17 ಇಂಚಿನ ಅಲಾಯ್ ವ್ಹೀಲ್‌ನೊಂದಿಗೆ ಮಾಡಿಫೈಗೊಂಡ Renault Kiger ಕಾರು
ಈ ವರ್ಷದ ಆರಂಭದಲ್ಲಿ ರೆನಾಲ್ಟ್ ತನ್ನ ಸಬ್ -4 ಮೀಟರ್ ಕಾಂಪ್ಯಾಕ್ಟ್ ಎಸ್‌ಯುವಿ ಕಿಗರ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ರೆನಾಲ್ಟ್ ಕಿಗರ್(Renault Kiger) ಪ್ರಸ್ತುತ ದೇಶದಲ್ಲಿ ಅತ್ಯಂತ ಕೈಗೆಟುಕುವ ಸಬ್-4 ಮೀಟರ್ ಕಾಂಪ್ಯಾಕ್ಟ್ ಎಸ್‍ಯುವಿಯಾಗಿದೆ.

ರೆನಾಲ್ಟ್ ಕಿಗರ್ ಮಾದರಿಯು ಬೆಲೆ ಮತ್ತು ವಿನ್ಯಾಸದಂತಹ ವಿವಿಧ ಕಾರಣಗಳಿಗಾಗಿ ಸಾಕಷ್ಟು ಜನಪ್ರಿಯವಾಗಿದೆ. ಈ ರೆನಾಲ್ಟ್ ಕಿಗರ್ ಕಾರಿನ ಅಕ್ಸೆಸರೀಸ್ ಅನ್ನು ಕೂಡ ಕಂಪನಿಯು ಪರಿಚಯಿಸಿದೆ. ರೆನಾಲ್ಟ್ ಇಂಡಿಯಾ ತಿಂಗಳುಗಳ ಹಿಂದೆ ದಕ್ಷಿಣ ಆಫ್ರಿಕಾದ ಮಾರುಕಟ್ಟೆಗೆ ಎಸ್‌ಯುವಿಯ ರಫ್ತುಗಳನ್ನು ಆರಂಭಿಸಿತು. ಇದರಲ್ಲಿ ಬ್ರ್ಯಾಂಡ್ ಚೆನ್ನೈ ಬಂದರಿನಿಂದ ಮೊದಲ ಬ್ಯಾಚ್ 760 ಕಿಗರ್ ಎಸ್‌ಯುವಿಗಳನ್ನು ಕಳುಹಿಸಿತು. ನೇಪಾಳದ ನಂತರ ದಕ್ಷಿಣ ಆಫ್ರಿಕಾವು ಕಿಗರ್‌ಗೆ ಎರಡನೇ ರಫ್ತು ಮಾರುಕಟ್ಟೆಯಾಗಿದೆ.

ಈ ರೆನಾಲ್ಟ್ ಕಿಗರ್ ಕಾರನ್ನು 17 ಇಂಚಿನ ಆಫ್ಟರ್ ಮಾರ್ಕೆಟ್ ಅಲಾಯ್ ವ್ಹೀಲ್ ಗಳನ್ನು ಅಳವಡಿಸಿದ್ದಾರೆ. ಈ ಮಾಡಿಫೈ ರೆನಾಲ್ಟ್ ಕಿಗರ್ ಕಾರಿನ ವೀಡಿಯೊವನ್ನು ಆಟೋ ವ್ಲಾಗ್ ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದು ಬಹುಶಃ ಇಂಟರ್ನೆಟ್‌ನಲ್ಲಿ 17 ಇಂಚಿನ ಅಲಾಯ್ ವ್ಹೀಲ್ ಗಳನ್ನು ಪಡೆಯುವ ಮೊದಲ ರೆನಾಲ್ಟ್ ಕಿಗರ್ ವೀಡಿಯೊ ಆಗಿದೆ.

ಇಂತಹ ಮಾಡಿಫೈ ರೆನಾಲ್ಟ್ ಕಿಗರ್ ದೇಶದ ಮೊದಲ ಕಿಗರ್ ಎಂದು ವೀಡಿಯೊದಲ್ಲಿ ಹೇಳುತ್ತಿದೆ. ವೀಡಿಯೊದಿಂದ ಇದು ರೆನಾಲ್ಟ್ ಕಿಗರ್ ಬೇಸ್ ರೂಪಾಂತರವಲ್ಲ ಎಂಬುದು ಸ್ಪಷ್ಟವಾಗಿದೆ. ಕೇವಲ 17 ಇಂಚಿನ ಅಲಾಯ್ ವ್ಹೀಲ್ ಅನ್ನು ಸೇರಿಸುವುದರಿಂದ ಕಾರಿನ ನಿಲುವು ಬದಲಾಗಿದೆ. ಇದು ಈಗ ಸ್ಟಾಕ್ ಆವೃತ್ತಿಗಿಂತ ಎತ್ತರವಾಗಿ ಕಾಣುತ್ತದೆ. ಈ ವ್ಹೀಲ್ ಗಳು ಉತ್ತಮವಾಗಿ ಕಾಣುತ್ತದೆ ಆದರೆ, ಈ ಎಸ್‍ಯುವಿಯ ರೈಡ್ ಗುಣಮಟ್ಟ ಮತ್ತು ನಿರ್ವಹಣೆಯ ಬಗ್ಗೆ ನಾವು ಹೇಳಬಹುದೇ ಎಂದು ನಮಗೆ ಖಚಿತವಿಲ್ಲ.

ರೆನಾಲ್ಟ್ ಕಿಗರ್ ಕಾರು ಪ್ರತಿಸ್ಪರ್ಧಿಮಾದರಿಗಳಂತೆ ಹಲವಾರು ಆಕರ್ಷಕ ಫೀಚರ್ಸ್ ಗಳನ್ನು ಒಳಗೊಂಡಿವೆ. ಈ ಕಿಗರ್ ಕಾರಿನಲ್ಲಿ ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್ ಮತ್ತು ರೂಫ್‌ರೈಲ್ಸ್ ಅನ್ನು ಹೊಂದಿದೆ.

ಇನ್ನು ಈ ಕಾರಿನಲ್ಲಿ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿದ್ದು ಕಾರಿನ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಮತ್ತು 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಡಿಸ್‌ಪ್ಲೇ ಹೊಂದಿದೆ.

ಇದರೊಂದಿಗೆ ಈ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌ರೂಫ್ ಅನ್ನು ಒಳಗೊಂಡಿದೆ.

ಇನ್ನು ನಾಲ್ಟ್ ಕಿಗರ್ ಕಾರಿನಲ್ಲಿ 1.0-ಲೀಟರ್ ನ್ಯಾಚುರಲ್ ಆಸ್ಪರೆಟೆಡ್ ಎಂಜಿನ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಸಾಮಾನ್ಯ ಪೆಟ್ರೋಲ್ ಎಂಜಿನ್ 72 ಬಿಹೆಚ್‍ಪಿ ಪವರ್ ಮತ್ತು ಟರ್ಬೋ ಪೆಟ್ರೋಲ್ ಎಂಜಿನ್ 100 ಬಿಜೆಚ್‍ಪಿ ಪವರ್ ಅನ್ನು ಉತ್ಪಾಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಇನ್ನು ರೆನಾಲ್ಟ್ ಇಂಡಿಯಾ ಕಂಪನಿಯು ಭಾರತಕ್ಕೆ ಕಾಲಿಟ್ಟು 10 ವರ್ಷಗಳು ಪೂರ್ತಿಯಾಗಿವೆ. ಈ ರೆನಾಲ್ಟ್ ಕಿಗರ್ ಬಜೆಟ್ ಬೆಲೆಯೊಂದಿಗೆ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆದುಕೊಂಡಿದೆ. ಹೊಸ ಕಾರಿನ ಮೂಲಕ ರೆನಾಲ್ಟ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಈ ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯು ಮಾದರಿಯು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಒಂದೇ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಗೊಳ್ಳುವುದರ ವಿಭಿನ್ನ ಗ್ರಾಹಕರನ್ನು ಸೆಳೆಯಲ್ಲಿ ಯಶಸ್ವಿಯಾಗುತ್ತಿವೆ.

ಇನ್ನು ಶೀಘ್ರದಲ್ಲೇ ಮೇಡ್ ಇನ್-ಇಂಡಿಯಾ ಕಿಗರ್ ಕಾರು ಸಾರ್ಕ್ ಪ್ರದೇಶದ ಇತರ ದೇಶಗಳಲ್ಲಿಯೂ ಲಭ್ಯವಾಗಲಿದೆ. ನೇಪಾಳದಲ್ಲಿ ರೆನಾಲ್ಟ್ ಕಿಗರ್ ಗ್ರಾಹಕರಿಗೆ ಬ್ರ್ಯಾಂಡ್‌ನ ಡೀಲರ್ - ಅಡ್ವಾನ್ಸ್ಡ್ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ ಲಭ್ಯವಾಗಲಿದೆ, ಇದು ವೈಶಾಲ್ ಗ್ರೂಪ್‌ನ ಒಂದು ಭಾಗವಾಗಿದೆ. ಭಾರತದಿಂದಲೇ ರೆನಾಲ್ಟ್ ಕಂಪನಿಯು ಈಗಾಗಲೇ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ವಿವಿಧ ಕಾರು ಮಾದರಿಗಳ ರಫ್ತು ಕೈಗೊಳ್ಳುತ್ತಿದೆ. ಇದೀಗ ಕಿಗರ್ ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಸದ್ಯ ಭಾರತದಲ್ಲಿ ಖರೀದಿಗೆ ಲಭ್ಯವಿರುವ ಕಿಗರ್ ಮಾದರಿಯೇ ದಕ್ಷಿಣ ಆಫ್ರಿಕಾದಲ್ಲೂ ಮಾರಾಟವಾಗುತ್ತಿದೆ,

ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ನಿಸ್ಸಾನ್ ಮ್ಯಾಗ್ನೈಟ್, ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್, ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ XUV300 ಎಸ್‍ಯುವಿ ಮಾದರಿಗಳ್ಗಿಗೆ ಪೈಪೋಟಿ ನೀಡುತ್ತದೆ.
Image Courtesy: Plati Alloy Wheels


Click it and Unblock the Notifications








