ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ವಿಶ್ವದಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾರು ತಯಾರಕ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಆದ್ಯತೆ ನೀಡುತ್ತಿವೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ಈಗ ಈ ಪಟ್ಟಿಗೆ ಬ್ರಿಟನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಸಹ ಸೇರಿದೆ. ಬಿಎಂಡಬ್ಲ್ಯು ಒಡೆತನದ ಐಷಾರಾಮಿ ಕಾರು ಕಂಪನಿಯಾದ ರೋಲ್ಸ್ ರಾಯ್ಸ್ ತನ್ನ ಮೊದಲ ಎಲೆಕ್ಟ್ರಿಕ್ ಕಾರನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ಈ ಹೊಸ ಎಲೆಕ್ಟ್ರಿಕ್ ಕಾರಿಗೆ ರೋಲ್ಸ್ ರಾಯ್ಸ್ ಕಂಪನಿಯು ಸೈಲೆಂಟ್ ಶ್ಯಾಡೋ ಎಂದು ಹೆಸರಿಟ್ಟಿದೆ. ಕಂಪನಿಯು ಇತ್ತೀಚೆಗೆ ಇಂಗ್ಲೆಂಡಿನಲ್ಲಿ ಸೈಲೆಂಟ್ ಶ್ಯಾಡೋ ಹೆಸರಿನ ಎಲೆಕ್ಟ್ರಿಕ್ ಕಾರಿಗಾಗಿ ಪೇಟೆಂಟ್ ಅರ್ಜಿಯನ್ನು ಸಲ್ಲಿಸಿದೆ.

MOST READ: ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ರೋಲ್ಸ್ ರಾಯ್ಸ್ ಕಂಪನಿಯು ಈಗಾಗಲೇ ತನ್ನ ಹಲವು ಕಾರುಗಳಲ್ಲಿ ಶ್ಯಾಡೋ ಹೆಸರನ್ನು ಬಳಸಿದೆ. ಇವುಗಳಲ್ಲಿ ರೋಲ್ಸ್ ರಾಯ್ಸ್ ಸಿಲ್ವರ್ ಶ್ಯಾಡೋ ಪ್ರಮುಖ ಕಾರು. ಶೀಘ್ರದಲ್ಲೇ ಸಿಲ್ವರ್ ಶ್ಯಾಡೋವನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವುದಾಗಿ ಕಂಪನಿ ಹೇಳಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ಆದರೆ ಈ ಕಾರನ್ನು ಯಾವಾಗ ಬಿಡುಗಡೆಗೊಳಿಸಲಾಗುವುದು ಎಂಬ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಜರ್ಮನಿಯ ಮ್ಯೂನಿಚ್'ನಲ್ಲಿರುವ ಕಂಪನಿಯ ಉತ್ಪನ್ನ ಅಭಿವೃದ್ಧಿ ಕೇಂದ್ರದಲ್ಲಿ ರೋಲ್ಸ್ ರಾಯ್ಸ್ ಫ್ಯಾಂಟಮ್‌ ಕಾರಿನ ಎಲೆಕ್ಟ್ರಿಕ್ ಮೂಲಮಾದರಿಯನ್ನು ಪರೀಕ್ಷಿಸಲಾಗುತ್ತಿದೆ.

MOST READ: ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ಈ ಕಾರ್ ಅನ್ನು ಸೈಲೆಂಟ್ ಶ್ಯಾಡೋ ಎಂಬ ಹೆಸರಿನಿಂದ ಉತ್ಪಾದಿಸುತ್ತಿರುವುದಾಗಿ ಕಂಪನಿ ಹೇಳಿದೆ. ವರದಿಗಳ ಪ್ರಕಾರ ರೋಲ್ಸ್ ರಾಯ್ಸ್‌ ಕಂಪನಿಯ ಈ ಮೊದಲ ಎಲೆಕ್ಟ್ರಿಕ್ ಕಾರು 100 ಕಿ.ವ್ಯಾ ಸಾಮರ್ಥ್ಯದ ಬ್ಯಾಟರಿಯನ್ನು ಬಳಸಲಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ಪೂರ್ತಿಯಾಗಿ ಚಾರ್ಜ್ ಆದ ನಂತರ ಈ ಕಾರು 500 ಕಿ.ಮೀಗಳವರೆಗೆ ಚಲಿಸುತ್ತದೆ. ಕಾರು ಇನ್ನೂ ಅಭಿವೃದ್ಧಿ ಹಂತದಲ್ಲಿರುವುದರಿಂದ 500 ಕಿ.ಮೀ ವ್ಯಾಪ್ತಿ ಎಂದು ಅಂದಾಜು ಮಾಡಿ ಹೇಳಲಾಗಿದೆ ಎಂದು ವರದಿಗಳು ಹೇಳಿವೆ.

MOST READ: ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ಸಂಪೂರ್ಣವಾಗಿ ಅಭಿವೃದ್ಧಿಪಡಿಸಿದ ನಂತರ ಈ ಕಾರು 500 ಕಿ.ಮೀಗಳಿಗಿಂತ ಹೆಚ್ಚಿನ ವ್ಯಾಪ್ತಿ ಚಲಿಸುವ ಸಾಧ್ಯತೆಗಳಿವೆ. ರೋಲ್ಸ್ ರಾಯ್ಸ್ ಕಂಪನಿಯು ತನ್ನ ಪ್ರಮುಖ ಪ್ರತಿಸ್ಪರ್ಧಿ ಕಂಪನಿಯಾದ ಬೆಂಟ್ಲಿಯ ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ಕಾರುಗಳಿಗೆ ಪೈಪೋಟಿ ನೀಡಲು ನಿರ್ಧರಿಸಿದೆ.

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ರೋಲ್ಸ್ ರಾಯ್ಸ್ ಕಂಪನಿಯು 2040ರಿಂದ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಉತ್ಪಾದಿಸುವುದಾಗಿ ಈಗಾಗಲೇ ಘೋಷಿಸಿದೆ. ಕಂಪನಿಯು ಪೆಟ್ರೋಲ್, ಡೀಸೆಲ್ ಎಂಜಿನ್ ಕಾರುಗಳ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.

MOST READ: ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

2011ರಲ್ಲಿ ಕಂಪನಿಯು ಫ್ಯಾಂಟಮ್‌ ಕಾರಿನ ಕಾನ್ಸೆಪ್ಟ್ ಎಲೆಕ್ಟ್ರಿಕ್ ಮಾದರಿಯನ್ನು ಪ್ರದರ್ಶಿಸಿತ್ತು. 2016ರಲ್ಲಿ ಕಂಪನಿಯು ಆಟೋ ಶೋದಲ್ಲಿ ವಿಷನ್ ನೆಕ್ಸ್ಟ್ 100ಹೆಸರಿನ ಸೆಲ್ಫ್ ಡ್ರೈವ್ ಎಲೆಕ್ಟ್ರಿಕ್ ಕಾರನ್ನು ಪ್ರದರ್ಶಿಸಿತ್ತು.

ಪೂರ್ತಿಯಾಗಿ ಚಾರ್ಜ್ ಆದ ನಂತರ 500 ಕಿ.ಮೀಗಳವರೆಗೆ ಚಲಿಸಲಿದೆ ರೋಲ್ಸ್ ರಾಯ್ಸ್ ಕಂಪನಿಯ ಈ ಎಲೆಕ್ಟ್ರಿಕ್ ಕಾರು

ರೋಲ್ಸ್ ರಾಯ್ಸ್ ಕಂಪನಿಯು ಶಕ್ತಿಶಾಲಿಯಾದ ಹಾಗೂ ವೇಗದ ಎಂಜಿನ್‌ಗಳಿಗೆ ಹೆಸರುವಾಸಿಯಾಗಿದೆ. ಈಗ ಕಂಪನಿಯು ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳತ್ತ ಸಾಗುತ್ತಿದೆ. ಇನ್ನು ಮುಂದೆ ರೋಲ್ಸ್ ರಾಯ್ಸ್ ಕಾರು ಗ್ರಾಹಕರಿಗೆ ಎಂಜಿನ್‌ ಶಬ್ದವನ್ನು ಆನಂದಿಸಲು ಸಾಧ್ಯವಾಗುವುದಿಲ್ಲ.

Most Read Articles

Kannada
English summary
Rolls Royce upcoming electric car to travel around 500 kms in a single charge. Read in Kannada.
Story first published: Tuesday, June 1, 2021, 11:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X