ್ದತೆಯಲ್ಲಿದೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಕಿಗರ್ ಕಾರಿನ ಮೂಲಕ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರೀಕ್ಷೆಯಲ್ಲಿರುವ ರೆನಾಲ್ಟ್ ಕಂಪನಿಯು ಸದ್ಯ ದಾಖಲಾಗಿರುವ ಬುಕ್ಕಿಂಗ್ ಸಂಖ್ಯೆಯ ಆಧಾರದ ಮೇಲೆ ಹೊಸ ಕಾರಿನ ವಿತರಣೆಗೆ ಗ್ರಾಹಕರ ಕಾಯುವಿಕೆಯ ಅವಧಿಯನ್ನು ಪ್ರಕಟಿಸಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರನ್ನು ಕನಿಷ್ಠ 6 ವಾರಗಳಿಂದ ಗರಿಷ್ಠ 8 ವಾರಗಳಲ್ಲಿ ವಿತರಣೆ ಮಾಡುವುದಾಗಿ ರೆನಾಲ್ಟ್ ಡೀಲರ್‌ಗಳು ಭರವಸೆ ನೀಡುತ್ತಿದ್ದಾರೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಕಾರಿನ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಾಯುವಿಕೆ ಅವಧಿಯು ನಿರ್ಧಾರವಾಗಲಿದ್ದು, ಟಾಪ್ ಎಂಡ್ ವೆರಿಯೆಂಟ್‌ಗಳು ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಬೆಸ್ ವೆರಿಯೆಂಟ್‌ಗಳ ಖರೀದಿಗೆ ತುಸು ಹೆಚ್ಚಿನ ಸಮಯದ ವರೆಗೆ ಕಾಯಬೇಕಾಗುತ್ತದೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಕಿಗರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಆರಂಭಿಕ ಬೆಲೆಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲೇ ಅತಿ ಕಡಿಮೆ ಬೆಲೆಯ ಕಾರು ಮಾದರಿಯಾಗಿದೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದ್ದು, ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ರೆನಾಲ್ಟ್ ಕಂಪನಿಯು ತನ್ನ ಜಂಟಿ ಕಾರು ಕಂಪನಿಯಾದ ನಿಸ್ಸಾನ್ ಜೊತೆಗೂಡಿ ಅಭಿವೃದ್ದಿಗೊಳಿಸಿದೆ. ಇದೇ ಕಾರಣಕ್ಕಾಗಿ ಹೊಸ ಕಿಗರ್ ಕಾರು ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಮಾದರಿಯಲ್ಲೇ ಬಹುತೇಕ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದು, ಬೆಲೆ ಕೂಡಾ ಒಂದೇ ಮಾದರಿಯಲ್ಲಿದೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಆದರೆ ವಿಭಿನ್ನವಾದ ಹೊರ ವಿನ್ಯಾಸದೊಂದಿಗೆ ಪ್ರತ್ಯೇಕವಾಗಿ ಮಾರಾಟಗೊಳ್ಳುವ ಮೂಲಕ ತನ್ನದೆ ಗ್ರಾಹಕ ವರ್ಗವನ್ನು ಸೆಳೆಯುತ್ತಿರುವ ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳು ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಎರಡು ಹೊಸ ಕಾರು ಮಾದರಿಗಳು ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳಿಗೆ ಉತ್ತಮ ಆದಾಯ ತಂದುಕೊಡುವ ನೀರಿಕ್ಷೆಯಲ್ಲಿವೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಕಿಗರ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯಲಿದೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಎಂಜಿನ್ ಮತ್ತು ಪರ್ಫಾಮೆನ್ಸ್

ರೆನಾಲ್ಟ್ ಕಂಪನಿಯು ಹೊಸ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಅತಿ ಕಡಿಮೆ ಅವಧಿಯಲ್ಲಿ ಕಿಗರ್ ಮಾದರಿಯನ್ನು ವಿತರಿಸಲಿದೆ ರೆನಾಲ್ಟ್

ಈ ಮೂಲಕ ರೆನಾಲ್ಟ್ ಕಂಪನಿಯು ಹೊಸ ಕಿಗರ್ ಮಾದರಿಯೊಂದಿಗೆ ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ರೆನಾಲ್ಟ್ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿರುವುದು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದೆ.

More from DriveSpark

Article Published On: Saturday, February 20, 2021, 15:30 [IST]
English summary
Renault Kiger Waiting Period Only Between Six To Eight Weeks. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+