ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಸ್ಕೋಡಾ ಇಂಡಿಯಾ ಕಂಪನಿಯು ಹೊಸ ವರ್ಷದಿಂದಲೇ ಕಾರುಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಜನವರಿ 1ರಿಂದಲೇ ಹೊಸ ಕಾರುಗಳ ದರ ಏರಿಕೆ ಮಾಡುವುದಾಗಿ ಘೋಷಣೆ ಮಾಡಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಸ್ಕೋಡಾ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಲು ಮುಂದಾಗಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಸ್ಕೋಡಾ ಇಂಡಿಯಾ ಕಂಪನಿಯು ಕೂಡಾ ಇದೀಗ ತನ್ನ ಪ್ರಮುಖ ಕಾರು ಮಾದರಿಯ ಬೆಲೆಯಲ್ಲಿ ಹೆಚ್ಚಳ ಮಾಡುತ್ತಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಮಾಹಿತಿಗಳ ಪ್ರಕಾರ ಸ್ಕೋಡಾ ಕಂಪನಿಯು ತನ್ನ ಕಾರುಗಳ ಬೆಲೆಯನ್ನು ಶೇ.1ರಿಂದ ಶೇ. 2.50 ರಷ್ಟು ಹೆಚ್ಚಳ ಮಾಡಬಹುದು ಎನ್ನಲಾಗಿದ್ದು, ಹೆಚ್ಚಳವಾದ ಹೊಸ ದರ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ. ವಿವಿಧ ವೆರಿಯೆಂಟ್‌ಗಳಿಗೆ ಅನುಗುಣ ಹೊಸ ಕಾರಿನ ಬೆಲೆಯು ರೂ.5 ಸಾವಿರದಿಂದ ರೂ. 40 ಸಾವಿರ ತನಕ ಹೆಚ್ಚಳವಾಗಬಹುದಾಗಿದ್ದು, ಸೆಮಿಕಂಡಕ್ಟರ್ ಕೊರತೆಯೇ ಕಾರುಗಳ ಬೆಲೆಯಲ್ಲಿ ಹೆಚ್ಚಿನ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಕೋವಿಡ್‌ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿದ್ದು, 2021ರಲ್ಲೇ ಸ್ಕೋಡಾ ಸೇರಿದಂತೆ ಪ್ರಮುಖ ಕಾರು ಕಂಪನಿಗಳು ಮೂರರಿಂದ ನಾಲ್ಕು ಬಾರಿ ದರ ಹೆಚ್ಚಿಸಿವೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಮೂಲ ಬೆಲೆಯಲ್ಲಿ ಶೇ.1 ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿರುವುದರಿಂದ ಕಳೆದ ಕೆಲ ತಿಂಗಳಿನಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿ ರೂ. 40 ಸಾವಿರದಿಂದ ರೂ.1 ಲಕ್ಷದಷ್ಟು ಮತ್ತು ಮಧ್ಯಮ ಕ್ರಮಾಂಕದ ಕಾರುಗಳು ರೂ. 50 ಸಾವಿರದಿಂದ ರೂ. 1.20 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ವಿದೇಶಿ ಮಾರುಕಟ್ಟೆಗಳಿಂದ ಪ್ರಮುಖವಾಗಿ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮವೇ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಸ್ಕೋಡಾ ಇಂಡಿಯಾ ಕಂಪನಿಯು ಭಾರತದಲ್ಲಿ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ, ರ‍್ಯಾಪಿಡ್ ಸೆಡಾನ್, ಆಕ್ಟಿವಿಯಾ ಸೆಡಾನ್ ಮತ್ತು ಸೂಪರ್ಬ್ ಸೆಡಾನ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಹೊಸ ಕುಶಾಕ್ ಕಾರು ಮಾದರಿಯು ಸ್ಕೋಡಾ ಕಾರು ಮಾರಾಟ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಭಾರೀ ಬೇಡಿಕೆಯೊಂದಿಗೆ ಸ್ಕೋಡಾ ಕಂಪನಿಗೆ ಉತ್ತಮ ಆದಾಯ ತಂದುಕೊಡುತ್ತಿದ್ದು, ಕಳೆದ ಕೆಲ ವರ್ಷಗಳಿಂದ ಕಾರು ಮಾರಾಟದಲ್ಲಿ ಸತತ ಹಿನ್ನಡೆ ಅನುಭವಿಸಿದ್ದ ಕಂಪನಿಗೆ ಇದೀಗ ಕುಶಾಕ್ ಕಾರು ಮರುಜೀವ ನೀಡಿದೆ ಎಂದರೆ ತಪ್ಪಾಗುವುದಿಲ್ಲ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ರ‍್ಯಾಪಿಡ್ ಸೆಡಾನ್ ಹೊರತುಪಡಿಸಿ ಇನ್ನುಳಿದ ಕಾರು ಮಾದರಿಗಳ ಮಾರಾಟದಲ್ಲಿ ಸೀಮಿತ ಬೇಡಿಕೆ ಹೊಂದಿರುವ ಸ್ಕೋಡಾ ಕಂಪನಿಯು ಕುಶಾಕ್ ಮಾದರಿಯ ಬಿಡುಗಡೆಯ ಮೂಲಕ ಕಂಪನಿಯ ದಿಕ್ಕನ್ನೇ ಬದಲಿಸಿದ್ದು, ಮುಂಬರುವ ದಿನಗಳಲ್ಲಿ ಕಂಪನಿಯು ಮತ್ತಷ್ಟು ಹೊಸ ಕಾರುಗಳ ಮಾರಾಟ ಮಾಡುವ ಯೋಜನೆಯಲ್ಲಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಫೋಕ್ಸ್‌ವ್ಯಾಗನ್ ಕಂಪನಿಯ ಜೊತೆಗೆ ಸಹಭಾಗಿತ್ವದಲ್ಲಿ ಹೊಸ ಕಾರುಗಳನ್ನು ಅಭಿವೃದ್ದಿಗೊಳಿಸುತ್ತಿರುವ ಸ್ಕೋಡಾ ಕಂಪನಿಯು ಮಧ್ಯಮ ಗಾತ್ರದ ಐಷಾರಾಮಿ ಕಾರುಗಳ ಮಾರಾಟವನ್ನು ಹೊಂದಿದ್ದು, ರ‍್ಯಾಪಿಡ್ ನಂತರ ಕುಶಾಕ್ ಮಾದರಿಯನ್ನು ಆಕರ್ಷಕ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯುತ್ತಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಸ್ಕೋಡಾ ಕಂಪನಿಯು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಕುಶಾಕ್ ಕಾರು ಮಾದರಿಯ ಮೂಲಕ ಗ್ರಾಹಕರ ಆಯ್ಕೆಯನ್ನೇ ಬದಲಿಸುವಲ್ಲಿ ಯಶಸ್ವಿಯಾಗುತ್ತಿದ್ದು, ಕಂಪನಿಯು ಸಿ ಸೆಗ್ಮೆಂಟ್ ಸೆಡಾನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಸ್ಥಗಿತಗೊಳಿಸಿ ರ‍್ಯಾಪಿಡ್‌ಗಿಂತಲೂ ಉತ್ತಮ ವಿನ್ಯಾಸದ ಸ್ಲಾವಿಯಾ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಹೊಸ ವರ್ಷದಿಂದ ಕಾರುಗಳ ಬೆಲೆ ಹೆಚ್ಚಳ ಘೋಷಣೆ ಮಾಡಿದ ಸ್ಕೋಡಾ ಇಂಡಿಯಾ

ಸ್ಕೋಡಾ ರ‍್ಯಾಪಿಡ್ ಮಾತ್ರವಲ್ಲದೆ ಫೋಕ್ಸ್‌‌ವ್ಯಾಗನ್ ವೆಂಟೊ ಕಾರು ಮಾದರಿಯು ಕೂಡಾ ಮಾರಾಟದಿಂದ ಸ್ಥಗಿತಗೊಳ್ಳುತ್ತಿದ್ದು, ರ‍್ಯಾಪಿಡ್ ಮತ್ತು ವೆಂಟೊ ಸ್ಥಾನಕ್ಕೆ ಹೊಸ ವಿನ್ಯಾಸ ಮತ್ತು ಪವರ್‌ಫುಲ್ ಎಂಜಿನ್ ಆಯ್ಕೆ ಹೊಸ ಸೆಡಾನ್ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿವೆ. ಪ್ರಸ್ತುತ ಮಾರುಕಟ್ಟೆಯಲ್ಲಿನ ರ‍್ಯಾಪಿಡ್ ಸ್ಥಾನದಲ್ಲಿ ಸಂಪೂರ್ಣ ಹೊಸ ಮಾದರಿಯಾದ ಸ್ಲಾವಿಯಾ ಮಾರಾಟಗೊಳ್ಳಲಿದೆ.

More from DriveSpark

Article Published On: Saturday, December 18, 2021, 8:45 [IST]
English summary
Skoda india to increase car price from january 1 st 2022 details
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+