ಸೆಪ್ಟೆಂಬರ್ ಅವಧಿಯಲ್ಲಿ Mahindra ಕಾರುಗಳ ಖರೀದಿ ಮೇಲೆ ಭರ್ಜರಿ ಆಫರ್
ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ವಿವಿಧ ಕಾರು ಕಂಪನಿಗಳು ತಮ್ಮ ವಿವಿಧ ಕಾರು ಮಾದರಿಗಳ ಖರೀದಿ ಮೇಲೆ ಹಲವಾರು ಆಫರ್‌ಗಳನ್ನ ಘೋಷಿಸುತ್ತಿದ್ದು, ಮಹೀಂದ್ರಾ(Mahindra) ಕಂಪನಿಯು ಸಹ ಕಾರುಗಳ ಖರೀದಿ ಮೇಲೆ ವಿಶೇಷ ರಿಯಾಯ್ತಿ ಘೋಷಣೆ ಮಾಡಿದೆ.

ಕೋವಿಡ್ ಕಾರಣಕ್ಕೆ ಸತತವಾಗಿ ಕುಸಿತ ಕಂಡಿದ್ದ ಕಾರು ಮಾರಾಟವು ಇದೀಗ ಸುಧಾರಿಸುತ್ತಿದ್ದು, ಕಾರು ಖರೀದಿ ಉತ್ತೇಜಿಸಲು ಮಹೀಂದ್ರಾ ಕಂಪನಿಯು ವಿವಿಧ ಕೊಡುಗೆಗಳೊಂದಿಗೆ ನಗದು ರಿಯಾಯಿತಿಗಳನ್ನು ಘೋಷಣೆ ಮಾಡಿದೆ. ಹೊಸ ಆಫರ್‌ಗಳಲ್ಲಿ ಕ್ಯಾಶ್ ಬ್ಲ್ಯಾಕ್ ಆಫರ್, ಎಕ್ಸ್‌ಚೆಂಜ್ ಬೋನಸ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.

ಮಹೀಂದ್ರಾ ಹೊಸ ಕಾರ್ ಆಫರ್‌ಗಳು ಈ ತಿಂಗಳಾಂತ್ಯದ ತನಕ ಅನ್ವಯವಾಗಲಿದ್ದು, ಆಯ್ದ ಡೀಲರ್ಸ್‌ಗಳಲ್ಲಿ ಪ್ರಮುಖ ಕಾರು ಮಾದರಿಗಳ ಮೇಲೆ ಇನ್ನು ಹೆಚ್ಚಿನ ಮಟ್ಟದ ಆಫರ್ ಪಡೆದುಕೊಳ್ಳಬಹುದಾಗಿದೆ.

ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಎಕ್ಸ್‌ಯುವಿ500 ಖರೀದಿಯ ಮೇಲೆ ಮಹೀಂದ್ರಾ ಕಂಪನಿಯು ಗರಿಷ್ಠ ರೂ. 2.56 ಲಕ್ಷ ಆಫರ್ ನೀಡುತ್ತಿದ್ದು, ಇದರಲ್ಲಿ ರೂ. 1.80 ಲಕ್ಷ ಕ್ಯಾಶ್ ಡಿಸ್ಕೌಂಟ್, ರೂ.50 ಸಾವಿರ ಎಕ್ಸ್‌ಚೆಂಜ್ ಆಫರ್, ರೂ.6,500 ಕಾರ್ಪೊರೇಟ್ ಡಿಸ್ಕೌಂಟ್ ಸೇರಿದಂತೆ ವಿವಿಧ ಆಫರ್ ನೀಡುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ಎಕ್ಸ್‌ಯುವಿ300 ಕಾರು ಖರೀದಿಯ ಮೇಲೆ ಉಚಿತ ಆಕ್ಸೆಸರಿಸ್ ಒಳಗೊಂಡಂತೆ ರೂ.15 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.20 ಸಾವಿರ ಎಕ್ಸ್‌ಚೆಂಜ್ ಆಫರ್, ರೂ. 4 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಕೆಯುವಿ100 ನೆಕ್ಸ್ಟ್ ಮಾದರಿಯ ಮೇಲೆ ಮಹೀಂದ್ರಾ ಕಂಪನಿಯು ರೂ.41 ಸಾವಿರ ಮೌಲ್ಯದ ಕೊಡುಗೆಗಳನ್ನು ಪ್ರಕಟಿಸಿದ್ದು, ರೂ.38 ಸಾವಿರ ಕ್ಯಾಶ್ ಡಿಸ್ಕೌಂಟ್ ಸೇರಿದಂತೆ ರೂ. 3 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಮಹೀಂದ್ರಾ ಜನಪ್ರಿಯ ಬೊಲೆರೊ ಕಾರು ಖರೀದಿ ಮೇಲೂ ಒಟ್ಟು ರೂ. 6,550 ಕ್ಯಾಶ್ ಡಿಸ್ಕೌಂಟ್ ಜೊತೆಗೆ ಉಚಿತವಾಗಿ ನಾಲ್ಕನೇ ವರ್ಷದ ವಾರಂಟಿ ಲಭ್ಯವಿದ್ದು, ಇನ್ನುಳಿದಂತೆ ರೂ. 3 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಸಹ ಲಭ್ಯವಿರಲಿವೆ.

ಇನ್ನಳಿದಂತೆ ಸ್ಕಾರ್ಪಿಯೋ ಕಾರು ಖರೀದಿಯ ಮೇಲೆ ರೂ.19 ಸಾವಿರ ಮೌಲ್ಯದ ಕೊಡುಗೆಗಳನ್ನು ನೀಡಲಾಗಿದ್ದು, ರೂ. 15 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ. 4 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಎಂಪಿವಿ ಕಾರು ಮಾದರಿಯಾದ ಮರಾಜೋ ಆವೃತ್ತಿಯ ಮೇಲೆ ರೂ.25,200 ಮೌಲ್ಯದ ಆಫರ್ ಲಭ್ಯವಿದ್ದು, ಹೊಸ ಆಫರ್‌ನಲ್ಲಿ ರೂ.20 ಸಾವಿರ ಕ್ಯಾಶ್‌ಬ್ಯಾಕ್, ರೂ. 5,200 ಎಕ್ಸ್‌ಚೆಂಜ್ ಆಫರ್ ನೀಡುತ್ತಿದೆ.

ಅಲ್ಟುರಾಸ್ ಜಿ4 ಎಸ್‌ಯುವಿ ಮಾದರಿಯ ಮೇಲೆ ಕಂಪನಿಯು ರೂ.31,500 ಮೌಲ್ಯದ ಆಫರ್ ನೀಡುತ್ತಿದ್ದು, ಹೊಸ ಆಫರ್‌ನಲ್ಲಿ ರೂ.20 ಸಾವಿರ ಕ್ಯಾಶ್‌ಬ್ಯಾಕ್ ಮತ್ತು ರೂ. 11,500 ಕಾರ್ಪೊರೆಟ್ ಡಿಸ್ಕೌಂಟ್ ಪಡೆದುಕೊಂಡಿದೆ.

ಮಹೀಂದ್ರಾ ಕಂಪನಿಯ ಹೊಸ ಆಫರ್‌ಗಳನ್ನು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಕಂಪನಿಯು ಸೆಪ್ಟೆಂಬರ್ ಅವಧಿಯಲ್ಲಿ ಮೇಲಿನ ಕಾರು ಮಾದರಿಗಳನ್ನು ಹೊರತುಪಡಿಸಿ ಥಾರ್, ಟಿಯುವಿ300 ನಿಯೋ ಮಾದರಿಯ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲ.

ಇನ್ನು ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಚಿಪ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವು ವಿಶ್ವಾದ್ಯಂತ ಪ್ರಮುಖ ಕಾರು ಕಂಪನಿಗಳಿಗೆ ಹೊಡೆತ ನೀಡುತ್ತಿದ್ದು, ದೇಶದ ಪ್ರಮುಖ ಕಾರು ಉತ್ಪಾದನಾ ಕಂಪನಿಯಾಗಿರುವ ಮಹೀಂದ್ರಾ ಸಹ ಸೆಮಿ ಕಂಡಕ್ಟರ್ ಕೊರತೆ ಎದುರಿಸುತ್ತಿದೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲೂ ಸೆಮಿ ಕಂಡಕ್ಟರ್ ಕೊರೆತೆಯಿಂದಾಗಿಯೇ ಒಂದು ವಾರಗಳ ಕಾಲ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದ ಮಹೀಂದ್ರಾ ಕಂಪನಿಯು ಇದೀಗ ಮತ್ತೆ ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಮುಂದಾಗಿದೆ.

ವಿದೇಶಿ ಮಾರುಕಟ್ಟೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಆಮದುಗೊಳ್ಳುತ್ತಿದ್ದ ಎಲೆಕ್ಟ್ರಾನಿಕ್ ಚಿಪ್ ಪ್ರಮಾಣವು ತಗ್ಗಿರುವುದರಿಂದ ದೇಶದಲ್ಲಿನ ಉತ್ಪಾದನಾ ಲಭ್ಯತೆ ಆಧರಿಸಿ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆಯೂ ಹೆಚ್ಚಳವಾಗುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್‌ಗಳಿಲ್ಲದೆ ಪ್ರಮುಖ ಕಾರು ಕಂಪನಿಯು ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿವೆ.

ಎಲೆಕ್ಟ್ರಾನಿಕ್ ಚಿಪ್ ಇಲ್ಲದೆ ಕಾರಿನ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳನ್ನು ಜೋಡಿಸಲು ಸಾಧ್ಯವಿಲ್ಲ. ಕಾರಿನಲ್ಲಿರುವ ಡಿಸ್ ಪ್ಲೇ, ಸ್ಪೀಕರ್, ಸ್ಟ್ಯಾಬಿಲಿಟಿ ಕಂಟ್ರೋಲ್, ಲೈಟಿಂಗ್, ಕಾರ್ ಕನೆಕ್ಟ್ ಫೀಚರ್ಸ್ ಸೇರಿ ಪ್ರಮುಖ ತಾಂತ್ರಿಕ ಸಾಧನಗಳು ಕಾರ್ಯನಿರ್ವಹಿಸಲು ಸೆಮಿ ಕಂಡಕ್ಟರ್ ಅವಶ್ಯವಾಗಿವೆ.


Click it and Unblock the Notifications