ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಸ್ಕೋಡಾ(Skoda) ಕಂಪನಿಯು ಭಾರತದಲ್ಲಿ ಕುಶಾಕ್ ಕಾರು ಮಾದರಿಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಬಿಡುಗಡೆಯ ನಂತರ ಕಂಪನಿಯು ಕುಶಾಕ್ ಕಾರಿನ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಕುಶಾಕ್ ಕಾರು ಮಾದರಿಯು ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದು, ಹೊಸ ಕಾರು ಇದುವರೆಗೆ ಸುಮಾರು 15 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗಾಗಿ ಬುಕ್ಕಿಂಗ್ ಪಡೆದುಕೊಂಡಿದೆ. ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಕಳೆದ ತಿಂಗಳು ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಕಂಪನಿಯ ಇದೀಗ ಆರಂಭಿಕ ಮಾದರಿಯಲ್ಲಿ ಕೆಲವು ಸ್ಟ್ಯಾಂಡರ್ಡ್ ಫೀಚರ್ಸ್ ಅಳವಡಿಕೆಯೊಂದಿಗೆ ಬೆಲೆ ಹೆಚ್ಚಳ ಮಾಡಲಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಸ್ಕೋಡಾ ಕಂಪನಿಯು ಬಿಡುಗಡೆ ಮಾಡಿರುವ ಕುಶಾಕ್ ಕಾರಿನ ಹೊಸ ದರಪಟ್ಟಿಯಲ್ಲಿ 1.0-ಲೀಟರ್ ಆಕ್ಟಿವಾ ಪೆಟ್ರೋಲ್ ಮ್ಯಾನುವಲ್ ಮಾದರಿಯು ರೂ.10.49 ಲಕ್ಷದಿಂದ ರೂ.10.79 ಲಕ್ಷಕ್ಕೆ ಬೆಲೆ ಏರಿಕೆಯಾಗಿದ್ದು, ಸುಮಾರು ರೂ.30 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

1.0-ಲೀಟರ್ ಆಕ್ಟಿವಾ ಪೆಟ್ರೋಲ್ ಮ್ಯಾನುವಲ್ ಮಾದರಿಯನ್ನು ಹೊರತುಪಡಿಸಿ ಇನ್ನುಳಿದ ಮಾದರಿಗಳ ಬೆಲೆಯಲ್ಲಿ ಯಾವುದೇ ಮಾಡಿಲ್ಲವಾದರೂ ಬಿಡಿಭಾಗಗಳ ಬೆಲೆ ಏರಿಕೆಯಿಂದಾಗಿ ಶೀಘ್ರದಲ್ಲೇ ಇನ್ನುಳಿದ ಮಾದರಿಗಳ ಬೆಲೆಯಲ್ಲೂ ಏರಿಕೆಯ ಸುಳಿವು ನೀಡಿದ್ದು, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯು ಬೆಲೆ ಏರಿಕೆಯ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಕುಶಾಕ್ ಕಾರು ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ದುಬಾರಿ ಬೆಲೆ ನಡುವೆಯೂ ಹೊಸ ಕಾರು ಖರೀದಿಗಾಗಿ ನೀರಿಕ್ಷೆಗೂ ಮೀರಿ ಬುಕ್ಕಿಂಗ್ ದಾಖಲಾಗುತ್ತಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಇದರೊಂದಿಗೆ ಕಂಪನಿಯು ಕುಶಾಕ್ ಕಾರಿನ ಎಂಟ್ರಿ ಲೆವಲ್ ಮಾದರಿಗಳಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಆಕ್ಟಿವಾ ವೆರಿಯೆಂಟ್‌ನಲ್ಲಿ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸುತ್ತಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಸ್ಕೋಡಾ ಕಂಪನಿಯು ಕುಶಾಕ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಿದ ನಂತರ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಕಳೆದ ತಿಂಗಳು ಹೊಸ ಕಾರಿನ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ ಕೆಲವು ಸೇಫ್ಟಿ ಫೀಚರ್ಸ್‌ಗಳನ್ನು ಉನ್ನತೀಕರಿಸಿ ಬಿಡುಗಡೆ ಮಾಡಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಕುಶಾಕ್ ಕಾರಿನ ಸ್ಟೈಲ್ ವೆರಿಯೆಂಟ್‌ನಲ್ಲಿರುವ 1.0 ಲೀಟರ್ ಟಿಎಸ್ಐ ಎಟಿ ಮತ್ತು 1.5 ಲೀಟರ್ ಟಿಎಸ್ಐ ಡಿಜಿಎಸ್ ಮಾದರಿಗಳನ್ನು ಉನ್ನತೀಕರಿಸಲಾಗಿದ್ದು, ಎರಡು ಮಾದರಿಯಲ್ಲೂ ಆರು ಏರ್‌ಬ್ಯಾಗ್ ಜೋಡಣೆ ಮಾಡಿದ್ದು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೌಲಭ್ಯವನ್ನು ಸಹ ಹೊಸದಾಗಿ ಸೇರಿಸಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬೆಲೆ ಹೆಚ್ಚಿಸಿದ ಸ್ಕೋಡಾ

ಹೊಸ ಸೇಫ್ಟಿ ಫೀಚರ್ಸ್‌ಗಳ ನಂತರ 1.0 ಲೀಟರ್ ಟಿಎಸ್ಐ ಎಟಿ ಮತ್ತು 1.5 ಲೀಟರ್ ಟಿಎಸ್ಐ ಡಿಜಿಎಸ್ ಮಾದರಿಗಳ ಬೆಲೆಯನ್ನು ಕ್ರಮವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 15.80 ಲಕ್ಷದಿಂದ ರೂ. 16.20 ಲಕ್ಷಕ್ಕೆ ಮತ್ತು ರೂ.17.60 ಲಕ್ಷದಿಂದ ರೂ.18 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda india hiked kushaq base variant price details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X