ಬೇಡಿಕೆ ಹೆಚ್ಚಳ- ರೆನಾಲ್ಟ್ ಕಿಗರ್ ಕಾರಿನ ವಿತರಣೆ ಅವಧಿಯಲ್ಲಿ ಮತ್ತೆ ಏರಿಕೆ
ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ರೆನಾಲ್ಟ್ ಹೊಚ್ಚ ಹೊಸ ಕಿಗರ್ ಕಾರು ಮಾದರಿಯು ಅತಿ ಕಡಿಮೆ ಅವಧಿಯಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಉತ್ಪಾದನೆ ಹೆಚ್ಚಳದೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ವಿತರಣೆ ಕೈಗೊಳ್ಳುತ್ತಿದೆ.

ಕೋವಿಡ್ 2ನೇ ಅಲೆ ಪರಿಣಾಮ ಕಳೆದ 2 ತಿಂಗಳಿಂದ ಕುಸಿತ ಕಂಡಿದ್ದ ಹೊಸ ವಾಹನ ಮಾರಾಟವು ಇದೀಗ ಸಾಕಷ್ಟು ಚೇತರಿಕೆ ಕಂಡಿದ್ದು, ಹೊಸ ಕಾರು ಮಾದರಿಗಳಿಗೆ ಹೆಚ್ಚಿನ ಮಟ್ಟದ ಬೇಡಿಕೆ ಸಲ್ಲಿಕೆಯಾಗುತ್ತಿದೆ. ರೆನಾಲ್ಟ್ ಕಂಪನಿಯು ಇತ್ತೀಚೆಗೆ ಬಿಡುಗಡೆ ಮಾಡಿರುವ ಕಿಗರ್ ಕಾರು ಮಾದರಿಯು ಕೂಡಾ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿದ್ದು, ಬೇಡಿಕೆ ಹೆಚ್ಚಳದಿಂದಾಗಿ ಹೊಸ ಕಾರಿನ ವಿತರಣೆಯಲ್ಲಿ ವಿಳಂಬವಾಗುತ್ತಿದೆ.

ಈ ಮೊದಲು ಹೊಸ ಕಿಗರ್ ಕಾರು ಖರೀದಿಗೆ ಬುಕ್ಕಿಂಗ್ ನಂತರ ವಿತರಣೆ ಪಡೆದುಕೊಳ್ಳಲು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 4 ವಾರಗಳಿಂದ 6 ವಾರಗಳ ಕಾಲ ಬೇಕಿತ್ತು. ಆದರೆ ಕೋವಿಡ್ ನಂತರದಲ್ಲಿ ಹೆಚ್ಚಳವಾಗಿರುವ ಹೊಸ ಕಾರು ಖರೀದಿ ಪ್ರಕ್ರಿಯೆಯಿಂದ ಕಾರಿನ ವಿತರಣೆ ಅವಧಿಯ 4 ವಾರಗಳಿಂದ 16 ವಾರಗಳಿಗೆ ಏರಿಕೆಯಾಗಿದೆ.

ಕಿಗರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.75 ಲಕ್ಷ ಬೆಲೆ ಹೊಂದಿದೆ.

ಕಳೆದ ತಿಂಗಳು ಬೆಲೆ ಹೆಚ್ಚಳದ ನಂತರವೂ ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿದ್ದು, ಹೀಗಿರುವಾಗ ಪ್ರತಿಸ್ಪರ್ಧಿ ಕಾರುಗಳಿಗೆ ಸಮನಾಗಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾದರನ್ನು ಸಹ ಸೆಳೆಯುತ್ತಿದೆ.

ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೌಲಭ್ಯಗಳಿವೆ.

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.


Click it and Unblock the Notifications








