Just In
- 21 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 2 hrs ago
ಎಕ್ಸ್‌ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್‌ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ವರ್ಷಕ್ಕೆ 850 ಮಿಲಿಯನ್ ಸ್ಪುಟ್ನಿಕ್ V ಲಸಿಕೆ ತಯಾರಿಸಲಿದೆ ಭಾರತ
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಉತ್ಪಾದನೆ ಆರಂಭ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ನಾಲ್ಕನೇ ತಲೆಮಾರಿನ ಆಕ್ಟೀವಿಯಾ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಇದೀಗ ಈ ಸ್ಕೋಡಾ ಕಂಪನಿಯು ಔರಂಗಾಬಾದ್‌ನ ಘಟಕದಲ್ಲಿ ತನ್ನ ಆಕ್ಟೀವಿಯಾ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದೆ. ಇನ್ನು ಸ್ಕೋಡಾ ಆಕ್ಟೀವಿಯಾದ ಹಿಂದಿನ ತಲೆಮಾರಿನಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬೇಡಿಕೆಯೊಂದಿಗೆ ಉತ್ತಮ ಮಾರಾಟವನ್ನು ಕಂಡಿತ್ತು. ಆದರೆ ಸ್ಕೋಡಾ ಕಂಪನಿಯು ಈ ಆಕ್ಟೀವಿಯಾ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ.

ಕಳೆದ ವರ್ಷದಲ್ಲೇ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಆಕ್ಟೀವಿಯಾ ಕಾರನ್ನು ಬಿಡುಗಡೆಗೊಳಿಸಬೇಕಿತ್ತು. ಆದರೆ ಸ್ಕೋಡಾ ಕಂಪನಿಯು ಈ ಕಾರಿನ ಬಿಡುಗಡೆಯನ್ನು ಈ ವರ್ಷಕ್ಕೆ ಮುಂದೂಡಿದರು.

ಹೊಸ ಆಕ್ಟೀವಿಯಾ ಕಾರನ್ನು ಮುಂದಿನ ಎರಡು ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ಸ್ಕೋಡಾ ಕಂಪನಿ ಹೇಳಿದೆ. ನಾಲ್ಕನೇ ತಲೆಮಾರಿ ಸ್ಕೋಡಾ ಆಕ್ಟೀವಿಯಾ ಕಾರು ಹಲವು ಬದಲಾವಣೆಗಳೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಕೋಡಾ ಕಂಪನಿಯು ತನ್ನ ನಾಲ್ಕನೇ ತಲೆಮಾರಿನ ಆಕ್ಟೀವಿಯಾ ಕಾರನ್ನು ಬಿಡುಗಡೆಗೂ ಮುನ್ನ ಖಾಸಗಿಯಾಗಿ ಇತ್ತೀಚೆಗೆ ಅನಾವರಣಗೊಳಿಸಿದೆ. ಈ ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನ ಹಿಂದಿನ ಮಾದರಿಗೆ ಹೋಲಿಸಿದರೆ ನಯವಾದ ವಿನ್ಯಾಸವನ್ನು ಹೊಂದಿದೆ. ಈ ಹೊಸ ಕಾರಿನ ಗ್ರೀಲ್ ಅಗಲವಾಗಿ ಮತ್ತು ಅಗ್ರೇಸಿವ್ ಆಗಿದೆ. ಮುಂಭಾಗದ ಬಂಪರ್ ವಿನ್ಯಾಸವನ್ನು ಸಹ ಬದಲಾಯಿಸಲಾಗಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಮುಂಭಾಗದಲ್ಲಿ ವಿಶಾಲವಾದ ಏರ್ ಡ್ಯಾಮ್ ಜೊತೆಗೆ ಸಮತಲವಾದ ಎಲ್ಇಡಿ ಫಾಗ್ ಲ್ಯಾಂಪ್‌ಗಳನ್ನು ಎರಡೂ ಬದಿಗಳಲ್ಲಿ ಇರಿಸಲಾಗಿದ್ದು, ಎರಡು ಯುನಿಟ್ ಗಳನ್ನು ಕನೆಕ್ಟ್ ಮಾಡುವ ತೆಳುವಾದ ಕ್ರೋಮ್ ಸ್ಟ್ರಿಪ್ ಇದೆ. ಇದು ಕಂಪನಿಯ ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್ ಲೈಟ್ ಅನ್ನು ಕೂಡ ಪಡೆಯುತ್ತದೆ.

ಹಿಂಭಾಗದಲ್ಲಿ ಅಗ್ರೇಸಿವ್ ಆಗಿ ಕಾಣುವ ಬೂಟ್ ಲಿಡ್ ಅನ್ನು ಹೊಂದಿದೆ. ಇನ್ನು ಹೊಸ ದಪ್ಪ ಅಕ್ಷರಗಳಲ್ಲಿ ಬೂಟ್ ಲಿಡ್ ಉದ್ದಕ್ಕೆ ಸ್ಕೋಡಾ ಎಂದು ಬರೆಯಲಾಗಿದೆ. ಸೆಡಾನ್ ಹೊಸ ಅಲಾಯ್ ವೀಲ್ ವಿನ್ಯಾಸವನ್ನು ಸಹ ಪಡೆಯುತ್ತದೆ, ಇದು ಬಹಳ ಆಕರ್ಷಕವಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನ ಒಳಭಾಗದಲ್ಲಿ ಹೊಸ ಕ್ಯಾಬಿನ್ ವಿನ್ಯಾಸವನ್ನು ಪಡೆಯುತ್ತದೆ. ಆಡಿಯೋ ಮತ್ತು ಇತರ ಕಾರ್ಯಗಳಿಗಾಗಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಹೊಸ ಎರಡು-ಸ್ಪೋಕ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿರುತ್ತದೆ.

ಇನ್ನು ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಈಗ ಬ್ರ್ಯಾಂಡ್‌ನ ಕಾಕ್‌ಪಿಟ್ ವಿನ್ಯಾಸವನ್ನು ಒಳಗೊಂಡ 10.25-ಇಂಚಿನ ಡಿಸ್ ಪ್ಲೇಯನ್ನು ಹೊಂದಿರಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಗಾಗಿ ಸೆಡಾನ್ ಮತ್ತೊಂದು 10.25-ಇಂಚಿನ ಡಿಸ್ ಪ್ಲೇಯನ್ನು ಕೂಡ ಹೊಂದಿರಲಿದೆ.

ಸ್ಕೋಡಾ ಆಕ್ಟೀವಿಯಾ ಕಾರಿನಲ್ಲಿ ವಿಡಬ್ಲ್ಯೂ ಗ್ರೂಪ್‌ನ 2.0 ಎಲ್ ಟಿಎಸ್‌ಐ ಟರ್ಬೋಚಾರ್ಜ್ಡ್ ಡೈರೆಕ್ಟ್ ಇಂಜೆಕ್ಷನ್ ಪೆಟ್ರೋಲ್ ಎಂಜಿನ್ ಅನ್ನು ನೀಡಬಹುದು. ಈ ಎಂಜಿನ್ 190 ಬಿಹೆಚ್ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ

ಇನ್ನು ಈ ಸ್ಕೋಡಾ ಆಕ್ಟೀವಿಯಾ ಕಾರಿನಲ್ಲಿ 1.5-ಲೀಟರ್ ಟಿಎಸ್ಐ, ನಾಲ್ಕು ಸಿಲಿಂಡರ್, ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 148 ಬಿಹೆಚ್ಪಿ ಪವರ್ ಮತ್ತು 320 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ,

ನಾಲ್ಕನೇ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಉತ್ತಮ ಕಾರ್ಯಕ್ಷಮತೆಯನ್ನು ಸೆಡಾನ್ ಆಗಿರಲಿದೆ. ಇದರಿಂದ ಹೊಸ ಆಕ್ಟೀವಿಯಾ ಪರ್ಫಾಮೆನ್ಸ್ ಕಾರು ಪ್ರಿಯರನ್ನು ಕೂಡ ಸೆಳೆಯಬಹುದು. ಇನ್ನು ಯುರೋ ಎನ್‍ಸಿಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ಇದರಿಂದ ಉತ್ತಮ ಪರ್ಫಾಮೆನ್ಸ್ ಜೊತೆಗೆ ಹೆಚ್ಚಿನ ಸುರಕ್ಷತೆಯನ್ನು ಹೊಂದಿರುತ್ತದೆ.