ಬಿಡುಗಡೆಯ ಸನಿಹದಲ್ಲಿ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ಇಂಡಿಯಾ ತನ್ನ ನ್ಯೂ ಜನರೇಷನ್ ಆಕ್ಟೀವಿಯಾ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಯುರೋಪ್ ಮಾರುಕಟ್ಟೆಗಳಲ್ಲಿ ಈಗಾಗಲೇ ಈ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಕಾರು ಮಾರಾಟವಾಗುತ್ತಿದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹಿಂದಿನ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಭರ್ಜರಿ ಮಾರಾಟವನ್ನು ಕಂಡಿತ್ತು. ಆದರೆ ಸ್ಕೋಡಾ ಕಂಪನಿಯು ಈ ಆಕ್ಟೀವಿಯಾ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ. ಕಳೆದ ವರ್ಷದಲ್ಲೇ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಆಕ್ಟೀವಿಯಾ ಕಾರನ್ನು ಬಿಡುಗಡೆಗೊಳಿಸಬೇಕಿತ್ತು. ಆದರೆ ಸ್ಕೋಡಾ ಕಂಪನಿಯು ಈ ಕಾರಿನ ಬಿಡುಗಡೆಯನ್ನು ಈ ವರ್ಷಕ್ಕೆ ಮುಂದೂಡಿದರು.

ಬಿಡುಗಡೆಯ ಸನಿಹದಲ್ಲಿ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಆಕ್ಟೀವಿಯಾ ಕಾರನ್ನು ಮುಂದಿನ ಎರಡು ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ಸ್ಕೋಡಾ ಕಂಪನಿಯು ಹೇಳಿದೆ. ಸ್ಕೋಡಾ ಇಂಡಿಯಾ ಕಂಪನಿಯು ನ್ಯೂ ಜನರೇಷನ್ ಆಕ್ಟೀವಿಯಾ ಕಾರನ್ನು ಕೆಲವು ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಬಹುದು.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಬಿಡುಗಡೆಯ ಸನಿಹದಲ್ಲಿ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇನ್ನು ಸ್ಕೋಡಾ ಆಕ್ಟೀವಿಯಾ ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಹೊಸ ಆಕ್ಟೀವಿಯಾ ಕಾರು ಎಲ್ಇಡಿ ಹೆಡ್ ಲೈಟ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಹೊಂದಿದೆ. ಇದರೊಂದಿಗೆ ಎಲ್ಇಡಿ ಫಾಗ್ ಲ್ಯಾಂಪ್ ಅನ್ನು ಸಹ ಹೊಂದಿದೆ. ಇದರೊಂದಿಗೆ ಎಲ್‌ಇಡಿ ಟೈಲ್-ಲೈಟ್ ಮತ್ತು ಹೊಸ 17 ಇಂಚಿನ 'ರೋಟಾರೆ ಏರೋ' ಅಲಾಯ್ ವ್ಹೀಲ್ ಗಳನ್ನು ಹೊಂದಿವೆ.

ಬಿಡುಗಡೆಯ ಸನಿಹದಲ್ಲಿ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಮತ್ತು ಅಲ್ಕಾಂಟರ್ ಲೆದರ್ ನಿಂದ ಕೂಡಿದ ಮುಂಭಾಗದ ಸೀಟ್‍, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ 10 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ನೀಡಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಬಿಡುಗಡೆಯ ಸನಿಹದಲ್ಲಿ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಸ್ಕೋಡಾ ಅಕ್ಟೀವಾ ಕಾರು ಸುರಕ್ಷತೆಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿದೆ ಎಂದು ಹೇಳಬಹುದು. ಈ ಕಾರು ಕ್ರ್ಯಾಶ್ ಟೆಸ್ಟ್ ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿದೆ. ಸ್ಕೋಡಾ ಆಕ್ಟೀವಿಯಾ ಹೊಸ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯುರೋ ಎನ್‍‍‍ಸಿ‍ಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಸೈಡ್ ಬ್ಯಾರಿಯರ್ ಟೆಸ್ಟ್ ನಲ್ಲಿ ಕಾರಿನ ಕ್ರಿಟಿಕಲ್ ಬಾಡಿಯು ಉತ್ತಮ ರಕ್ಷಣೆಯನ್ನು ಹೊಂದಿದೆ ಎಂದು ರೇಟಿಂಗ್ ನೀಡಲಾಗಿದೆ. ಹೊಸ ಸ್ಕೋಡಾ ಅಕ್ಟೀವಿಯಾ ಚಿಲ್ಡ್ ಒಕಿಪ್ಯಾಡ್ ಪ್ರೊಟಕ್ಷನ್ ಟೆಸ್ಟ್ ನಲ್ಲಿ 43.2 ಅಂಕಗಳನ್ನು ಗಳಿಸಿದೆ. ಇದರಿಂದ ಸುರಕ್ಷತೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ಗ್ರಾಹಕರಿಗೆ ಈ ಕಾರು ಉತ್ತಮ ಆಯ್ಕೆಯಾಗಲಿದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇನ್ನು ಈ ಹೊಸ ಕಾರು 2,686 ಎಂಎಂ ವ್ಹೀಲ್‍‍ಬೇಸ್ ಹೊಂದಿದ್ದು, ಇದರಿಂದ ಒಳಭಾಗದಲ್ಲಿ ಉತ್ತಮ ಸ್ಪೇಸ್ ಅನ್ನು ಹೊಂದಿದೆ. ಹೊಸ ಆಕ್ಟೀವಿಯಾ 600 ಲೀಟರ್‍ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದ್ದು, ಹಿಂದಿನ ಕಾರಿಗೆ ಹೋಲಿಸಿದರೆ 30 ಲೀಟರ್‍‍ನಷ್ಟು ಹೆಚ್ಚಾಗಿದೆ. ಹೊಸ ಕಾರಿನಲ್ಲಿ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದ ಬ್ಲ್ಯಾಕ್ ಗ್ರಿಲ್‍‍ನಲ್ಲಿ ಡ್ಯುಯಲ್ ಸ್ಪ್ಲಿಟ್ ಹೆಡ್‍‍ಲ್ಯಾಂಪ್‍‍ಗಳನ್ನು ಹೊಂದಿರಲಿದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇನ್ನು ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನಲ್ಲಿ ವಿಡಬ್ಲ್ಯೂ ಗ್ರೂಪ್‌ನ 2.0 ಎಲ್ ಟಿಎಸ್‌ಐ ಟರ್ಬೋಚಾರ್ಜ್ಡ್ ಡೈರೆಕ್ಟ್ ಇಂಜೆಕ್ಷನ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಬಹುದು. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿರಲಿದೆ. ಇದರಿಂದ ಹೊಸ ಆಕ್ಟೀವಿಯಾ ಪರ್ಫಾಮೆನ್ಸ್ ಕಾರು ಪ್ರಿಯರನ್ನು ಕೂಡ ಸೆಳೆಯಬಹುದು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

Article Published On: Tuesday, March 16, 2021, 15:28 [IST]
English summary
New Skoda Octavia To Launch Before Kushaq Suv In Kannada. Read In Kananda.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+