ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಇಂಡಿಯಾ ಕಂಪನಿಯ ಇದೇ ತಿಂಗಳು 15ರಂದು ತನ್ನ ಬಹುನೀರಿಕ್ಷಿತ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ.

ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಮೂಲಕ ಮಾರುಕಟ್ಟೆಯಲ್ಲಿರುವ ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿರುವ ರೆನಾಲ್ಟ್ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡುತ್ತಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಹೊಸ ಮಾದರಿಯ ಫೀಚರ್ಸ್‌ಗಳೊಂದಿಗೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗುತ್ತಿದೆ.

ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಕಂಪನಿಯು ಕಿಗರ್ ಕಾರಿನ ಬೆಲೆ ಮಾಹಿತಿಯನ್ನು ಹೊರತುಪಡಿಸಿ ಬಹುತೇಕ ತಾಂತ್ರಿಕ ಅಂಶಗಳನ್ನು ಬಹಿರಂಗಪಡಿಸಿದ್ದು, ಇದೀಗ ಹೊಸ ಕಾರು ಒಟ್ಟು ಆರು ಸಿಂಗಲ್ ಟೋನ್ ಮತ್ತು ಎರಡು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದಿರಲಿದೆ ಎಂಬ ಮಾಹಿತಿ ಹಂಚಿಕೊಂಡಿದೆ.

ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರನ್ನು ರೆನಾಲ್ಟ್ ಕಂಪನಿಯು ರೆಡಿಯೆಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಐಸ್ ಕೂಲ್ ವೈಟ್, ಮೂನ್‌ಲೈಟ್ ಗ್ರೇ, ಪ್ಲಾನೆಟ್ ಗ್ರೇ ಮತ್ತು ಮಹೊಗನಿ ಬ್ರೌನ್ ಬಣ್ಣಗಳ ಆಯ್ಕೆ ನೀಡಿದ್ದು, ಇದೇ ಬಣ್ಣಗಳಲ್ಲಿ ಎರಡು ಡ್ಯುಯಲ್ ಟೋನ್ ಆಯ್ಕೆ ಹೊಂದಿರಲಿದೆ.

ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಇನ್ನ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾಗಿರುವ ಕಿಗರ್ ಆವೃತ್ತಿಯು ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯಲಿದ್ದು, ಹೊಸ ಕಾರಿನಲ್ಲಿ ಬ್ಲ್ಯಾಕ್ ಔಟ್ ಹೊಂದಿರುವ ಸಿ ಪಿಲ್ಲರ್, ಸ್ಪೋಟಿಯಾಗಿರುವ ಸ್ಪಾಯ್ಲರ್ ಆಕರ್ಷಕವಾಗಿದೆ.

ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5 -ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಆಕರ್ಷಕ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಮಾದರಿಯ ಜೋಡಣೆ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

Most Read Articles

Kannada
English summary
Renault Officially Revealed The Colour Options For Kiger. Read in Kannada.
Story first published: Thursday, February 11, 2021, 23:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X