Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India

ಸ್ಕೋಡಾ ಇಂಡಿಯಾ(Skoda India) ಕಂಪನಿಯು ತನ್ನ ಹೊಸ ಕುಶಾಕ್(Kuhaq) ಕಾರಿನೊಂದಿಗೆ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನಲ್ಲಿ ಕಂಪನಿಯು ಶೀಘ್ರದಲ್ಲೇ ಮತ್ತೊಂದು ಮಧ್ಯಮ ಕ್ರಮಾಂಕದ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಲು ಮುಂದಾಗಿದೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India ಕಂಪನಿ

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಆಕ್ಟಿವ್, ಆಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಸ್ಟ್ಯಾಂಡರ್ಡ್ ಆಗಿ ಪ್ರತಿ ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಿದೆ. ಟಾಪ್ ಎಂಡ್ ಮಾದರಿಗಳಲ್ಲಿ ಮಾತ್ರ 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಹೊಸ ಕಾರು ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯಡಿ ಅಭಿವೃದ್ದಿಗೊಂಡಿದ್ದು, ಕುಶಾಕ್ ಮಾದರಿಯಲ್ಲಿನ ಬಹುತೇಕ ತಾಂತ್ರಿಕ ಅಂಶಗಳನ್ನು ಟೈಗುನ್ ಮಾದರಿಯಲ್ಲೂ ಸಹ ನೋಡಬಹುದಾಗಿದೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India

ಹೊಸ ಕಾರಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲು ನಿರ್ಧರಿಸಿರುವ ಸ್ಕೋಡಾ ಕಂಪನಿಯು ಆಕ್ಟಿವ್ 1.0 ಲೀಟರ್ ಟಿಎಸ್ಐ ಎಂಟಿ ಮತ್ತು ಆಂಬಿನೇಷನ್ 1.0 ಲೀಟರ್ ಎಂಟಿ ಮಾದರಿಯ ನಡುವಿನ ಸ್ಥಾನದಲ್ಲಿ ಹೊಸ ಮಾದರಿ ಬಿಡುಗಡೆಯಾಗಬಹುದು ಎನ್ನಲಾಗಿದೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India

ಹೊಸ ವೆರಿಯೆಂಟ್ 1.0-ಲೀಟರ್ ಟಿಎಸ್ಐ ಎಂಜಿನ್‌ನೊಂದಿಗೆ ಮ್ಯಾನುವಲ್ ಅಥವಾ ಆಟೋಮ್ಯಾಟಿಕ್ ಆವೃತ್ತಿಯೊಂದಿಗೆ ಬಿಡುಗಡೆಯಾಗಲಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ. 13 ಲಕ್ಷದಿಂದ ರೂ. 13.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India

ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಸ್ಕೋಡಾ ಕುಶಾಕ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರು ಖರೀದಿಗಾಗಿ ಇದುವರೆಗೆ 12 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India

ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಕೋಡಾ ಕುಶಾಕ್ ಇದುವರೆಗೆ ಸುಮಾರು 7 ಸಾವಿರಕ್ಕೂ ಹೆಚ್ಚು ಯುನಿಟ್ ಗ್ರಾಹಕರ ಕೈಸೇರಿವೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India

ಬುಕ್ಕಿಂಗ್ ಆಧಾರದ ಹೊಸ ಕುಶಾಕ್ ಕಾರು ವಿತರಣೆ ಆರಂಭಿಸಿರುವ ಸ್ಕೋಡಾ ಕಂಪನಿಯು ಹೊಸ ಕಾರಿನೊಂದಿಗೆ ಮತ್ತಷ್ಟು ಹೊಸ ಮಾರಾಟ ಮಳಿಗೆಗಳಿಗೂ ಚಾಲನೆ ನೀಡುತ್ತಿದ್ದು, ಹೊಸ ಮಾರಾಟ ಮಳಿಗೆಗಳೊಂದಿಗೆ ಕುಶಾಕ್ ಕಾರಿಗೆ ಇನ್ನು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಆರಂಭಿಕ ಮಾದರಿಗಳಲ್ಲೂ ಆಟೋಮ್ಯಾಟಿಕ್ ಪರಿಚಯಿಸುವಂತೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬೇಡಿಕೆ ಸಲ್ಲಿಸುತ್ತಿದ್ದಾರೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India

ಹೀಗಾಗಿ ಮುಂಬರುವ ದಿನಗಳಲ್ಲಿ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಅಪ್‌ಡೆಟ್ ಪಡೆದುಕೊಳ್ಳಲಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರಿನ ಟಾಪ್ ಎಂಡ್ ಮಾದರಿಗೆ ಹೆಚ್ಚಿನ ಮಟ್ಟದ ಬೇಡಿಕೆ ದಾಖಲಾಗಿದೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India ಕಂಪನಿ

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India ಕಂಪನಿ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India ಕಂಪನಿ

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

Kushaq ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Skoda India

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, 6-ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

Most Read Articles

Kannada
Read more on ಸ್ಕೋಡಾ skoda
English summary
Skoda india working on kushaq mid level variant details
Story first published: Wednesday, October 27, 2021, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X