ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಏರಿಕೆ ಸಾಧ್ಯತೆ!

ಭಾರತೀಯ ಪ್ರಯಾಣಿಕರ ವಾಹನಗಳ ಮಾರಾಟ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ. ಅದರೆ ಇಂಡಿಯಾ ರೇಟಿಂಗ್ಸ್ ಮತ್ತು ರಿಸರ್ಚ್ ಪ್ರಕಾರ, ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟ ಪ್ರಮಾಣವು ಈ ತಿಂಗಳಿನಿಂದ ಬೆಳವಣಿಗೆಯಾಗಲಿದೆ.

ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಏರಿಕೆ ಸಾಧ್ಯತೆ!

ವಾಹನ ಉತ್ಪಾದನಾ ಘಟಕಗಳಲ್ಲಿನ ಉತ್ಪಾದನಾ ಚಟುವಟಿಕೆಗಳು ಪುನರಾರಂಭಗೊಂಡ ನಂತರ, ಹಲವು ರಾಜ್ಯಗಳಲ್ಲಿ ವಿಧಿಸಿರುವ ಲಾಕ್‌ಡೌನ್‌ಗಳನ್ನು ಕ್ರಮೇಣ ಹಿಂತೆಗೆದುಕೊಳ್ಳಲಾಗುತ್ತದೆ ಮತ್ತು ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಳ್ಳುತ್ತವೆ. ಪ್ರಯಾಣಿಕರ ವಾಹನಗಳ ಬೇಡಿಕೆಯು ಈ ತಿಂಗಳು ಹೆಚ್ಚಾಗುವ ಸಾಧ್ಯತೆಗಳಿದೆ. ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟ ಪ್ರಮಾಣವು ಜೂನ್ 2021 ರಲ್ಲಿ ತಿಂಗಳಿಗೊಮ್ಮೆ ಬೆಳವಣಿಗೆಯಾಗಲಿದೆ ಎಂದು ಇಂಡಿಯಾ ರೇಟಿಂಗ್ಸ್ ಮತ್ತು ರಿಸರ್ಚ್ ಮುನ್ಸೂಚನೆ ನೀಡಿದೆ.

ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಏರಿಕೆ ಸಾಧ್ಯತೆ!

ರಿಸರ್ಚ್ ಸಂಸ್ಥೆ ಪ್ರಕಾರ, ಈ ವರ್ಷದ ಮೇ ತಿಂಗಳಲ್ಲಿ ಕರೋನಾ ಎರಡನೇ ಅಲೆಯ ಆರ್ಭಟದಿಂದ ಪ್ರಯಾಣಿಕರ ವಾಹನಗಳ ಮಾರಾಟದ ಮೇಲೆ ಭಾರೀ ಪರಿಣಾಮವನ್ನು ಬೀರಿದೆ. ಪ್ರಯಾಣಿಕರ ವಾಹನಗಳ ಮಾರಾಟ ಚೇತರಿಕೆ ಹಾದಿಯಲ್ಲಿ ಸಾಗುತ್ತಿರುವಾಗ ಎರಡನೇ ಅಲೆಯಿಂದ ಮತ್ತೆ ಕುಸಿತವನ್ನು ಕಂಡಿತು.

ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಏರಿಕೆ ಸಾಧ್ಯತೆ!

ಎರಡನೇ ಅಲೆಯಿಂದಾಗಿ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಬೇಕಾಯ್ತು. ಕರೋನಾ ಆರ್ಭಟ ಹೆಚ್ಚದ ಕಾರಣ ಸುಮಾರು ಎರಡು ವಾರಗಳವರೆಗೆ ಉತ್ಪಾದನಾ ಘಟಕವನ್ನು ಸ್ಥಗಿಗೊಳಿಸಿದ್ದರು. ಇದರಿಂದ ತಿಂಗಳ ಮಾರಾಟ ಕುಸಿತಕ್ಕೆ ಕಾರಣವಾಗಿವೆ.

ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಏರಿಕೆ ಸಾಧ್ಯತೆ!

ಈ ವರ್ಷದ ಮೇ ತಿಂಗಳಿನಲ್ಲಿ ಪ್ರಯಾಣಿಕರ ವಾಹನಗಳ ಮಾರಾಟ ಶೇ.65% ರಷ್ಟು ಕುಸಿಯಿತು. ಈ ವರ್ಷದ ಏಪ್ರಿಲ್‌ನಲ್ಲಿ ಸಹ, ಲಾಕ್‌ಡೌನ್‌ಗಳಿಂದಾಗಿ ಪ್ರಯಾಣಿಕರ ವಾಹನಗಳ ಮಾರಾಟವು ಶೇ.30 ರಷ್ಟು ಕುಸಿತವನ್ನು ಕಂಡಿತ್ತು.

ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಏರಿಕೆ ಸಾಧ್ಯತೆ!

ಅಧ್ಯಯನಗಳ ಪ್ರಾಕರ, ಈ ತಿಂಗಳಿನಿಂದ ಪ್ರಯಾಣಿಕರ ವಾಹನಗಳ ಮಾರಾಟವು ಹೆಚ್ಚಾಗುವ ಸಾಧ್ಯತೆಗಳಿದೆ. ಅಲ್ಲದೇ ಸಾರ್ವಜನಿಕ ವಾಹನಗಳಲ್ಲಿ ಕಾರೋನಾ ಸೋಂಕಿನ ಹರಡುವಿಕೆ ಸಾಧ್ಯತೆ ಹೆಚ್ಚು ಇರುವುದರಿಂದ ಹೆಚ್ಚಿನ ಜನರು ಓಡಾಡಲು ಹಿಂದೇಟು ಹಾಕುತ್ತಿದ್ದಾರೆ.

ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಏರಿಕೆ ಸಾಧ್ಯತೆ!

ಅಲ್ಲದೇ ಲಾಕ್ ಡೌನ್ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮತ್ತು ಇತರ ಅಗತ್ಯಗಳ ಓಡಾಡಕ್ಕೆ ವಾಹನಗಳ ಅಗತ್ಯವಿದೆ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕ ವಾಹನಗಳ ಓಡಾಡವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ.

ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಏರಿಕೆ ಸಾಧ್ಯತೆ!

ಇದರಿಂದ ಹಲವು ಜನರು ವಾಹನವನ್ನು ಖರೀದಿಸಲು ಮುಂದಾಗುತ್ತಾರೆ. ಈ ಎಲ್ಲಾ ಕಾರಣಗಳಿಂದ ಮುಂದಿನ ತಿಂಗಳುಗಳಲ್ಲಿ ಪ್ರಯಾಣಿಕರ ವಾಹನಗಳ ಮಾರಾಟ ಹೆಚ್ಚಾಗುವ ಸಾಧ್ಯತೆಗಳಿದೆ.

ಭಾರತದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಏರಿಕೆ ಸಾಧ್ಯತೆ!

ಭಾರತೀಯ ಮಾರುಕಟ್ಟೆಯಲ್ಲಿ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಹಲವು ಬಗೆಯ ವಾಹನಗಳು ಪರಿಚಯಿಸುತ್ತಿದೆ. ಗ್ರಾಹಕರಿಗೆ ತಮ್ಮ ಅಗತ್ಯಗಳಿಗೆ ಅನುಗುಣವಾಗಿ ವಿವಿಧ ಬಗೆಯ ವಾಹನಗಳ ಆಯ್ಕೆಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಒಟ್ಟೆರೆಯಾಗಿ ಅಧ್ಯಯನಗಳ ಪ್ರಾಕಾರವೇ, ವಾಹನಗಳ ಮಾರಾಟ ಹೆಚ್ಚಾಗುವ ಸಾಧ್ಯತೆಗಳಿದೆ.

Most Read Articles

Kannada
English summary
June might see Passenger Vehicle Sales Increasing. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X