ಶೀಘ್ರದಲ್ಲೇ ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ ಇಂಡಿಯಾ

ಸ್ಕೋಡಾ ಇಂಡಿಯಾ(Skoda India) ಕಂಪನಿಯು ಹೊಸ ಕಾರು ಉತ್ಪಾದನೆಯಲ್ಲಿ ಮಹತ್ವದ ಮುನ್ನಡೆ ಸಾಧಿಸುತ್ತಿದ್ದು, ಕಂಪನಿಯು ಮುಂದಿನ ಕೆಲವೇ ತಿಂಗಳಿನಲ್ಲಿ ಹೊಸ ಮಧ್ಯಮ ಕ್ರಮಾಂಕದ ಸೆಡಾನ್ ಮಾದರಿಯೊಂದನ್ನು ಪರಿಚಯಿಸಲು ಸಿದ್ದವಾಗುತ್ತಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಮಧ್ಯಮ ಕ್ರಮಾಂಕದ ಸೆಡಾನ್ ಮಾದರಿಯಾಗಿರುವ ರ‍್ಯಾಪಿಡ್ ಸ್ಥಾನಕ್ಕೆ ಹೊಸ ಕಾರು ಮಾದರಿಯನ್ನು ಪರಿಚಯಿಸಲಾಗುತ್ತಿದ್ದು, ಹೊಸ ಕಾರು ಮುಂದಿನ ತಿಂಗಳು ಅನಾವರಣಗೊಳ್ಳುತ್ತಿದೆ. ಹೀಗಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಕಾರಿನ ಉತ್ಪಾದನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದು, ರ‍್ಯಾಪಿಡ್ ಸ್ಥಾನಕ್ಕೆ ಸ್ಲಾವಿಯಾ ಸೆಡಾನ್ ಮಾದರಿಯನ್ನು ಪರಿಚಯಿಸಲು ಸಿದ್ದವಾಗಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

2001ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ರ‍್ಯಾಪಿಡ್ ಮಾದರಿಯು ಕಳೆದ ಹತ್ತು ವರ್ಷಗಳಲ್ಲಿ ಕೆಲವೇ ಕೆಲವು ಸಣ್ಣ ಪುಟ್ಟ ಬದಲಾವಣೆಗಳನ್ನು ಹೊರತುಪಡಿಸಿ ಯಾವುದೇ ದೊಡ್ಡ ಬದಲಾವಣೆಗಳನ್ನು ಕೊಂಡಿಲ್ಲ. ಜೊತೆಗೆ ಬಿಎಸ್-6 ಎಂಜಿನ್ ಕಡ್ಡಾಯ ನಂತರ ಹೊಸ ಎಂಜಿನ್ ಆಯ್ಕೆಯು ರ‍್ಯಾಪಿಡ್ ಸೆಡಾನ್ ಮಾರಾಟ ಇಳಿಕೆಗೆ ಪ್ರಮುಖ ಕಾರಣವಾಗಿದ್ದು, ಈ ಹಿನ್ನಲೆಯಲ್ಲಿ ಕಂಪನಿಯು ರ‍್ಯಾಪಿಡ್ ನ್ಯೂ ಜನರೇಷನ್ ಮಾದರಿಯ ಬದಲಾಗಿ ರ‍್ಯಾಪಿಡ್ ಸ್ಥಾನಕ್ಕೆ ಹೊಸ ಕಾರು ಮಾದರಿಯನ್ನೇ ಪರಿಚಯಿಸುತ್ತಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ಸದ್ಯ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಸ್ಕೋಡಾ ಕಂಪನಿಯು ಮತ್ತಷ್ಟು ಹೊಸ ಕಾರು ಉತ್ಪನ್ನಗಳೊಂದಿಗೆ ಪ್ರಬಲ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಕುಶಾಕ್ ಕಾರು ಮಾದರಿಯನ್ನು ಬಿಡುಗಡೆ ಹೊಚ್ಚ ಹೊಸ ಸ್ಲಾವಿಯಾ ಕಾರು ಮಾದರಿಯ ಬಿಡುಗಡೆಗೆ ಸಿದ್ದವಾಗಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಸಹಭಾಗಿತ್ವ ಯೋಜನೆ ಅಡಿ ಹೊಸ ಕಾರು ಮಾದರಿಯನ್ನು ಅಭಿವೃದ್ದಿಗೊಳಿಸುತ್ತಿರುವ ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ ಕಂಪನಿಗಳು ಹೊಸ ಸೆಡಾನ್ ಕಾರು ಮಾದರಿಯನ್ನು ಈಗಾಗಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಸಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್‌ಗಿಂತಲೂ ಆಕರ್ಷಕ ವಿನ್ಯಾಸದೊಂದಿಗೆ ಲಾಂಗ್‌ವೀಲ್ಹ್ ಬೆಸ್ ಪಡೆದುಕೊಂಡಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಹೊಸ ಸ್ಕೋಡಾ ಸ್ಲಾವಿಯಾ ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಎಂಕ್ಯೂಬಿ ಎಒ ಇನ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ್ದು, ಕುಶಾಕ್ ಕಾಂಪ್ಯಾಕ್ಟ್ ಎಸ್‍ಯುವಿಯು ಇದೇ ಪ್ಲಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಹೊಸ ಸ್ಲಾವಿಯಾ ಕಾರು ಮುಂದಿನ ತಿಂಗಳು 18ರಂದು ಅನಾವರಣಗೊಳಿಸುವುದಾಗಿ ಕಂಪನಿಯೇ ಮಾಹಿತಿ ನೀಡಿದ್ದು, ಹೊಸ ಕಾರನ್ನು ಸ್ಕೋಡಾ ಕಂಪನಿಯು ಸ್ಲಾವಿಯಾ ಎಂದು ಕರೆದರೆ ಫೋಕ್ಸ್‌ವ್ಯಾಗನ್ ಕಂಪನಿಯು ಅದೇ ಕಾರನ್ನು ಕೆಲವು ಬದಲಾವಣೆಗಳೊಂದಿಗೆ ವರ್ಚಸ್ ಹೆಸರಿನಲ್ಲಿ ವೆಂಟೊ ಕಾರಿನ ಬದಲಾಗಿ ಬಿಡುಗಡೆ ಮಾಡಬಹುದಾಗಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಸ್ಲಾವಿಯಾ ಹೊಸ ಎಂಕ್ಯೂಬಿ ಎಒ ಇನ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಮೊದಲ ಸೆಡಾನ್ ಆಗಿದ್ದು, ಇದು 4,541 ಎಂಎಂ ಉದ್ದ, 1,752 ಅಗಲ ಮತ್ತು 1,487 ಎಂಎಂ ಎತ್ತರದೊಂದಿಗೆ 2,651 ಎಂಎಂ ವ್ಹೀಲ್‌ಬೇಸ್‌ ಅನ್ನು ಒಳಗೊಂಡಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಹೊಸ ಕಾರು ಹೋಂಡಾ ಸಿಟಿ ಸೆಡಾನ್ ಮಾದರಿಗಿಂತೂ ಹೆಚ್ಚು ಉದ್ದವಾಗಿರುವುದಲ್ಲದೆ ಎತ್ತರವಾಗಿದ್ದು, ಹ್ಯುಂಡೈ ವೆರ್ನಾ ಮತ್ತು ಮಾರುತಿ ಸುಜುಕಿ ಸಿಯಾಜ್ ಕಾರುಗಳಿಗೂ ಭರ್ಜರಿ ಪೈಪೋಟಿ ನೀಡಲಿದೆ. ಸ್ಲಾವಿಯಾ ಕಾರು ಕುಶಾಕ್ ಮಾದರಿಯಂತೆ 1.0-ಲೀಟರ್ TSI ಮೂರು-ಸಿಲಿಂಡರ್ ಎಂಜಿನ್ ಮತ್ತು 1.5-ಲೀಟರ್ ನಾಲ್ಕು-ಸಿಲಿಂಡರ್ TSI ಎಂಜಿನ್ ಜೊತೆಗೆ ಎರಡೂ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಪಡೆಯಲಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಇದರಲ್ಲಿನ 1.0-ಲೀಟರ್ TSI ಮೂರು-ಸಿಲಿಂಡರ್ ಎಂಜಿನ್ 113 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಆಯ್ಕೆಯನ್ನು ನೀಡಲಾಗುತ್ತದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಹೈಎಂಡ್ ಮಾದರಿಯಲ್ಲಿರುವ 1.5-ಲೀಟರ್ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್ ಮತ್ತು 7-ಸ್ಪೀಡ್ DSG ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಅಲ್ಲದೆ ಹೊಸ ಕಾರು ಕುಶಾಕ್‌ನಲ್ಲಿರುವಂತೆ 1.5-ಲೀಟರ್ ಎಂಜಿನ್ ಹೊಂದಿರುವ ಸ್ಲಾವಿಯಾ ಸಕ್ರಿಯ ಸಿಲಿಂಡರ್ ತಂತ್ರಜ್ಞಾನದೊಂದಿಗೆ ಬರುತ್ತದೆ (ACT) ಇದು ಎಂಜಿನ್ ವೇಗದಲ್ಲಿದ್ದಾಗ ಎರಡು ಸಿಲಿಂಡರ್‌ಗಳನ್ನು ಆಟೋಮ್ಯಾಟಿಕ್ ಆಗಿ ಸ್ಥಗಿತಗೊಳಿಸುತ್ತದೆ. ಹೀಗಾಗಿ ಇಂಧನ ದಕ್ಷತೆಯನ್ನು ಹೆಚ್ಚಿಸುತ್ತದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಬಹುನಿರೀಕ್ಷಿತ ಸ್ಲಾವಿಯಾ ಸೆಡಾನ್ ನಾಚ್ ಬ್ಯಾಕ್ ತರಹದ ಸ್ಟೈಲಿಂಗ್ ಅನ್ನು ಹೊಂದಿರುತ್ತದೆ. ಇದು ಕ್ರೋಮ್ ಸರೌಂಡ್‌ನೊಂದಿಗೆ ಸಿಗ್ನೆಚರ್ ಬಟರ್‌ಫ್ಲೈ ಗ್ರಿಲ್, ಎಲ್ಇಡಿ ಡಿಆರ್‌ಎಲ್‌ಗಳೊಂದಿಗೆ ಚೂಪಾದ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ವಿಭಿನ್ನ ಕ್ಯಾರೆಕ್ಟರ್ ಲೈನ್‌ಗಳು, ಸ್ಲೋಪಿಂಗ್ ರೂಫ್‌ಲೈನ್, ಎಲ್‌ಇಡಿ ಟೈಲ್-ಲೈಟ್ಸ್ ಮತ್ತು ಡೈಮಂಡ್-ಕಟ್ ಅಲಾಯ್ ವ್ಹೀಲ್ ಗಳನ್ನು ಕೂಡಾ ಪಡೆಯಲಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಸ್ಲಾವಿಯಾ ಕಾರು ಫಾಕ್ಟರಿ ಫಿಟೆಡ್ ಎಲೆಕ್ಟ್ರಿಕ್ ಸನ್ ರೂಫ್, ಆಟೋಮ್ಯಾಟಿಕ್ ಹೆಡ್ ಲ್ಯಾಂಪ್ ಮತ್ತು ಆಟೋಮ್ಯಾಟಿಕ್ ವೈಪರ್ ಗಳು ಒಳಗೊಂಡಿರುತ್ತದೆ, ಇದರೊಂದಿಗೆ ಹಲವು ಹೊಸ ತಂತ್ರಜ್ಙಾನಗಳನ್ನು ಒಳಗೊಂಡಿರಬಹುದು ಎಂದು ಹೇಳಲಾಗುತ್ತಿದೆ.

ರ‍್ಯಾಪಿಡ್ ಸೆಡಾನ್ ಕಾರು ಉತ್ಪಾದನೆಯನ್ನು ಸ್ಥಗಿತಗೊಳಿಸಲು ಸಿದ್ದವಾದ ಸ್ಕೋಡಾ

ಸದ್ಯ ಮಾರುಕಟ್ಟೆಯಲ್ಲಿನ ರ‍್ಯಾಪಿಡ್ ಕಾರು ಸಿಂಗಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.29 ಲಕ್ಷ ಬೆಲೆ ಹೊಂದಿದ್ದು, ಹೊಸ ಸೆಡಾನ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.10 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.

Most Read Articles

Kannada
Read more on ಸ್ಕೋಡಾ skoda
English summary
Skoda india planning to discontinue rapid production
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X