Just In
- 11 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 13 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 15 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 1 day ago
ಎಕ್ಸ್ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಷ್ಟ್ರ ರಾಜಧಾನಿಯಲ್ಲಿ ಕುಸಿದ ರಸ್ತೆ ಅಪಘಾತಗಳ ಸಂಖ್ಯೆ
2020ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಕರೋನಾ ಸಾಂಕ್ರಾಮಿಕದಿಂದಾಗಿ 2020ರಲ್ಲಿ ವಿಧಿಸಲಾದ ಲಾಕ್ಡೌನ್ನಿಂದಾಗಿ ರಸ್ತೆ ಅಪಘಾತ ಪ್ರಕರಣಗಳಲ್ಲಿ 26%ನಷ್ಟು ಇಳಿಕೆ ಕಂಡುಬಂದಿದೆ.

ಈ ಬಗ್ಗೆ ದೆಹಲಿ ಸಂಚಾರ ವಿಶೇಷ ಪೊಲೀಸ್ ಆಯುಕ್ತರು ವರದಿ ಮಾಡಿದ್ದಾರೆ. ವರದಿಗಳ ಪ್ರಕಾರ 2019ರಲ್ಲಿ ಸಂಭವಿಸಿದ 5,610 ರಸ್ತೆ ಅಪಘಾತಗಳಲ್ಲಿ ಒಟ್ಟು 1,433 ಪ್ರಕರಣಗಳು ಗಂಭೀರ ಸ್ವರೂಪದ್ದಾಗಿದ್ದವು. 2020ರಲ್ಲಿ ಸಂಭವಿಸಿದ ಒಟ್ಟು 4,178 ರಸ್ತೆ ಅಪಘಾತಗಳಲ್ಲಿ 1,163 ಪ್ರಕರಣಗಳು ಗಂಭೀರ ಸ್ವರೂಪದ್ದಾಗಿವೆ.

ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಕಳೆದ ವರ್ಷ 18%ನಷ್ಟು ಕಡಿಮೆಯಾಗಿದೆ ಎಂದು ವರದಿ ತಿಳಿಸಿದೆ. ಗಾಯಗೊಂಡವರ ಸಂಖ್ಯೆಯಲ್ಲಿ 29%ನಷ್ಟು ಇಳಿಕೆ ಕಂಡುಬಂದಿದೆ. 2019ರಲ್ಲಿ ದೆಹಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 5,152 ಜನರು ಗಾಯಗೊಂಡಿದ್ದರೆ 1,463 ಜನರು ಸಾವನ್ನಪ್ಪಿದ್ದಾರೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು

ಇನ್ನು 2020ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 3,662 ಜನರು ಗಾಯಗೊಂಡಿದ್ದರೆ, 1,196 ಜನರು ಸಾವನ್ನಪ್ಪಿದ್ದಾರೆ. ದೆಹಲಿ ಪೊಲೀಸರು ರಸ್ತೆ ನಿಯಮಗಳ ಬಗ್ಗೆ ನಿರಂತರವಾಗಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಇದಕ್ಕಾಗಿ ಪೊಲೀಸರು ರೇಡಿಯೋ, ಪ್ರಿಂಟ್ ಮೀಡಿಯಾ ಹಾಗೂ ಸಾಮಾಜಿಕ ಜಾಲತಾಣಗಳನ್ನು ಅವಲಂಬಿಸಿದ್ದಾರೆ. 2020ರಲ್ಲಿ ದೆಹಲಿ ಸಂಚಾರ ಪೊಲೀಸರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವತ್ತ ಗಮನಹರಿಸಿದ್ದರು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೊಲೀಸರು ಕಾಲ ಕಾಲಕ್ಕೆ ಹೆಲ್ಮೆಟ್ ತಪಾಸಣೆ, ಪರವಾನಗಿ ಪರಿಶೀಲನೆ ನಡೆಸಿ ಸರಿಯಾದ ಪಥದಲ್ಲಿ ವಾಹನ ಚಾಲನೆ ಮಾಡುವ ಬಗ್ಗೆ ಪ್ರಚಾರ ನಡೆಸಿದ್ದರು. ಇದರ ಜೊತೆಗೆ ದೆಹಲಿ ಪೊಲೀಸರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ವಿವಿಧ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.

ಅತಿ ವೇಗ, ಕುಡಿದು ವಾಹನ ಚಲಾಯಿಸುವುದು, ತಪ್ಪಾದ ಪಾರ್ಕಿಂಗ್ ಹಾಗೂ ಇನ್ನಿತರ ವಿಷಯಗಳ ಬಗ್ಗೆ ದೆಹಲಿ ಪೊಲೀಸರು ವರ್ಷವಿಡೀ ವಿಶೇಷ ಅಭಿಯಾನಗಳನ್ನು ನಡೆಸಿದ್ದರು. ದೆಹಲಿ ಸರ್ಕಾರವು ಇತ್ತೀಚಿಗೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಂತೆ ಆದೇಶ ಹೊರಡಿಸಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ದೆಹಲಿಯಲ್ಲಿ ಮುಂದಿನ 6 ತಿಂಗಳಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿರುವ ಪೆಟ್ರೋಲ್-ಡೀಸೆಲ್ ಕಾರುಗಳನ್ನು ಎಲೆಕ್ಟ್ರಿಕ್ ವಾಹನಗಳಿಗೆ ಬದಲಿಸಲಾಗುವುದು ಎಂದು ಸರ್ಕಾರ ಹೇಳಿದೆ. ದೆಹಲಿ ಸರ್ಕಾರವು ಅಧಿಕೃತವಾಗಿ 2 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಬಳಸುತ್ತದೆ.

ದೆಹಲಿಯಲ್ಲಿನ ವಾಯು ಮಾಲಿನ್ಯವನ್ನು ಪರಿಹರಿಸಲು ದೆಹಲಿ ಸರ್ಕಾರವು ಕಳೆದ ವರ್ಷ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೆ ತಂದಿತ್ತು. ಈ ಎಲೆಕ್ಟ್ರಿಕ್ ವಾಹನನೀತಿಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕ ಹಾಗೂ ರಸ್ತೆ ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಇದರ ಜೊತೆಗೆ ದೆಹಲಿ ಸರ್ಕಾರವು ಸ್ವಿಚ್ ದೆಹಲಿ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನದಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಂತೆ ಜನರಿಗೆ ಮನವಿ ಮಾಡಲಾಗುತ್ತಿದೆ.

ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೆ ಬಂದ ನಂತರ 12 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟಕ್ಕೆ ಲಭ್ಯಗೊಳಿಸಲಾಗಿದೆ. ಈ ಕಾರುಗಳಿಗೆ ರೂ.1.5 ಲಕ್ಷಗಳವರೆಗೆ ಸಬ್ಸಿಡಿ ನೀಡಲಾಗುತ್ತದೆ. ದೆಹಲಿಯ ವಾಯು ಗುಣಮಟ್ಟವು ಭಾರತ ಮಾತ್ರವಲ್ಲದೇ ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ವರದಿಗಳ ಪ್ರಕಾರ, ದೆಹಲಿಯ ವಾಯುಮಾಲಿನ್ಯಕ್ಕೆ ಪೆಟ್ರೋಲ್, ಡೀಸೆಲ್ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದೇ ಪ್ರಮುಖ ಕಾರಣವಾಗಿದೆ. ಈ ಕಾರಣಕ್ಕೆ ದೆಹಲಿ ಸರ್ಕಾರವು ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆಯನ್ನು ಕಡಿಮೆ ಮಾಡಲು ಮುಂದಾಗಿದೆ.
ಗಮನಿಸಿ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.