Just In
- 1 hr ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 2 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 2 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 3 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಯಲ್ಲಾಪುರ ಭೂಕುಸಿತ: ಯುವತಿಯ ಮದುವೆ ಕನಸು "ಮಣ್ಣು'ಪಾಲು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Movies
ಬಿಗ್ಬಾಸ್: ಎರಡನೇ ವಾರಕ್ಕೆ ಎಂಟು ಮಂದಿ ಮೇಲೆ ನಾಮಿನೇಷನ್ ಕತ್ತಿ
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾಹನ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀರಿದ ಎಲೆಕ್ಟ್ರಾನಿಕ್ ಚಿಪ್‌ಗಳ ಕೊರತೆ
ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಜಾಗತಿಕ ಮಾರುಕಟ್ಟೆಯಲ್ಲಿ ವಾಹನಗಳ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಯುರೋಪ್, ಅಮೆರಿಕಾ ಹಾಗೂ ಏಷ್ಯಾದ ದೇಶಗಳಲ್ಲಿ ವಾಹನ ಉತ್ಪಾದನೆಯು ನಿಧಾನವಾಗುತ್ತಿದೆ.

ಇದರಿಂದಾಗಿ ಹೊಸ ಕಾರುಗಳನ್ನು ಖರೀದಿಸ ಬಯಸುವ ಗ್ರಾಹಕರು ಹೆಚ್ಚು ಸಮಯ ಕಾಯುವಂತಾಗಿದೆ. ಟೈಮ್ಸ್ ಡ್ರೈವ್‌ನ ವರದಿಯ ಪ್ರಕಾರ, ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್ ಮಾಡಲಾದ ಕಾರುಗಳ ವಿತರಣೆ ವಿಳಂಬವಾಗಿದೆ. ಕೆಲವು ಕಾರು ಕಂಪನಿಗಳು ತಮ್ಮ ಹೊಸ ಕಾರುಗಳ ಕಾಯುವ ಅವಧಿಯನ್ನು 5ರಿಂದ 6 ತಿಂಗಳಿಗೆ ನಿಗದಿಪಡಿಸಿವೆ.

ವಾಹನಗಳ ವಿತರಣೆ ವಿಳಂಬವಾಗುತ್ತಿರುವುದಕ್ಕೆ ಎರಡು ಪ್ರಮುಖ ಕಾರಣಗಳಿವೆ. ಮೊದಲನೆಯದಾಗಿ ಚಿಪ್ ಕೊರತೆಯಿಂದಾಗಿ ಭಾರತದ ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಡಿಸೆಂಬರ್-ಜನವರಿ ಅವಧಿಯಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದವು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಇದರಿಂದಾಗಿ ಮೊದಲೇ ಬುಕ್ಕಿಂಗ್ ಮಾಡಲಾದ ಕಾರುಗಳನ್ನು ಸಮಯಕ್ಕೆ ಉತ್ಪಾದಿಸಲು ಸಾಧ್ಯವಾಗಲಿಲ್ಲ. ಎರಡನೆಯದಾಗಿ ವಿಶ್ವಾದ್ಯಂತ ಕಾರುಗಳಿಗೆ ಎಲೆಕ್ಟ್ರಾನಿಕ್ ಚಿಪ್‌ಗಳ ಕೊರತೆ ಎದುರಾಗಿದೆ.

ಚೀನಾ, ತೈವಾನ್ ಹಾಗೂ ಯುರೋಪಿನಿಂದ ಬರುವ ಚಿಪ್ ಗಳನ್ನು ಕಡಿತಗೊಳಿಸಲಾಗುತ್ತಿರುವುದರಿಂದ ವಿಶ್ವದಾದ್ಯಂತದ ಚಿಪ್ ಕೊರತೆಗೆ ಎದುರಾಗಿದೆ. ಎಲೆಕ್ಟ್ರಾನಿಕ್ ಚಿಪ್‌ಗಳು ಕಾರು ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಚಿಪ್ ಇಲ್ಲದೆ ಕಾರಿನ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸಲಾಗುವುದಿಲ್ಲ. ಚಿಪ್ ಕೊರತೆಯಿಂದಾಗಿ ಕಾರಿನಲ್ಲಿರುವ ಡಿಸ್ ಪ್ಲೇ, ಸ್ಪೀಕರ್, ಸ್ಟೆಬಿಲಿಟಿ ಕಂಟ್ರೋಲ್, ಲೈಟಿಂಗ್ ಮುಂತಾದ ಫೀಚರ್'ಗಳು ಹಾಗೂ ಸಾಧನಗಳು ಕಾರ್ಯನಿರ್ವಹಿಸುವುದಿಲ್ಲ.

ಕರೋನಾ ವೈರಸ್ ಅವಧಿಯಲ್ಲಿ ಪೂರೈಕೆ ಸರಪಳಿ ಅಸ್ತವ್ಯಸ್ತಗೊಂಡಿದ್ದೇ ಎಲೆಕ್ಟ್ರಾನಿಕ್ ಚಿಪ್ ಕೊರತೆಗೆ ಪ್ರಮುಖ ಕಾರಣವಾಗಿದೆ. ಲಾಕ್'ಡೌನ್ ನಿಂದಾಗಿ ಲ್ಯಾಪ್‌ಟಾಪ್, ಮೊಬೈಲ್‌ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳಿಗೆ ಬೇಡಿಕೆ ಹೆಚ್ಚಾಗಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಇದರಿಂದಾಗಿ ವಾಹನಗಳ ಚಿಪ್ ಉತ್ಪಾದನೆಯನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ ಕೆಲವು ಕಂಪನಿಗಳು ಕಾರ್ಮಿಕರ ಕೊರತೆಯಂತಹ ಸಮಸ್ಯೆಗಳನ್ನು ಎದುರಿಸುತ್ತಿವೆ.

ಭಾರತದಲ್ಲಿನ ಕೆಲವು ಎಲೆಕ್ಟ್ರಾನಿಕ್ ಕಂಪನಿಗಳು ಚೀನಾ, ತೈವಾನ್ ಹಾಗೂ ಯುರೋಪಿನಿಂದ ಎಲೆಕ್ಟ್ರಾನಿಕ್ ಚಿಪ್‌ಗಳನ್ನು ಆಮದು ಮಾಡಿಕೊಳ್ಳುವುದರಿಂದ,ಭಾರತವು ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿರುವ ವಾಹನ ತಯಾರಕ ಕಂಪನಿಗಳು ಚಿಪ್ ಕೊರತೆಯನ್ನು ಎದುರಿಸುತ್ತಿವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕೆಲವು ಕಂಪನಿಗಳು ದೇಶದಲ್ಲಿರುವ ಚಿಪ್ ತಯಾರಕ ಕಂಪನಿಗಳ ನೆರವನ್ನು ಪಡೆಯುತ್ತಿದ್ದರೂ ಅವುಗಳ ಉತ್ಪಾದನೆಯು ಅಗತ್ಯಕ್ಕಿಂತ ಕಡಿಮೆಯಾಗಿದ್ದು, ಬೆಲೆ ದುಬಾರಿಯಾಗಿದೆ. ಈ ವರ್ಷದ ಮಧ್ಯಭಾಗದ ವೇಳೆಗೆ ಚಿಪ್ ಕೊರತೆ ಸಮಸ್ಯೆ ಬಗೆಹರಿದು ಉತ್ಪಾದನೆಯು ಸಾಮಾನ್ಯ ಸ್ಥಿತಿಗೆ ಮರಳುವ ಸಾಧ್ಯತೆಗಳಿವೆ.