ನೇಪಾಳಕ್ಕೆ ಮೇಡ್ ಇನ್ ಇಂಡಿಯಾ ಕಿಗರ್ ಕಾರ್ ರಫ್ತು ಪ್ರಾರಂಭಿಸಿದ ರೆನಾಲ್ಟ್
ರೆನಾಲ್ಟ್ ಕಂಪನಿಯು ತನ್ನ ಕಿಗರ್ ಮಾದರಿಯನ್ನು ನೇಪಾಳಕ್ಕೆ ರಫ್ತು ಮಾಡಲು ಪ್ರಾರಂಭಿಸಿದೆ. ಭಾರತದಲ್ಲಿ ತಯಾರಿಸಿದ ಸ್ಮಾರ್ಟ್, ಸ್ಪೋರ್ಟಿ ಲುಕ್ ಅನ್ನು ಹೊಂದಿರುವ ಮೇಡ್ ಇನ್ ಇಂಡಿಯಾ ಕಿಗರ್ ಕಾರನ್ನು ನೇಪಾಳಕ್ಕೆ ರಫ್ತು ಮಾಡುತ್ತಿದೆ, ಶೀಘ್ರದಲ್ಲೇ ಮೇಡ್ ಇನ್-ಇಂಡಿಯಾ ಕಿಗರ್ ಸಾರ್ಕ್ ಪ್ರದೇಶದ ಇತರ ದೇಶಗಳಲ್ಲಿಯೂ ಲಭ್ಯವಾಗಲಿದೆ.

ನೇಪಾಳದಲ್ಲಿ ರೆನಾಲ್ಟ್ ಕಿಗರ್ ಗ್ರಾಹಕರಿಗೆ ಬ್ರ್ಯಾಂಡ್‌ನ ಡೀಲರ್ - ಅಡ್ವಾನ್ಸ್ಡ್ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ ಲಭ್ಯವಾಗಲಿದೆ, ಇದು ವೈಶಾಲ್ ಗ್ರೂಪ್‌ನ ಒಂದು ಭಾಗವಾಗಿದೆ. ಇನ್ನು ರೆನಾಲ್ಟ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರಾದ ವೆಂಕಟ್ ರಾಮ್ ಮಾತನಾಡಿ, ಭಾರತದಲ್ಲಿ ಕಿಗರ್ ಕಾರು ಬಿಡುಗಡೆಯಾದ ಬಳಿಕ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇನ್ನು ಕಿಗರ್ ರಫ್ತು ಪ್ರಾರಂಭವು ರೆನಾಲ್ಟ್ ಮೇಕ್ ಇನ್ ಇಂಡಿಯಾ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ.

ಇದು ಭಾರತದ ವಿನ್ಯಾಸ, ಎಂಜಿನಿಯರಿಂಗ್ ಮತ್ತು ಉತ್ಪಾದನಾ ಸಾಮರ್ಥ್ಯಗಳ ಸಾಮರ್ಥ್ಯವನ್ನು ತೋರಿಸುತ್ತದೆ. ನಾವು ಈ ಬೆಳವಣಿಗೆಯ ಆವೇಗವನ್ನು ಮುಂದುವರಿಸುತ್ತೇವೆ. ಸಾರ್ಕ್ ಪ್ರದೇಶದ ಇತರ ದೇಶಗಳಿಗೆ ಕಿಗರ್ ರಫ್ತು ವಿಸ್ತರಿಸುತ್ತೇವೆ ಎಂದು ಹೇಳಿದರು

ಬಜೆಟ್ ಬೆಲೆಯೊಂದಿಗೆ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆದುಕೊಂಡಿದೆ. ಹೊಸ ಕಾರಿನ ಮೂಲಕ ರೆನಾಲ್ಟ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ರೆನಾಲ್ಟ್ ಕಿಗರ್ ಕಾಂಪ್ಯಾಕ್ಟ್ ಎಸ್‍ಯುವಿಯು ಮಾದರಿಯು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಒಂದೇ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಗೊಳ್ಳುವುದರ ವಿಭಿನ್ನ ಗ್ರಾಹಕರನ್ನು ಸೆಳೆಯಲ್ಲಿ ಯಶಸ್ವಿಯಾಗುತ್ತಿವೆ.

ಇನ್ನು ಈ ಕಾರಿನಲ್ಲಿ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಎಂಜಿನ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಸಾಮಾನ್ಯ ಪೆಟ್ರೋಲ್ ಎಂಜಿನ್ 72 ಬಿಹೆಚ್‍ಪಿ ಪವರ್ ಮತ್ತು ಟರ್ಬೋ ಪೆಟ್ರೋಲ್ ಎಂಜಿನ್ 100 ಬಿಜೆಚ್‍ಪಿ ಪವರ್ ಅನ್ನು ಉತ್ಪಾಸುತ್ತದೆ. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ರೆನಾಲ್ಟ್ ಕಿಗರ್ ಕಾರು ಪ್ರತಿಸ್ಪರ್ಧಿಮಾದರಿಗಳಂತೆ ಹಲವಾರು ಆಕರ್ಷಕ ಫೀಚರ್ಸ್ ಹೊಂದಿದ್ದು, ಈ ಕಿಗರ್ ಕಾರಿನಲ್ಲಿ ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್ ಮತ್ತು ರೂಫ್‌ರೈಲ್ಸ್ ಅನ್ನು ಹೊಂದಿದೆ.

ಇನ್ನು ಈ ಕಾರಿನಲ್ಲಿ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿದ್ದು ಕಾರಿನ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಮತ್ತು 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ ಅನ್ನು ಹೊಂದಿದೆ.

ಇದರೊಂದಿಗೆ ಈ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌ರೂಫ್ ಅನ್ನು ಒಳಗೊಂಡಿದೆ


Click it and Unblock the Notifications








