Just In
Don't Miss!
- News
"ಕಾಂಗ್ರೆಸ್ ಈಗ ಒಡೆದ ಮನೆ; ಮೂರು ಗುಂಪುಗಳ ನಡುವೆ ನಿರಂತರ ಗುದ್ದಾಟ''
- Finance
30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಕ್ಯಾಪ್ಜೆಮಿನಿ
- Sports
ಶ್ರೀಲಂಕಾ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಪ್ರಕಟ, ಗೇಲ್ ವಾಪಸ್
- Movies
ರಾಬರ್ಟ್ ಸಂಭ್ರಮ: ವಿನಯದಿಂದ ತೆಲುಗು ಅಭಿಮಾನಿಗಳ ಮನಸು ಕದ್ದ ದರ್ಶನ್
- Lifestyle
ಮಾರ್ಚ್ ತಿಂಗಳಲ್ಲಿ ವಿವಾಹವಾಗಲು ಇಲ್ಲಿದೆ ಶುಭದಿನಾಂಕಗಳು
- Education
RBI Grade B Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಕರೋಕ್ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ 2020ರ ಮೇ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಸ್ಕೋಡಾ ಕರೋಕ್ ಪ್ರೀಮಿಯಂ ಮಿಡ್ ಎಸ್ಯುವಿಯ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಸ್ಕೋಡಾ ಕಂಪನಿಯು ಭಾರತದಲ್ಲಿ ಕರೋಕ್ ಮಾದರಿಯ ಮೊದಲ ಬ್ಯಾಚ್ ಆಗಿ 1,000 ಯುನಿಟ್ ಗಳನ್ನು ಮಾತ್ರ ಬಿಡುಗಡೆಗೊಳಿಸಿತ್ತು. ಮೊದಲ ಬ್ಯಾಚ್ ಬಿಡುಗಡೆಯಾದ ಕೆಲವೇ ತಿಂಗಳುಗಳಲ್ಲಿ ಮಾರಾಟವಾಯ್ತು. ವರದಿಗಳ ಪ್ರಕಾರ, ಕಂಪನಿಯು ಭಾರತದಲ್ಲಿ ಕರೋಕ್ ಎಸ್ಯುವಿಯನ್ನು ಸ್ಥಳೀಯ ಅಭಿವೃದ್ಧಿಪಡಿಸಲು ಸ್ಜೋಡಾ ಕಂಪನಿಯು ಸಜ್ಜಾಗಿದೆ.

ಹೆಚ್ಚುವರಿಯಾಗಿ, ಸ್ಕೋಡಾ ಮುಂದಿನ ಬ್ಯಾಚ್ ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಜೋಡಣೆಯನ್ನು ಮಾಡಬಹುದು. ಸ್ಕೋಡಾ ಇಂಡಿಯಾ ಕಂಪನಿಯ ನಿರ್ದೇಶಕ ಝಾಕ್ ಹೋಲಿಸ್ ಬಿಡುಗಡೆಯ ಸಮಯದಲ್ಲಿ, ಕರೋಕ್ ಎಸ್ಯುವಿ ಉತ್ತಮ ಪ್ರತಿಕ್ರಿಯೆ ಪಡೆಯುವಲ್ಲಿ ಯಶಸ್ವಿಯಾದರೆ, ಕಂಪನಿಯು ಸ್ಥಳೀಯವಾಗಿ ಜೋಡಿಸುವುದನ್ನು ನೋಡಬಹುದು ಎಂದು ಹೇಳಿದ್ದರು.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್ಯುವಿ300

ಸ್ಕೋಡಾ ಕರೋಕ್ ಎಸ್ಯುವಿಯ ಬಗ್ಗೆ ಹೇಳುವುದಾದರೆ, ಹಲವಾರು ಆಧುನಿಕ ಫೀಚರ್ಸ್ಗಳನ್ನು ಹೊಂದಿರಲದೆ. ಈ ಸ್ಕೋಡಾ ಕರೋಕ್ ಎಸ್ಯುವಿಯಲ್ಲಿ ಎಎಫ್ಎಸ್ (ಅಡಾಪ್ಟಿವ್ ಫ್ರಂಟ್ ಲೈಟಿಂಗ್), ಸಿಗ್ನೇಚರ್ ಬಟರ್ಫ್ಲೈ ಗ್ರಿಲ್, ಸ್ಕ್ವೇರ್ ವೀಲ್ ಆರ್ಚ್, ಆರ್ 17 ಅರೋನಿಯಾ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಮತ್ತು ಸಿ-ಆಕಾರದ ಎಲ್ಇಡಿ ಟೈಲ್ ಲ್ಯಾಂಪ್ಗಳೊಂದಿಗೆ ಸ್ಲಿಕ್ ಎಲ್ಇಡಿ ಹೆಡ್ಲ್ಯಾಂಪ್ ಅನ್ನು ಹೊಂದಿದೆ.

ಈ ಎಸ್ಯುವಿಯ ಇಂಟಿರಿಯರ್ನಲ್ಲಿ ಆ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್, ಸನ್ರೂಫ್ ಮತ್ತು ಲೆದರ್ ಅಪ್ಹೋಲೆಸ್ಟರಿ ಸೀಟುಗಳನ್ನು ಹೊಂದಿವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಕೋಡಾ ಕರೋಕ್ ಎಸ್ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್ಫಾರ್ಮ್ ಅನ್ನು ಆಧರಿಸಿದೆ. ಈ ಎಸ್ಯುವಿಯಲ್ಲಿ 1.5 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 7 ಸ್ಪೀಡ್ ಡಿಎಸ್ಜಿ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಈ ಸ್ಕೋಡಾ ಕರೋಕ್ ಎಸ್ಯುವಿಯನ್ನು ಡೀಸೆಲ್ ಎಂಜಿನ್ ಅಯ್ಕೆಯನ್ನು ಹೊಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಇನ್ನು ಸ್ಕೋಡಾ ಕರೋಕ್ ಎಸ್ಯುವಿಯಲ್ಲಿ ಸುರಕ್ಷತೆಗಾಗಿ 9 ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಇಎಸ್ಸಿ, ಹಿಲ್-ಸ್ಟಾರ್ಟ್ ಅಸಿಸ್ಟ್ ಫ್ರಂಟ್, ರೇರ್ ಪಾರ್ಕಿಂಗ್ ಸೆನ್ಸರ್ಗಳು ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಸ್ಕೋಡಾ ಕರೋಕ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಜಿ ಹೆಕ್ಟರ್, ಜೀಪ್ ಕಂಪಾಸ್, ಫೋಕ್ಸ್ ವ್ಯಾಗನ್ ಟಿ-ರಾಕ್ ಮತ್ತು ಹ್ಯುಂಡೈ ಟ್ಯೂಸಾನ್ ಎಸ್ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.