ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

Skoda India ಕಂಪನಿಯು Volkswagen India ಕಂಪನಿ ಜೊತೆಗಿನ ಸಹಭಾಗಿತ್ವ ಯೋಜನೆಯಡಿಯಲ್ಲಿ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಜಾಗತಿಕ ಮಾರುಕಟ್ಟೆಗಾಗಿ ಶೀಘ್ರದಲ್ಲೇ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಕಳೆದ ವರ್ಷ 2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ವಾಹನಗಳ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಜೆಕ್ ಕಾರು ಉತ್ಪಾದನಾ ಕಂಪನಿಯಾಗಿರುವ Skoda ಕಂಪನಿಯು ಸಹ ಈಗಾಗಲೇ ವಿವಿಧ ಮಾದರಿಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಜ್ಜುಗೊಂಡಿದ್ದು, 2025 ವೇಳೆಗೆ ಶೇ.30 ರಷ್ಟು ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳ ಮಾರಾಟವನ್ನು ಹೊಂದಲು ಯೋಜನೆ ಹೊಂದಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

Skoda ಕಂಪನಿಯು ಭಾರತದಲ್ಲೂ ಸಹ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಇವಿ ಕಾರು ಬಿಡುಗಡೆ ಯಾವಾಗ ಎನ್ನುವ ಕುರಿತಂತೆ ಗ್ರಾಹಕರೊಬ್ಬರ ಪ್ರಶ್ನೆಗೆ Skoda ಸಿಇಓ ಜಾಕ್ ಹೋಲಿಸ್ ಪ್ರಕ್ರಿಯೆಸಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳು ಬಿಡುಗಡೆ ಮಾಡುವ ನಿಖರವಾದ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿರುವ ಜಾಕ್ ಹೋಲಿಸ್ ಅವರು ಮುಂದಿನ ಐದು ವರ್ಷಗಳಲ್ಲಿ ಹೊಸ ಇವಿ ಕಾರುಗಳನ್ನು ಪರಿಚಯಿಸುವುದಾಗಿ ಮಾತ್ರ ಮಾಹಿತಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತಂತೆ ಈ ಹಿಂದೆಯೂ ಪ್ರಕ್ರಿಯಿಸಿದ್ದ Skoda ಕಂಪನಿಯು ಚಾರ್ಜಿಂಗ್ ಮೂಲಭೂತ ಸೌಲಭ್ಯಗಳ ಬೆಳವಣಿಗೆಯ ಆಧಾರದ ಮೇಲೆ ಇವಿ ಕಾರುಗಳ ಪರಿಚಯಿಸುವುದಾಗಿ ಹೇಳಿಕೊಂಡಿತ್ತು.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಭಾರತದಲ್ಲಿ ಸದ್ಯ ಕೆಲವೇ ಕೆಲವು ನಗರಗಳಲ್ಲಿ ಸಾರ್ವಜನಿಕ ಬಳಕೆಯ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ಸೌಲಭ್ಯಗಳಿರುವುದು ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ವಿಳಂಬವಾಗುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ Skoda ಕಂಪನಿಯು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಹೆಚ್ಚುತ್ತಿರುವ ಹಿನ್ನಲೆ ಮುಂಬರವು ಕೆಲ ವರ್ಷಗಳಲ್ಲಿ ವಿವಿಧ ಇವಿ ಮಾದರಿಗಳನ್ನು ಬಿಡುಗಡೆ ಮಾಡಬಹುದಾಗಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯಗಳಿಲ್ಲದೆ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ನಷ್ಟ ಉಂಟು ಮಾಡಬಹುದು ಎನ್ನುವ ಲೆಕ್ಕಾಚಾರದಲ್ಲಿರುವ ಆಟೋ ಕಂಪನಿಗಳು ನಿಗದಿತ ಮಟ್ಟದ ಇವಿ ಮಾರಾಟಕ್ಕಾಗಿ ಅಗತ್ಯ ಪ್ರಮಾಣದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಕಾಯುತ್ತಿವೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಲಾಸ್ಟ್ ಮೈಲ್ ಕನೆಕ್ವಿಟಿವಾಗಿ ಚಾರ್ಜಿಂಗ್ ಸೌಲಭ್ಯಗಳಿಲ್ಲದಿರುವುದರಿಂದ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಗ್ರಾಹಕರು ಕೂಡಾ ಹಿಂದೇಟು ಹಾಕುತ್ತಿರುವ ಬಗ್ಗೆ ಹಲವಾರು ಅಧ್ಯಯನ ವರದಿ ಬಹಿರಂಗಗೊಳಿಸಿದ್ದು, ಎಲೆಕ್ಟ್ರಿಕ್ ವಾಹನಗಳ ಭವಿಷ್ಯವು ಚಾರ್ಜಿಂಗ್ ಸೌಲಭ್ಯಗಳು ಮತ್ತು ಬ್ಯಾಟರಿ ದರ ಇಳಿಕೆಯ ಮೇಲೆ ಅವಲಂಬಿತವಾಗಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಅದರಲ್ಲೂ ಎಲೆಕ್ಟ್ರಿಕ್ ವೆಹಿಕ್ ಮೊಲಿಬಿಟಿಯಲ್ಲಿ ಪ್ರಾಥಮಿಕ ಹಂತದಲ್ಲಿರುವ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ಆರ್ಥಿಕವಾಗಿ ಭಾರೀ ನಷ್ಟ ಎಂದೇ ಭಾವಿಸಿರುವ ಆಟೋ ಕಂಪನಿಗಳು ಇನ್ನು ಕೆಲವು ವರ್ಷ ಕಾಯ್ದು ನಂತರ ತಮ್ಮ ಭವಿಷ್ಯದ ವಾಹನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿವೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಇನ್ನು Skoda ಕಂಪನಿಯು ಯುರೋಪ್‌ನ ಪ್ರಮುಖ ಮಾರುಕಟ್ಟೆಗಳಿಗೆ ತನ್ನ ಮೊದಲ ಇವಿ ಕಾರು ಮಾದರಿಯಾದ Enyaq ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಭಾರತದಲ್ಲಿ 2023ರ ವೇಳೆಗೆ Skoda ಹೊಸ ಇವಿ ಮಾದರಿಯನ್ನು ಪರಿಚಯಿಸಬಹುದಾಗಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಜೊತೆಗೆ ಎಲೆಕ್ಟ್ರಿಕ್ ವಾಹನಗಳು ಸಾಮಾನ್ಯ ಕಾರುಗಳಿಂತಲೂ ಹೆಚ್ಚಿನ ಮಟ್ಟದ ದರ ಹೊಂದಿರುವುದೇ ಗ್ರಾಹಕರು ಖರೀದಿಗೆ ಹಿಂದೇಟು ಹಾಕುತ್ತಿರುವುದು ಕೂಡಾ ಹೆಚ್ಚಿನ ಮಟ್ಟದ ಇವಿ ವಾಹನಗಳು ಮಾರುಕಟ್ಟೆ ಪ್ರವೇಶಿಸಲು ಹಿಂದೇಟು ಹಾಕುತ್ತಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳೊಂದಿಗೆ ಸ್ಪರ್ಧಾತ್ಮಕ ಬೆಲೆಯಿದ್ದಾಗ ಮಾತ್ರ ಎಲೆಕ್ಟ್ರಿಕ್ ವಾಹನ ಮಾರಾಟವು ಆರ್ಥಿಕವಾಗಿ ಲಾಭದಾಯಕವಾಗಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಆದರೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಕಿರುವ ಲೀಥಿಯಂ ಅಯಾನ್ ಬ್ಯಾಟರಿ ಸಂಪನ್ಮೂಲಕ್ಕಾಗಿ ವಿದೇಶಿ ಮಾರುಕಟ್ಟೆಯನ್ನು ನೆಚ್ಚಿಕೊಂಡಿರುವುದು ಕೂಡಾ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದ್ದು, ದೇಶಿಯವಾಗಿಯೇ ಬ್ಯಾಟರಿ ಸಂಪನ್ಮೂಲ ಲಭ್ಯವಾದಲ್ಲಿ ಮಾತ್ರವೇ ಇವಿ ವಾಹನ ಬೆಲೆ ಇಳಿಕೆಯನ್ನು ನೀರಿಕ್ಷಿಸಬಹುದು ಎನ್ನಲಾಗುತ್ತಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತು ಮಾಹಿತಿ ಹಂಚಿಕೊಂಡ Skoda India

ಹೀಗಾಗಿ ಸದ್ಯಕ್ಕೆ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳನ್ನು ಹೊಸ ಎಮಿಷನ್‌ನಂತಯೇ ಮಾರಾಟಗೊಳಿಸಲಾಗುತ್ತಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗಿಳಿವಂತಾಗಲೂ ಹೆಚ್ಚಿನ ಮಟ್ಟದ ಚಾರ್ಜಿಂಗ್ ನಿಲ್ದಾಣಗಳು ಮತ್ತು ಇಂಧನ ಆಧಾರಿತ ವಾಹನ ವಾಹನ ಬೆಲೆಗೆ ಪೈಪೋಟಿ ನೀಡುವಂತಾದರೆ ಮಾತ್ರ ತೀವ್ರ ಬೆಳವಣಿಗೆ ಸಾಧಿಸಬಹುದಾಗಿದೆ.

Article Published On: Wednesday, August 25, 2021, 20:48 [IST]
English summary
Skoda india revealed electric vehicles launch details
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+