ಅಕ್ಟೋಬರ್ ತಿಂಗಳಿನಲ್ಲಿ 3,065 ಕಾರುಗಳನ್ನು ಮಾರಾಟಗೊಳಿಸಿದ Skoda
ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ಆಟೋ ಇಂಡಿಯಾ 2021ರ ಅಕ್ಟೋಬರ್ ತಿಂಗಳ ಮಾಸಿಕ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಸ್ಕೋಡಾ ಕಂಪನಿಯು ದೇಶದಲ್ಲಿ 3,065 ಯುನಿಟ್‌ಗಳನ್ನು ಮಾರಾಟ ಮಾಡಿದೆ.

2020ರ ಅಕ್ಟೋಬರ್ ತಿಂಗಳಿನಲ್ಲಿ ಸ್ಕೋಡಾ ಕಂಪನಿಯು 1,421 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.116 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಈ ದಾಖಲೆ ಮಟ್ಟದ ಬೆಳವಣಿಗೆಗಳನ್ನು ಸಾಧಿಸಲು ಸ್ಕೋಡಾ ಕುಶಾಕ್ ಕಾಂಪ್ಯಾಕ್ಟ್ ಎಸ್‌ಯುವಿಯು ದೊಡ್ಡ ಕೊಡುಗೆಯನ್ನು ನೀಡಿದೆ. 2020 ರಲ್ಲಿ ಭಾರತದಲ್ಲಿ ಕುಶಾಕ್ ಕಾಂಪ್ಯಾಕ್ಟ್ ಎಸ್‌ಯುವಿಯು ಬಿಡುಗಡೆಯಾಗಿರಲಿಲ್ಲ. ಈ ಕುಶಾಕ್ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಉತ್ತಮವಾಗಿ ಮಾರಾಟವಾಗುತ್ತಿದೆ.

2021ರ ಸೆಪ್ಟೆಂಬರ್ ತಿಂಗಳಲ್ಲಿ ಸ್ಕೋಡಾ ಕಂಪನಿಯು 3,027 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.1.2 ರಷ್ಟು ಸ್ಕೋಡಾ ಕಂಪನಿಯು ಬೆಳವಣಿಗೆಯನ್ನು ಕಂಡಿದೆ.

ಸ್ಕೋಡಾ ಕಂಪನಿಯು ಭಾರತದಲ್ಲಿ ಕುಶಾಕ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆ ಮಾಡಿತು ಮತ್ತು ಅಂದಿನಿಂದ ಬಲವಾದ ಮಾರಾಟದ ಬೆಳವಣಿಗೆಗೆ ಸಾಕ್ಷಿಯಾಗಿದೆ. ಇಲ್ಲಿಯವರೆಗೆ, ಕಂಪನಿಯು ಈ ಎಸ್‍ಯುವಿಗಾಗಿ 15,000 ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಗಳಿಸಿದೆ ಮತ್ತು ಸರಾಸರಿಯಾಗಿ, ಇದು ಪ್ರತಿ ತಿಂಗಳು 2,000 ಯುನಿಟ್‌ಗಳಿಗಿಂತ ಹೆಚ್ಚು ಕುಶಾಕ್‌ಗಳನ್ನು ಮಾರಾಟ ಮಾಡುತ್ತಿದೆ.

ಇನ್ನು ಮಾರಾಟದಲ್ಲಿ ಸೂಪರ್ಬ್, ಆಕ್ಟೀವಾ ಮತ್ತು ರಾಪಿಡ್ ಕಾರುಗಳ ಮಾರಾಟ ಹೆಚ್ಚುತ್ತಿವೆ ಎಂದು ಸ್ಕೋಡಾ ಹೇಳುತ್ತದೆ, ಇವೆಲ್ಲವೂ ಹೆಚ್ಚುತ್ತಿರುವ ಮಾರಾಟದ ಪರಿಮಾಣಕ್ಕೆ ಕೊಡುಗೆ ನೀಡಿವೆ. ಮುಂದಿನ ದಿನಗಳಲ್ಲಿ ಸ್ಕೋಡಾ ಕಾರುಗಳ ಮಾರಾಟ ಹೆಚ್ಚಾಗುವ ಭರವಸೆ ಇದೆ ಎಂದು ಕಂಪನಿ ಹೇಳಿಕೊಂಡಿದೆ.

ಇನ್ನು ಸ್ಕೋಡಾ ಕಂಪನಿಯು ತನ್ನ ಹೊಸ ಸ್ಲಾವಿಯಾ ಸೆಡಾನ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗಿದೆ. ಈ ಹೊಸ ಸ್ಕೋಡಾ ಸ್ಲಾವಿಯಾ(Skoda Slavia) ಸೆಡಾನ್ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಭಾರತದಲ್ಲಿ ಸ್ಕೋಡಾ ಸ್ಲಾವಿಯಾ ಜಾಗತಿಕ ಪ್ರಥಮ ಪ್ರದರ್ಶನವನ್ನು ಮಾಡಲು ಸಿದ್ಧವಾಗಿದೆ.

ಫೋಕ್ಸ್‌ವ್ಯಾಗನ್ ಗ್ರೂಪ್‌ನ ಇಂಡಿಯಾ ಪ್ಲಾನ್ 2.0 ಅಡಿಯಲ್ಲಿ ಇದು ಬ್ರಾಂಡ್‌ನ ಎರಡನೇ ಮಾದರಿಯಾಗಿದೆ, ಇದು ಹೊಸ ಹೂಡಿಕೆ ಮತ್ತು ಉತ್ಪನ್ನಗಳ ಶ್ರೇಣಿಯನ್ನು ತರುತ್ತದೆ. ರ‍್ಯಾಪಿಡ್ ಸೆಡಾನ್ ಅನ್ನು ಬದಲಿಸಲು, ಹೊಸ ಸ್ಕೋಡಾ ಸ್ಲಾವಿಯಾ ಫೋಕ್ಸ್‌ವ್ಯಾಗನ್ ಹೆಚ್ಚು ಸ್ಥಳೀಯ ಎಂಕ್ಯೂಬಿ ಎಒ ಇನ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಕುಶಾಕ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಇದೇ ಪ್ಲಾಟ್‌ಫಾರ್ಮ್ ಆಧಾರವಾಗಿದೆ.

ಈ ಹೊಸ ಸ್ಕೋಡಾ ಸ್ಲಾವಿಯಾ ಕಾರು ಜೆಕ್ ಬ್ರ್ಯಾಂಡ್‌ನ ಇತ್ತೀಚಿನ ವಿನ್ಯಾಸ ಶೈಲಿಯನ್ನು ಅನುಸರಿಸುತ್ತದೆ ಮತ್ತು ಇದನ್ನು MQB A0-IN ಪ್ಲಾಟ್‌ಫಾರ್ಮ್‌ನಲ್ಲಿ ನಿರ್ಮಿಸಲಾಗುವುದು, ಈ ಪ್ಲಾಟ್‌ಫಾರ್ಮ್ ವಿವಿಧ ಬಾಡಿಯ ಶೈಲಿಗಳು ಮತ್ತು ಎಂಜಿನ್ ಆಯ್ಕೆಗಳನ್ನು ಸರಿಹೊಂದಿಸಲು ಸಾಕಷ್ಟು ಬಹುಮುಖವಾಗಿದೆ. ಇನ್ನು ಮುಂಬರುವ ಫೋಕ್ಸ್‌ವ್ಯಾಗನ್ ಮಿಡ್ ಸೈಜ್ ಸೆಡಾನ್, ವರ್ಚಸ್ ಎಂದು ಕರೆಯಲ್ಪಡುತ್ತದೆ, ಈ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿರಲಿದೆ,

ಸ್ಲಾವಿಯಾ ಹೊಸ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಮೊದಲ ಸೆಡಾನ್ ಆಗಿರುತ್ತದೆ. ಸ್ಕೋಡಾ ಸ್ಲಾವಿಯಾ ಸೆಡಾನ್ ನಾಚ್ ಬ್ಯಾಕ್ ತರಹದ ಸ್ಟೈಲಿಂಗ್ ಅನ್ನು ಹೊಂದಿರುತ್ತದೆ. ಇದು ಕ್ರೋಮ್ ಸರೌಂಡ್‌ನೊಂದಿಗೆ ಸಿಗ್ನೇಚರ್ ಬಟರ್‌ಫ್ಲೈ ಗ್ರಿಲ್, ಎಲ್ಇಡಿ ಡಿಆರ್‌ಎಲ್‌ಗಳೊಂದಿಗೆ ಚೂಪಾದ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ವಿಭಿನ್ನ ಕ್ಯಾರೆಕ್ಟರ್ ಲೈನ್‌ಗಳು, ಸ್ಲೋಪಿಂಗ್ ರೂಫ್‌ಲೈನ್, ಎಲ್‌ಇಡಿ ಟೈಲ್-ಲೈಟ್ಸ್ ಮತ್ತು ಡೈಮಂಡ್-ಕಟ್ ಅಲಾಯ್ ವ್ಹೀಲ್ ಗಳನ್ನು ಕೂಡ ಪಡೆಯಲಿದೆ,

ಈ ಸ್ಕೋಡಾ ಸ್ಲಾವಿಯಾ ಕಾರು ಫಾಕ್ಟರಿ ಫಿಟಡ್ ಎಲೆಕ್ಟ್ರಿಕ್ ಸನ್ ರೂಫ್, ಆಟೋಮ್ಯಾಟಿಕ್ ಹೆಡ್ ಲ್ಯಾಂಪ್ ಮತ್ತು ಆಟೋಮ್ಯಾಟಿಕ್ ವೈಪರ್ ಗಳು ಒಳಗೊಂಡಿರುತ್ತದೆ, ಹೊಸ ಸ್ಕೋಡಾ ಸ್ಲಾವಿಯಾ ಕಾರಿನ ಎಂಜಿನ್ ಮಾಹಿತಿಗಳನ್ನು ಬಹಿರಂಗಪಡಿಸಿದೆ.

ಈ ಹೊಸ ಸ್ಕೋಡಾ ಸ್ಲಾವಿಯಾ ಕಾರು ಎಂಜಿನ್ ಅನ್ನು ಸ್ಕೋಡಾ ಕುಶಾಕ್‌ನೊಂದಿಗೆ ಹಂಚಿಕೊಳ್ಳುತ್ತದೆ. ಇದರರ್ಥ, ಸ್ಲಾವಿಯಾ ಅದೇ 1.0-ಲೀಟರ್ TSI ಮೂರು-ಸಿಲಿಂಡರ್ ಎಂಜಿನ್ ಮತ್ತು 1.5-ಲೀಟರ್ ನಾಲ್ಕು-ಸಿಲಿಂಡರ್ TSI ಎಂಜಿನ್ ಜೊತೆಗೆ ಎರಡೂ ಟರ್ಬೋಚಾರ್ಜ್ಡ್ ಪೆಟ್ರೋಲ್ ಮೋಟಾರ್‌ಗಳಾಗಿವೆ. ಇದರಲ್ಲಿ 1.0-ಲೀಟರ್ TSI ಮೂರು-ಸಿಲಿಂಡರ್ ಎಂಜಿನ್ 113 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ದೊಡ್ಡದಾದ 1.5-ಲೀಟರ್ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಫೋಕ್ಸ್‌ವ್ಯಾಗನ್ ಜೊತೆಗೂಡಿ ಸಹಭಾಗಿತ್ವ ಯೋಜನೆಯಡಿಯಲ್ಲಿ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿರುವ ಸ್ಕೋಡಾ ಕಂಪನಿಯು ಹಲವಾರು ಹೊಸ ಮಾದರಿಗಳನ್ನು ಬಿಡುಗಡೆ ಮಾಡಲಿದೆ. ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಪೆಟ್ರೋಲ್ ಕಾರುಗಳ ಜೊತೆಗೆ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಲಿದೆ. ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದೆ. ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.


Click it and Unblock the Notifications