ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಕುಶಾಕ್ ಎಸ್‌ಯುವಿ ಕಾರು ಮಾದರಿಯ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿ ಬಿಡುಗಡೆ ಸಜ್ಜುಗೊಂಡಿದ್ದು, ಕಂಪನಿಯು ಶೀಘ್ರದಲ್ಲೇ ಹೊಸ ಕಾರಿನ ಅಧಿಕೃತ ಮಾರಾಟ ಪ್ರಕ್ರಿಯೆಯನ್ನು ಆರಂಭಿಸುವ ಯೋಜನೆಯಲ್ಲಿದೆ.

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಕುಶಾಕ್ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಯ ಮೂಲಕ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ನೀರಿಕ್ಷೆಯಿಟ್ಟುಕೊಂಡಿರುವ ಸ್ಕೋಡಾ ಕಂಪನಿಯು ಹೊಸ ಕಾರಿನ ಹೈ ಎಂಡ್ ಆವೃತ್ತಿಯಾಗಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಆರಂಭಿಕವಾಗಿ ಹೊಸ ಕಾರನ್ನು ಎರಡು ಸಾಮಾನ್ಯ ಮಾದರಿಯಲ್ಲಿ ಮಾತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ.

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಐಷಾರಾಮಿ ಅನುಭವ ನೀಡುವ ಮಾಂಟೆ ಕಾರ್ಲೊ ಎಡಿಷನ್‌ಗಳು ಸ್ಕೋಡಾ ವಿವಿಧ ಕಾರುಗಳಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿದ್ದು, ಹೊಸ ಮಧ್ಯಮ ಗಾತ್ರದ ಎಸ್‌ಯುವಿ ಕುಶಾಕ್ ಮಾದರಿಯಲ್ಲೂ ಹೊಸ ಆವೃತ್ತಿಯು ಬಿಡುಗಡೆಯಾಗುವುದು ಖಚಿತವಾಗಿದೆ.

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಸ್ಟ್ಯಾಂಡರ್ಡ್ ಮಾದರಿಗಿಂತಲೂ ತುಸು ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ಹೊಂದಲಿರುವ ಮಾಂಟೆ ಕಾರ್ಲೊ ಎಡಿಷನ್‌ಗಳು ಹೈ ಎಂಡ್ ಆವೃತ್ತಿಗಳಲ್ಲಿ ಮಾತ್ರ ಮಾರಾಟವಾಗಲಿದ್ದು, ಸ್ಪೋರ್ಟಿ ಲುಕ್ ಜೊತೆಗೆ ಪರ್ಫಾಮೆನ್ಸ್‌ಗೆ ಪೂರಕವಾದ ಪ್ರಮುಖ ಬದಲಾವಣೆಗಳನ್ನು ಹೊಂದಿದೆ.

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಸದ್ಯ ಸ್ಕೋಡಾ ಕಂಪನಿಯು ಕುಶಾಕ್ ಕಾರಿನ ಸ್ಟ್ಯಾಂಡರ್ಡ್ ಮಾದರಿಗಳನ್ನು ಮುಂಬರುವ ಜೂನ್ ವೇಳೆಗೆ ಅಧಿಕೃತ ಮಾರಾಟ ಆರಂಭಿಸುವ ಸಾಧ್ಯತೆಗಳಿದ್ದು, ಗ್ರಾಹಕರ ಬೇಡಿಕೆಯ ಆಧಾರದ ಮೇಲೆ ಮಾಂಟೆ ಕಾರ್ಲೊ ಆವೃತ್ತಿಯನ್ನು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲಿದೆ. ಸದ್ಯಕ್ಕೆ ಬಿಡುಗಡೆಯಾಗಲಿರುವ ಸ್ಟ್ಯಾಂಡರ್ಡ್ ಕುಶಾಕ್ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದ್ದು, ಒಳಭಾಗದ ಸೌಲಭ್ಯಗಳು ಕೂಡಾ ಆಕರ್ಷಕವಾಗಿವೆ.

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯಲ್ಲಿ ದೊಡ್ಡದಾದ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್, ಡ್ಯುಯಲ್ ಹೆಡ್‍‍ಲ್ಯಾಂಪ್‍, ಎಲ್ಇಡಿ ಡಿಆರ್‌ಎಲ್ಎಸ್, ಏರ್ ಇನ್‍‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ ಜೋಡಿಸಲಾಗಿದೆ.

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹಾಗೆಯೇ 17-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ವೀಂಡೋಗಳ ಸುತ್ತಲೂ ಕ್ರೋಮ್ ಸ್ಟ್ರೀಪ್, ಸ್ಲಿಕ್ ಎಲ್ಇಡಿ ಟೈಲ್‌ಲೈಟ್, ರೂಫ್ ಮೌಟೆಂಡ್ ಸ್ಪಾಯ್ಲರ್, ಎಲ್ಇಡಿ ಸ್ಟಾಪ್ ಲ್ಯಾಂಪ್ ಜೊತೆಗೆ 10-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಮಲ್ಟಿ ಫಂಕ್ಷನಲ್ ಟು ಸ್ಪೋಕ್ ಸ್ಟಿರಿಂಗ್ ವೀಲ್ಹ್ ಹೊಂದಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕಾರಿನಲ್ಲಿ ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, ಎಲೆಕ್ಟ್ರಿಕ್ ಸನ್‌ರೂಫ್, ಸಿ ಫೋರ್ಟ್ ವೈರ್‌ಲೆಸ್ ಚಾರ್ಜರ್ ಸೌಲಭ್ಯ ಸೇರಿದಂತೆ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಆರಂಭಿಕ ಆವೃತ್ತಿಯು 113-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 148-ಬಿಎಚ್‍‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದ್ದು, 1.5-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಎಸ್‌ಜಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಮಾಡಬಹುದಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕುಶಾಕ್ ಕಾರು ಮಾದರಿಯಲ್ಲಿ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಕ್ಯಾಂಡಿ ವೈಟ್, ರಿಫ್ಲೆಕ್ಸ್ ಸಿಲ್ವರ್, ಕಾರ್ಬನ್ ಸ್ಟೀಲ್, ಹನಿ ಆರೇಂಜ್ ಮತ್ತು ಟೊರಾಂಡೊ ರೆಡ್(ಡ್ಯುಯಲ್ ಟೋನ್) ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ನೀರಿಕ್ಷಿಸಲಾಗಿದೆ.

More from DriveSpark

Article Published On: Tuesday, March 23, 2021, 12:12 [IST]
English summary
Skoda Working On Monte Carlo Edition Of Kushaq Could Be Launched Next Year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+