ಕೋವಿಡ್ ಎಫೆಕ್ಟ್: ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್‌ಡೌನ್ ಜಾರಿಗೆ ತರಲಾಗಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮವಾಗಿ ಆಟೋ ಉದ್ಯಮವು ಸಂಪೂರ್ಣವಾಗಿ ಸ್ತಬ್ಧಗೊಂಡಿದೆ.

ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಿಸಿಕೊಳ್ಳುತ್ತಿದ್ದ ಆಟೋ ಉದ್ಯಮವು ಇದೀಗ ಮತ್ತೊಮ್ಮೆ ಲಾಕ್‌ಡೌನ್ ಸಂಕಷ್ಟ ಎದುರಿಸುತ್ತಿದ್ದು, ದೇಶಾದ್ಯಾಂತ ನೆಲೆಗೊಂಡಿರುವು ಹಲವು ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದರೆ ಇನ್ನು ಕೆಲವು ಕಂಪನಿಗಳು ಉತ್ಪಾದನೆಯನ್ನು ಬಂದ್ ಮಾಡಿವೆ. ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಲಾಕ್‌ಡೌನ್ ನಿಯಮಗಳು ಉದ್ಯಮ ಚಟುವಟಿಕೆಗಳಿಗೆ ಬಿಸಿತುಪ್ಪವಾಗಿ ಪರಿಣಿಮಿಸಿದೆ.

ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ಕೋವಿಡ್ 2ನೇ ಅಲೆ ಹೆಚ್ಚಳ ನಂತರ ಪ್ರಮುಖ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ವಾಹನ ಮಾರಾಟದಲ್ಲೂ ಕೂಡಾ ಹೊಸ ತಂತ್ರಗಳನ್ನು ಅಳವಡಿಸಿಕೊಂಡು ವೈರಸ್ ಹರಡುವಿಕೆ ತಡೆಯೊಂದಿಗೆ ಉದ್ಯಮ ವ್ಯವಹಾರ ಕೈಗೊಳ್ಳುತ್ತಿವೆ.

ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ಇದರ ನಡುವೆ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ ಪ್ರಮುಖ ವಾಹನ ಕಂಪನಿಗಳು ಹೊಸ ವಾಹನ ಉತ್ಪಾದನೆಯನ್ನು ಸುಮಾರು ಒಂದು ವಾರ ಬಂದ್ ಮಾಡುವುದಾಗಿ ಘೋಷಣೆ ಮಾಡಿದ್ದವು.

ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ಈ ತಿಂಗಳ ಮಧ್ಯಂತರದಲ್ಲಿ ವಾಹನ ಉತ್ಪಾದನೆ ಬಂದ್ ಮಾಡಿದ್ದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ಈ ತಿಂಗಳ ಕೊನೆಯ ವಾರದಲ್ಲಿ ಲಾಕ್‌ಡೌನ್‌ನಿಂದ ವಿನಾಯ್ತಿ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದವು. ಆದರೆ ವಿವಿಧ ರಾಜ್ಯ ಸರ್ಕಾರಗಳು ಉತ್ಪಾದನಾ ವಲಯಕ್ಕೆ ಕೆಲವು ವಿನಾಯ್ತಿ ನೀಡಿದರೂ ಲಾಕ್‌ಡೌನ್ ಕಠಿಣ ನಿಯಮಗಳಿಂದ ಹಿಂದೆ ಸರಿಯದೆ ಇನ್ನು ಎರಡು ವಾರಗಳ ಕಾಲ ನಿರ್ಬಂಧ ಹೇರಿವೆ.

ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ಲಾಕ್‌ಡೌನ್ ಮುಂದುವರಿಸಿರುವ ಪರಿಣಾಮ ನಿಸ್ಸಾನ್ ಮತ್ತು ರೆನಾಲ್ಟ್ ಕಂಪನಿಗಳು ತಮ್ಮ ಸಹಭಾಗಿತ್ವ ಉದ್ಯಮ ಕಾರ್ಯಾಚರಣೆಯನ್ನು ಈ ತಿಂಗಳ 30ರ ತನಕ ಬಂದ್ ಮಾಡಿದ್ದು, ಚೆನ್ನೈ ಕೈಗಾರಿಕಾ ಉಪನಗರವಾಗಿರುವ ಒರಗಡಂನಲ್ಲಿರುವ ಕಾರು ಉತ್ಪಾದನಾ ಘಟಕವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ಕಾರ್ಮಿಕರ ಸುರಕ್ಷತೆಯ ದೃಷ್ಠಿಯಿಂದ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಬಗ್ಗೆ ಸ್ಪಷನೆ ನೀಡಿರುವ ಕಂಪನಿಯು ಉದ್ಯೋಗಿಗಳಿಗೆ ಗರಿಷ್ಠ ಪರಿಹಾರ ಒದಗಿಸುವ ವಿಮೆಗಳನ್ನು ವಿತರಿಸಿದ್ದು, ಕೋವಿಡ್‌ಗೆ ಬಲಿಯಾಗಿರುವ ಉದ್ಯೋಗಿಗಳಿಗೆ ಗರಿಷ್ಠ ಪ್ರಮಾಣದ ಪರಿಹಾರಗಳನ್ನು ತೆಗೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ಇದಲ್ಲದೇ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಹಕರ ಸೇವೆಗಳಿಗೂ ತಡೆನೀಡಿರುವ ನಿಸ್ಸಾನ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಉತ್ಪಾದನೆ ಮತ್ತು ಸೇವೆಗಳಿಗೆ ಪುನಾರಂಭಿಸುವ ಭರವಸೆ ನೀಡಿದ್ದು, ಈ ತಿಂಗಳಾಂತ್ಯಕ್ಕೆ ಕೊನೆಗೊಳ್ಳಲಿರುವ ವಾರಂಟಿ ಅವಧಿಯನ್ನು ಮುಂದಿನ ಜುಲೈ ಅಂತ್ಯದ ತನಕ ಮುಂದೂಡಿಕೆ ಮಾಡಿದೆ.

ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ಲಾಕ್‌ಡೌನ್ ಅವಧಿಯಲ್ಲಿ ಕೊನೆಗೊಳ್ಳಲಿರುವ ವಾಹನಗಳ ವಾರಂಟಿ ಅವಧಿಯನ್ನು ಬಹುತೇಕ ವಾಹನ ತಯಾಕರ ಕಂಪನಿಗಳು ಈಗಾಗಲೇ ವಿಸ್ತರಣೆ ಮಾಡಿದ್ದು, ಹೊಸ ವಾಹನಗಳ ನಿಗದಿತ ಅವಧಿಯ ಸೇವೆಗಳನ್ನು ಪಡೆಯಲು ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ವಾರಂಟಿ ಅವಧಿಯನ್ನು ವಿಸ್ತರಿಸಲಾಗುತ್ತಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಕಾರು ಉತ್ಪಾದನಾ ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ರೆನಾಲ್ಟ್-ನಿಸ್ಸಾನ್

ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳಲ್ಲಿ ಸಾಕಷ್ಟು ಅಡೆತಡೆಗಳು ಉಂಟಾಗುತ್ತಿವೆ. ಹೀಗಾಗಿ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳಬೇಕಿರುವ ಹೊಸ ಬೈಕ್‌ಗಳ ವಾರಂಟಿ ಅವಧಿಯನ್ನು ಜುಲೈ 31ರ ತನಕ ಮುಂದೂಡಲಾಗಿದೆ.

Most Read Articles

Kannada
English summary
Renault-Nissan Shuts Down Production At Oragadam Plant Temporarily. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X