ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆ ಆರಂಭಿಸಿದ ಸ್ಕೋಡಾ ಇಂಡಿಯಾ

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ಪ್ರೀಮಿಯಂ ಸ್ಕೋಡಾ ಕುಶಾಕ್ ಕಾರು ಬಿಡುಗಡೆ ಆರಂಭದಲ್ಲೇ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಪೂರ್ಣ ನಿಗದಿಯೆಂತೆ ಹೊಸ ಕಾರು ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆ ಆರಂಭಿಸಿದ ಸ್ಕೋಡಾ ಇಂಡಿಯಾ

ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯ ಖರೀದಿಗೆ ಸ್ಕೋಡಾ ಕಂಪನಿಯು ರೂ.25 ಸಾವಿರ ಮುಂಗಡ ಹಣ ನಿಗದಿಪಡಿಸಿದ್ದು, ಹೊಸ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆ ಆರಂಭಿಸಿದ ಸ್ಕೋಡಾ ಇಂಡಿಯಾ

ಕುಶಾಕ್ ಕಾರು ಮಾದರಿಯು ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆ ಸೇಫ್ಟಿ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದೆ.

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆ ಆರಂಭಿಸಿದ ಸ್ಕೋಡಾ ಇಂಡಿಯಾ

1.0-ಲೀಟರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆ ಆರಂಭಿಸಿದ ಸ್ಕೋಡಾ ಇಂಡಿಯಾ

ಕುಶಾಕ್ ಕಾರಿನ ವಿನ್ಯಾಸ ಮತ್ತು ತಾಂತ್ರಿಕ ಸೌಲಭ್ಯಗಳ ಬಗೆಗೆ ಹೇಳವುದಾದರೇ ಹೊಸ ಕುಶಾಕ್ ಕಾರಿನಲ್ಲಿ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆ ಆರಂಭಿಸಿದ ಸ್ಕೋಡಾ ಇಂಡಿಯಾ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆ ಆರಂಭಿಸಿದ ಸ್ಕೋಡಾ ಇಂಡಿಯಾ

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆ ಆರಂಭಿಸಿದ ಸ್ಕೋಡಾ ಇಂಡಿಯಾ

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, 6-ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ವಿತರಣೆ ಆರಂಭಿಸಿದ ಸ್ಕೋಡಾ ಇಂಡಿಯಾ

ಹೊಸ ಕುಶಾಕ್ ಕಾರು ಮಾದರಿಯನ್ನು ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯಡಿ ಅಭಿವೃದ್ದಿಗೊಳಿಸಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

More from DriveSpark

Article Published On: Monday, July 12, 2021, 17:53 [IST]
English summary
Skoda starts delivering Kushaq compact SUVs. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+