ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ರೆನಾಲ್ಟ್ ಇಂಡಿಯಾ ಕಂಪನಿಯು ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ನಿನ್ನೆಯಿಂದಷ್ಟೇ ದೇಶಾದ್ಯಂತ ವಿತರಣೆ ಆರಂಭಿಸಿದ್ದು, ಹೊಸ ಕಾರು ವಿತರಣೆ ಆರಂಭಗೊಂಡ ಮೊದಲ ದಿನವೇ ಬರೋಬ್ಬರಿ 1,100 ಯನಿಟ್ ಗ್ರಾಹಕರ ಕೈ ಸೇರಿವೆ.

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಅತ್ಯುತ್ತಮ ಬೆಲೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾತ್ರವಲ್ಲದೇ ಬಜೆಟ್ ಬೆಲೆಯ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದ್ದು, ಹೊಸ ಕಾರಿನ ಮೂಲಕ ರೆನಾಲ್ಟ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆ ಹೊಂದಿದ್ದು, ತಾಂತ್ರಿಕವಾಗಿವೂ ಗಮನಸೆಳೆಯುತ್ತಿದೆ.

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಗ್ರಾಹಕರ ಬೇಡಿಕೆಯೆಂತೆ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಕಿಗರ್ ಕಾರು ದೆಹೆಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ.

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಹೊರತುಪಡಿಸಿ ಬಹುತೇಕ ಕಾರುಗಳು ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿವೆ.

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಆದರೆ ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಂಡಿರುವ ಕಿಗರ್ ಮತ್ತು ಮ್ಯಾಗ್ನೈಟ್ ಕಾರು ಮಾದರಿ ಮಾತ್ರ ಅತಿ ಕಡಿಮೆ ಬೆಲೆಯಲ್ಲಿ ಉತ್ತಮ ಆಯ್ಕೆ ಪಡೆದುಕೊಂಡಿದ್ದು, ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಒಂದೇ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಗೊಳ್ಳುವುದರ ಜೊತೆಗೆ ಒಂದೇ ಮಾದರಿಯ ಎಂಜಿನ್, ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದರೂ ವಿಭಿನ್ನವಾದ ವಿನ್ಯಾಸದೊಂದಿಗೆ ಪ್ರತ್ಯೇಕ ಮಾರಾಟ ಸೌಲಭ್ಯದೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯಲಿದೆ.

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಎಂಜಿನ್ ಮತ್ತು ಪರ್ಫಾಮೆನ್ಸ್

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ

ಈ ಮೂಲಕ ಹೊಸ ಕಿಗರ್ ಮಾದರಿಯು ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಬಹುತೇಕ ವೆರಿಯೆಂಟ್‌ಗಳಲ್ಲಿ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ನೀಡಿರುವುದು ಆಯ್ಕೆಗೆ ಉತ್ತಮ ಎನ್ನಿಸಲಿದೆ.

Most Read Articles

Kannada
English summary
Renault Kiger Compact SUV Deliveries Started, 1100 Units Delivered India On The First Day. Read in Kannada.
Story first published: Thursday, March 4, 2021, 0:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X