ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ರೆನಾಲ್ಟ್ ಟ್ರೈಬರ್

ರೆನಾಲ್ಟ್ ಇಂಡಿಯಾ ಕಂಪನಿಯು ಮಿನಿ ಎಂಪಿವಿ ಕಾರು ಮಾದರಿಯಾದ ಟ್ರೈಬರ್ ಮಾರಾಟದೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಯ ಮೂಲಕ ಗ್ರಾಮೀಣ ಭಾಗದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

ಹೊಸ ಟ್ರೈಬರ್ ಕಾರು ಮಾದರಿಯು ಭಾರತದಲ್ಲಿ 2019ರ ಅಗಸ್ಟ್‌ನಲ್ಲಿ ಬಿಡುಗಡೆಗೊಂಡ ನಂತರ ಇದುವರೆಗೆ ಸುಮಾರು 67 ಸಾವಿರ ಯುನಿಟ್ ಮಾರಾಟಗೊಂಡಿದ್ದು, ಪ್ರತಿ ತಿಂಗಳು ಸರಾಸರಿಯಾಗಿ 3,500 ಯನಿಟ್‌ನಿಂದ 4 ಸಾವಿರ ಯುನಿಟ್ ಮಾರಾಟಗೊಳ್ಳುತ್ತಿದೆ. ಗ್ರಾಮೀಣ ಭಾಗದ ಗ್ರಾಹಕರನ್ನು ಗುರಿಯಾಗಿಸಿ ಟೈರ್ 2, ಟೈರ್ 3 ನಗರಗಳಲ್ಲಿ ತೆರೆಯಲಾದ ಹೊಸ ಕಾರು ಮಾರಾಟ ಸೌಲಭ್ಯವು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಶೇ. 37ರಷ್ಟು ಗ್ರಾಮೀಣ ಭಾಗದ ಗ್ರಾಹಕರೆ ಟ್ರೈಬರ್ ಕಾರಿನ ಮಾಲೀಕತ್ವವನ್ನು ಪಡೆದುಕೊಂಡಿದ್ದಾರೆ.

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

ಟ್ರೈಬರ್ ಕಾರು ಮ್ಯಾನುವಲ್ ಜೊತೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಂಡ ನಂತರ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.20 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು 7.50 ಲಕ್ಷ ಬೆಲೆ ಪಡೆದುಕೊಂಡಿರುತ್ತದೆ.

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

2015ರಲ್ಲಿ ಬಿಡುಗಡೆಯಾದ ಕ್ವಿಡ್ ಮಾದರಿಗೆ ಸರಿಸಮನಾಗಿ ಮಾರಾಟ ಶ್ರೇಣಿ ಹೊಂದಿರುವ ಟ್ರೈಬರ್ ಕಾರು ಎಎಂಟಿ ಮಾದರಿಯ ನಂತರ ಮತ್ತಷ್ಟು ಬೇಡಿಕೆ ಪಡೆದುಕೊಳ್ಳತ್ತಿದ್ದು, ಹೊಸ ಮಾರಾಟ ಮಳಿಗೆಗಳು ಮತ್ತು ಗ್ರಾಹಕರ ಸೇವಾ ಕೇಂದ್ರಗಳ ನಿರ್ಮಾಣದ ಮೇಲೆ ಹೆಚ್ಚಿನ ಹೂಡಿಕೆ ಮಾಡಿದ ಪರಿಣಾಮವೇ ರೆನಾಲ್ಟ್ ಕಾರುಗಳ ಮಾರಾಟವು ಬೆಳವಣಿಗೆ ಸಾಧಿಸಲು ಪ್ರಮುಖ ಕಾರಣವಾಗಿದೆ.

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

ಟೈರ್ 2, ಟೈರ್ 3 ನಗರಗಳಲ್ಲಿ ತೆರೆಯಲಾಗುತ್ತಿರುವ ಹೊಸ ಕಾರು ಮಾರಾಟ ಮಳಿಗೆಗಳು ರೆನಾಲ್ಟ್ ಹೊಸ ಕಾರುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಸಾಧಿಸಲು ಪ್ರಮುಖ ಕಾರಣವಾಗಿದ್ದು, ಸದ್ಯ ಹೊಸದಾಗಿ ಬಿಡುಗಡೆಯಾಗಿರುವ ಕಿಗರ್ ಕಾರು ಕೂಡಾ ಇನ್ನಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ. ಇನ್ನು ರೆನಾಲ್ಟ್ ಇಂಡಿಯಾ ಕಂಪನಿಯು 2021ರ ಜನವರಿ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರೆನಾಲ್ಟ್ ಕಂಪನಿಯು ಕಳೆದ ವರ್ಷದ ಜನವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ತುಸು ಮುನ್ನಡೆ ಕಾಯ್ದುಕೊಂಡಿದೆ.

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

2020ರ ಜನವರಿ ಅವಧಿಯಲ್ಲಿ ಒಟ್ಟು 7,805 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ರೆನಾಲ್ಟ್ ಕಂಪನಿಯು 2021ರ ಜನವರಿಯಲ್ಲಿ 8,209 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಶೇ.5 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

ಆದರೆ ತಿಂಗಳ ವಾಹನ ಮಾರಾಟದಲ್ಲಿ ಕಳೆದ ಡಿಸೆಂಬರ್‌ಗಿಂತ ಶೇ.16 ರಷ್ಟು ಕುಸಿತ ಕಂಡಿರುವ ರೆನಾಲ್ಟ್ ಕಂಪನಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

ಸದ್ಯ ಕಾರು ಮಾರಾಟದಲ್ಲಿ ಎಂಟನೇ ಸ್ಥಾನದಲ್ಲಿರುವ ರೆನಾಲ್ಟ್ ಕಂಪನಿಯು ಬಿಡುಗಡೆಯಾಗಲಿರುವ ಕಿಗರ್ ಹೊಸ ಕಾರಿನ ಮೂಲಕ ಪ್ರತಿ ತಿಂಗಳು ಒಟ್ಟು 13 ಸಾವಿರದಿಂದ 15 ಸಾವಿರ ಯುನಿಟ್ ಮಾರಾಟ ಗುರಿಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

ರೆನಾಲ್ಟ್ ಕಂಪನಿಯ ಕಾರು ಮಾರಾಟ ಪ್ರಮುಖ ಪಾತ್ರವಹಿಸಲಿರುವ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಮಾರುತಿ ಸುಜುಕಿ ಮತ್ತು ಹ್ಯುಂಡೈ ಕಂಪನಿಗಳ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

ಗ್ರಾಹಕರ ಬೇಡಿಕೆಯೆಂತೆ ಸದ್ಯ ಕ್ವಿಡ್ ಹ್ಯಾಚ್‌ಬ್ಯಾಕ್, ಟ್ರೈಬರ್ ಮಿನಿ ಎಂಪಿವಿ ಮತ್ತು ಡಸ್ಟರ್ ಎಸ್‌ಯುವಿ ಕಾರುಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಕಿಗರ್ ಹೊಸ ಕಾರು ಬಿಡುಗಡೆಯೊಂದಿಗೆ ಕಾರುಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಗ್ರಾಮೀಣ ಭಾಗದಲ್ಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡ ಟ್ರೈಬರ್

ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಅತಿ ಕಡಿಮೆ ಬೆಲೆಯೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Renault Triber MPV Is The Best-Selling Models Indian Line-Up, Total Sales Come From Rural And Non-Urban Markets.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X