ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ಅತಿ ಕಡಿಮೆ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಕಿಗರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ. ಸದ್ಯಕ್ಕೆ ಮಾರುಕಟ್ಟೆಯಲ್ಲಿನ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಅತಿ ಕಡಿಮೆ ಬೆಲೆ ಹೊಂದಿರುವ ಕಾರು ಮಾದರಿಯಾಗಿ ಕಿಗರ್ ಗುರುತಿಕೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾಗಿರುವ ಕಿಗರ್ ಆವೃತ್ತಿಯು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್‌ನಲ್ಲಿರುವ ಫೀಚರ್ಸ್ ಅನುಗುಣವಾಗಿ ಬೆಲೆ ಹೊಂದಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಹೊಸ ಕಾರು ಭರ್ಜರಿ ಪೈಪೋಟಿ ನೀಡಲಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಕಿಗರ್ ಕಾರು ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯಲಿದ್ದು, ಹೊಸ ಕಾರಿನಲ್ಲಿ ಬ್ಲ್ಯಾಕ್ ಔಟ್ ಹೊಂದಿರುವ ಸಿ ಪಿಲ್ಲರ್, ಸ್ಪೋಟಿಯಾಗಿರುವ ಬೂಟ್ ಸ್ಪಾಯ್ಲರ್ ಆಕರ್ಷಕವಾಗಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5 -ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್

ರೆನಾಲ್ಟ್ ಕಂಪನಿಯು ಹೊಸ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಹೊಸ ಕಾರನ್ನು ರೆನಾಲ್ಟ್ ಕಂಪನಿಯು ರೆಡಿಯೆಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಐಸ್ ಕೂಲ್ ವೈಟ್, ಮೂನ್‌ಲೈಟ್ ಗ್ರೇ, ಪ್ಲಾನೆಟ್ ಗ್ರೇ ಮತ್ತು ಮಹೊಗನಿ ಬ್ರೌನ್ ಬಣ್ಣಗಳ ಆಯ್ಕೆ ನೀಡಿದ್ದು, ಇದೇ ಬಣ್ಣಗಳಲ್ಲಿ ಎರಡು ಡ್ಯುಯಲ್ ಟೋನ್ ಆಯ್ಕೆ ಸಹ ಲಭ್ಯವಿರಲಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಆಕರ್ಷಕ ಬೆಲೆಯಲ್ಲಿ ಬಹುನೀರಿಕ್ಷಿತ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಈ ಮೂಲಕ ರೆನಾಲ್ಟ್ ಕಂಪನಿಯು ಹೊಸ ಕಿಗರ್ ಮಾದರಿಯೊಂದಿಗೆ ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ರೆನಾಲ್ಟ್ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿರುವುದು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದೆ.

More from DriveSpark

Article Published On: Monday, February 15, 2021, 16:52 [IST]
English summary
Renault Kiger Launched In India At Rs 5.45 Lakh. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+