ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಸ್ಕೋಡಾ ಕಂಪನಿಯು ಫೋಕ್ಸ್‌ವ್ಯಾಗನ್ ಜೊತೆಗಿನ ಸಹಭಾಗಿತ್ವ ಯೋಜನೆಯಡಿ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಜಾಗತಿಕ ಮಾರುಕಟ್ಟೆಗಾಗಿ ಶೀಘ್ರದಲ್ಲೇ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ವಾಹನಗಳ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಜೆಕ್ ಕಾರು ಉತ್ಪಾದನಾ ಕಂಪನಿಯಾಗಿರುವ ಸ್ಕೋಡಾ ಕಂಪನಿಯು ಈಗಾಗಲೇ ವಿವಿಧ ಮಾದರಿಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಜ್ಜುಗೊಂಡಿದ್ದು, 2025 ವೇಳೆಗೆ ಶೇ.30 ರಷ್ಟು ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳ ಮಾರಾಟವನ್ನು ಹೊಂದಲು ಸಜ್ಜುಗೊಂಡಿದೆ.

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಆದರೆ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತಂತೆ ಸ್ಪಷ್ಟನೆ ನೀಡಿರುವ ಸ್ಕೋಡಾ ಕಂಪನಿಯು ಚಾರ್ಜಿಂಗ್ ಸೌಲಭ್ಯಗಳ ಆಧಾರದ ಮೇಲೆ ಇವಿ ಕಾರುಗಳ ಪರಿಚಯಿಸುವುದಾಗಿ ಹೇಳಿಕೊಂಡಿದ್ದು, ಭಾರತದಲ್ಲಿ ಸದ್ಯ ಕೆಲವೇ ಕೆಲವು ನಗರಗಳಲ್ಲಿ ಸಾರ್ವಜನಿಕ ಬಳಕೆಯ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ಸೌಲಭ್ಯಗಳಿರುವುದು ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ.

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯಗಳಿಲ್ಲದೆ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ನಷ್ಟ ಉಂಟು ಮಾಡಬಹುದು ಎನ್ನುವ ಲೆಕ್ಕಾಚಾರದಲ್ಲಿರುವ ಆಟೋ ಕಂಪನಿಗಳು ಹೆಚ್ಚಿನ ಮಟ್ಟದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಕಾಯುತ್ತಿವೆ.

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಲಾಸ್ಟ್ ಮೈಲ್ ಕನೆಕ್ವಿಟಿವಾಗಿ ಚಾರ್ಜಿಂಗ್ ಸೌಲಭ್ಯಗಳಿಲ್ಲದಿರುವುದರಿಂದ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಗ್ರಾಹಕರು ಹಿಂದೇಟು ಹಾಕುತ್ತಿರುವ ಬಗ್ಗೆ ಹಲವಾರು ಅಧ್ಯಯನ ವರದಿ ಬಹಿರಂಗಗೊಳಿಸಿದ್ದು, ಎಲೆಕ್ಟ್ರಿಕ್ ವಾಹನಗಳ ಭವಿಷ್ಯವು ಚಾರ್ಜಿಂಗ್ ಸೌಲಭ್ಯಗಳು ಮತ್ತು ಬ್ಯಾಟರಿ ದರ ಇಳಿಕೆಯ ಮೇಲೆ ನಿಂತಿದೆ.

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಅದರಲ್ಲೂ ಎಲೆಕ್ಟ್ರಿಕ್ ಮೊಲಿಬಿಟಿಯಲ್ಲಿ ಪ್ರಾಥಮಿಕ ಹಂತದಲ್ಲಿರುವ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ಆರ್ಥಿಕವಾಗಿ ಭಾರೀ ನಷ್ಟ ಎಂದೇ ಭಾವಿಸಿರುವ ಆಟೋ ಕಂಪನಿಗಳು ಇನ್ನು ಕೆಲವು ವರ್ಷ ಕಾಯ್ದು ನಂತರ ತಮ್ಮ ಭವಿಷ್ಯದ ವಾಹನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿವೆ.

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಸ್ಕೋಡಾ ಕಂಪನಿಯು ಕೂಡಾ ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆ ಯಾವಾಗ? ಎನ್ನುವ ಪ್ರಶ್ನೆಗೆ ಚಾರ್ಜಿಂಗ್ ಸೌಲಭ್ಯಗಳ ಮೇಲೆ ಭವಿಷ್ಯ ವಾಹನಗಳು ಬಿಡುಗಡೆಯಾಗಲಿವೆ ಎನ್ನುವ ಸುಳಿವು ನೀಡಿದ್ದಾರೆ. ಸ್ಕೋಡಾ ಕಂಪನಿಯು ಯುರೋಪ್‌ನಲ್ಲಿ ಈಗಾಗಲೇ ಏನ್ಯಾಕ್ ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಸಿದ್ದವಾಗಿದ್ದು, ಭಾರತದಲ್ಲಿ 2023ರ ಹೊಸ ಇವಿ ಮಾದರಿಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಜೊತೆಗೆ ಎಲೆಕ್ಟ್ರಿಕ್ ವಾಹನಗಳು ಸಾಮಾನ್ಯ ಕಾರುಗಳಿಂತಲೂ ಹೆಚ್ಚಿನ ಮಟ್ಟದ ದರ ಹೊಂದಿರುವುದೇ ಗ್ರಾಹಕರು ಖರೀದಿಗೆ ಹಿಂದೇಟು ಹಾಕುತ್ತಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳಿಗೆ ಸ್ಪರ್ಧಾತ್ಮಕ ಬೆಲೆಯಿದ್ದಾಗ ಮಾತ್ರ ಎಲೆಕ್ಟ್ರಿಕ್ ವಾಹನ ಮಾರಾಟವು ಆರ್ಥಿಕವಾಗಿ ಲಾಭದಾಯಕವಾಗಲಿದೆ.

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಆದರೆ ಎಲೆಕ್ಟ್ರಿಕ್ ವಾಹನಗಳಿಗೆ ಬೇಕಿರುವ ಲೀಥಿಯಂ ಅಯಾನ್ ಬ್ಯಾಟರಿ ಸಂಪನ್ಮೂಲಕ್ಕಾಗಿ ವಿದೇಶಿ ಮಾರುಕಟ್ಟೆಯನ್ನು ನೆಚ್ಚಿಕೊಂಡಿರುವುದು ಕೂಡಾ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದ್ದು, ದೇಶಿಯವಾಗಿಯೇ ಬ್ಯಾಟರಿ ಸಂಪನ್ಮೂಲ ಲಭ್ಯವಾದಲ್ಲಿ ಮಾತ್ರವೇ ಇವಿ ವಾಹನ ಬೆಲೆ ಇಳಿಕೆಯನ್ನು ನೀರಿಕ್ಷಿಸಬಹುದು ಎನ್ನಲಾಗುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಸಾಧ್ಯವಿಲ್ಲವೆಂದ ಸ್ಕೋಡಾ

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳನ್ನು ಹೊಸ ಎಮಿಷನ್‌ನಂತಯೇ ಮಾರಾಟಗೊಳಿಸಲಾಗುತ್ತಿದ್ದು, ಎಲೆಕ್ಟ್ರಿಕ್ ಕಾರುಗಳನ್ನು ಮುಂದಿನ ಎರಡು ವರ್ಷಗಳ ಕಾಯ್ದುನೋಡಲು ಮುಂದಾಗಿದೆ.

Article Published On: Monday, March 29, 2021, 16:35 [IST]
English summary
Skoda Unlikely To Bring Electric Cars In India. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+