ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ರೆನಾಲ್ಟ್ ಕಂಪನಿಯು ಭಾರತದಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟ ಕಾರ್ಯಾಚರಣೆ ಆರಂಭಿಸಿ ಯಶಸ್ವಿ ಹತ್ತು ವರ್ಷ ಪೂರೈಸಿದ್ದು, ಹತ್ತನೇ ಸಂಭ್ರಮಕ್ಕಾಗಿ ಕಂಪನಿಯು ಕಿಗರ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಒಂದನ್ನು ಬಿಡುಗಡೆ ಮಾಡಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

2008ರಲ್ಲಿ ಮೊದಲ ಬಾರಿಗೆ ಭಾರತ ಪ್ರವೇಶಿಸಿದ ರೆನಾಲ್ಟ್ ಕಂಪನಿಯು ನಿಸ್ಸಾನ್ ಜೊತೆಗೂಡಿ ಕಾರು ಉತ್ಪಾದನಾ ಯೋಜನೆಗೆ ಚಾಲನೆ ನೀಡಿತ್ತು. 2008ರಲ್ಲೇ ಕಾರು ಉತ್ಪಾದನಾ ಯೋಜನೆ ಆರಂಭವಾಗಿದ್ದರೂ 2011ರಲ್ಲಿ ಮೊದಲ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿ ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಪ್ರವೇಶಿಸಿತ್ತು. ಭಾರತದಲ್ಲಿ ಮೊದಲ ಕಾರು ಮಾದರಿಯಾಗಿ ಫ್ಲೂಯೆನ್ಸ್ ಸೆಡಾನ್ ಬಿಡುಗಡೆ ಮಾಡಿದ ರೆನಾಲ್ಟ್ ಇಂಡಿಯಾ ಕಂಪನಿಯು ತದನಂತರ ಹಲವಾರು ಕಾರು ಮಾದರಿಗಳೊಂದಿಗೆ ಇದೀಗ ಹೊಸದಾಗಿ ಕಿಗರ್ ಆವೃತ್ತಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಹತ್ತನೇ ವರ್ಷದ ಸಂಭ್ರಮಕ್ಕಾಗಿ ರೆನಾಲ್ಟ್ ಕಂಪನಿಯು ಕಿಗರ್ ಕಾರಿನಲ್ಲಿ ಆರ್‌ಎಕ್ಸ್‌ಟಿ ಆಪ್ಷನ್ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಮಧ್ಯಮ ಕ್ರಮಾಂಕದಲ್ಲಿ ಬಿಡುಗಡೆಯಾಗಿರುವ ಹೊಸ ವೆರಿಯೆಂಟ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7.37 ಲಕ್ಷ ಬೆಲೆ ಹೊಂದಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಕಿಗರ್ ಆ್ಯನಿವರ್ಸರಿ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಕೆಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ರೂ. 15 ಸಾವಿರದಷ್ಟು ದುಬಾರಿಯಾಗಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಆರ್‌ಎಕ್ಸ್‌ಟಿ ಆಪ್ಷನ್‌ನಲ್ಲಿ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಬಹುತೇಕ ತಾಂತ್ರಿಕ ಅಂಶಗಳನ್ನು ನೀಡಲಾಗಿದ್ದು, ಹೆಚ್ಚುವರಿಯಾಗಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಜೊತೆಗೆ 8-ಇಂಚಿನ ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಮತ್ತು 2.5 ಅಡ್ವಾನ್ಸ್ ಏರ್‌ಫಿಲ್ಟರ್ ಹೊಂದಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಹೊಸ ವೆರಿಯೆಂಟ್ ಖರೀದಿದಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಆರಂಭವಾಗಿದ್ದು, ಶೀಘ್ರದಲ್ಲೇ ಆ್ಯನಿವರ್ಸರಿ ಆವೃತ್ತಿಯು ವಿತರಣೆಯಾಗಲಿದೆ. ಇನ್ನು ಕಿಗರ್ ಕಾರು ಬಿಡುಗಡೆಯ ನಂತರ ಹಲವಾರು ಹೊಸ ದಾಖಲೆಗಳೊಂದಿಗೆ ಮಾರಾಟವಾಗುತ್ತಿದ್ದು, ರೆನಾಲ್ಟ್ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಡುತ್ತಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಆ್ಯನಿವರ್ಸರಿ ಆವೃತ್ತಿಯೊಂದಿಗೆ ಕಿಗರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.64 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.09 ಲಕ್ಷ ಬೆಲೆ ಹೊಂದಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಪ್ರತಿಸ್ಪರ್ಧಿ ಕಾರುಗಳಿಗೆ ಸಮನಾಗಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸೆಳೆಯುತ್ತಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳು ಒಂದೇ ಪ್ಲ್ಯಾಟ್‌ಫಾರ್ಮ್, ಎಂಜಿನ್ ಮತ್ತು ಬೆಲೆ ಕೂಡಾ ಒಂದೇ ಮಾದರಿಯಲ್ಲಿದ್ದು, ವಿಭಿನ್ನವಾದ ವಿನ್ಯಾಸದೊಂದಿಗೆ ತಮ್ಮದೆ ಆದ ಜನಪ್ರಿಯತೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

ಹತ್ತನೇ ವರ್ಷದ ಸಂಭ್ರಮ: ಕಿಗರ್‌ನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ ರೆನಾಲ್ಟ್

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

Most Read Articles

Kannada
English summary
Renault kiger rxt o variant launched in india
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X