ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಹೊಸ ಕುಶಾಕ್(Kushaq) ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಿದ ನಂತರ ಸ್ಕೋಡಾ(Skoda) ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಬದಲಾವಣೆಗಳನ್ನು ಪರಿಚಯಿಸಿದ್ದು, ಹೊಸ ಕಾರಿನಲ್ಲಿ ಶೀಘ್ರದಲ್ಲೇ ಹೊಸ ಸುರಕ್ಷಾ ವೈಶಿಷ್ಟ್ಯತೆಗಳನ್ನು ಹೊಂದಿರುವ ಡಿಜಿಎಸ್ ವೆರಿಯೆಂಟ್ ಬಿಡುಗಡೆಗಾಗಿ ಸಿದ್ದವಾಗಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಸ್ಕೋಡಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕಳೆದ ತಿಂಗಳ ಹಿಂದಷ್ಟೇ ಹೈ ಎಂಡ್ ಮಾದರಿಯಲ್ಲಿ ಪ್ರಮುಖ ಬದಲಾವಣೆ ಪರಿಚಯಿಸುವುದರ ಜೊತೆಗೆ ಹಲವಾರು ಸೇಫ್ಟಿ ಫೀಚರ್ಸ್‌ಗಳನ್ನು ಉನ್ನತೀಕರಿಸಿದ್ದು, ಇದೀಗ ಕಂಪನಿಯು 1.5 ಡಿಜಿಎಸ್ ಮಾದರಿಯ ಆರಂಭಿಕ ಮಾದರಿಯಲ್ಲೂ ಸಹ ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಕುಶಾಕ್ ಮಾದರಿಯ ಹೊಸ ವೆರಿಯೆಂಟ್ ಬಿಡುಗಡೆ ಕುರಿತಂತೆ ಸ್ಕೋಡಾ ಕಂಪನಿಯೇ ಗ್ರಾಹಕರೊಬ್ಬರ ಪ್ರಶ್ನೆಗೆ ಟ್ವಿಟರ್ ಖಾತೆಯಲ್ಲಿ ಉತ್ತರಿಸಿದ್ದು, 6 ಏರ್‌ಬ್ಯಾಗ್ ಮತ್ತು ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಹೊಂದಿರುವ ಹೊಸ ಮಾದರಿಯು ಮುಂದಿನ ತಿಂಗಳು ನವೆಂಬರ್ ಆರಂಭದಲ್ಲಿ ಬಿಡುಗಡೆಯಾಗುವುದಾಗಿ ಖಚಿತಪಡಿಸಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ನವೆಂಬರ್ ಆರಂಭದಲ್ಲಿ ಬಿಡುಗಡೆಯಾಗಲಿರುವ ಹೊಸ ಮಾದರಿಯನ್ನು ನವೆಂಬರ್ ಅಂತ್ಯಕ್ಕೆ ವಿತರಣೆಯಾಗಲಿದ್ದು, ಹೊಸ ಮಾದರಿಯು ಉನ್ನತೀಕರಿಸಿದ ಸೇಫ್ಟಿ ಫೀಚರ್ಸ್‌ಗಳಿಂದಾಗಿ ತುಸು ದುಬಾರಿಯಾಗಿರಲಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಕುಶಾಕ್ ಕಾರು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ದುಬಾರಿ ಬೆಲೆ ನಡುವೆಯೂ ಹೊಸ ಕಾರು ಖರೀದಿಗಾಗಿ ನೀರಿಕ್ಷೆಗೂ ಮೀರಿ ಬುಕ್ಕಿಂಗ್ ದಾಖಲಾಗುತ್ತಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಕೋಡಾ ಕುಶಾಕ್ ಮಾದರಿಯು ಅತಿ ಕಡಿಮೆ ಅವಧಿಯಲ್ಲಿ 12 ಸಾವಿರಕ್ಕೂ ಬುಕ್ಕಿಂಗ್‌ ಗುರಿತಲುಪಿದ್ದು, ಹೊಸ ಕಾರು ವಿತರಣೆ ಆರಂಭಿಸಿದ ನಂತರ ಇದುವರೆಗೆ ಸುಮಾರು 7 ಸಾವಿರಕ್ಕೂ ಹೆಚ್ಚು ಯುನಿಟ್ ಗ್ರಾಹಕರ ಕೈಸೇರಿವೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ಹೊಸ ಸೇಫ್ಟಿ ಫೀಚರ್ಸ್‌ನೊಂದಿಗೆ ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಮಾದರಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಆಟೋಮ್ಯಾಟಿಕ್ ಮಾದರಿಗಳು ಉತ್ತಮ ಬೇಡಿಕೆ ಹೊಂದಿವೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಇದರೊಂದಿಗೆ ಕಂಪನಿಯು ಕುಶಾಕ್ ಕಾರಿನ ಎಂಟ್ರಿ ಲೆವಲ್ ಮಾದರಿಗಳಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಆಕ್ಟಿವಾ ವೆರಿಯೆಂಟ್‌ನಲ್ಲಿ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸುತ್ತಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ಸ್ಕೋಡಾ ಕಂಪನಿಯು ಹೊಸ ಕಾರಿನೊಂದಿಗೆ ಮತ್ತಷ್ಟು ಹೊಸ ಮಾರಾಟ ಮಳಿಗೆಗಳಿಗೂ ಚಾಲನೆ ನೀಡುತ್ತಿದ್ದು, ಹೊಸ ಮಾರಾಟ ಮಳಿಗೆಗಳೊಂದಿಗೆ ಕುಶಾಕ್ ಕಾರಿಗೆ ಇನ್ನು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ Skoda Kushaq ಡಿಜಿಎಸ್ ವೆರಿಯೆಂಟ್

ದೇಶಾದ್ಯಂತ ಪ್ರಮುಖ ನಗರಗಳಲ್ಲಿ 150 ಕಾರು ಮಾರಾಟ ಮಳಿಗೆಗಳನ್ನು ಹೊಂದಿರುವ ಸ್ಕೋಡಾ ಕಂಪನಿಯು ಮುಂದಿನ ಎರಡು ವರ್ಷದೊಳಗೆ 75 ಹೊಸ ಮಾರಾಟ ಮಳಿಗೆಗಳೊಂದಿಗೆ 225 ಮಾರಾಟ ಮಳಿಗೆ ಹೊಂದುವ ಗುರಿಹೊಂದಿದ್ದು, ಹೊಸ ಮಾರಾಟ ಮಳಿಗೆಗಳು ಕುಶಾಕ್ ಸೇರಿದಂತೆ ವಿವಿಧ ಕಾರು ಮಾದರಿಗಳ ಮಾರಾಟ ಸಂಖ್ಯೆ ಹೆಚ್ಚಿಸಲು ಸಹಕಾರಿಯಾಗುತ್ತಿವೆ.

Article Published On: Friday, October 22, 2021, 11:04 [IST]
English summary
Skoda kushaq 1 5 dsg with 6 airbags and tpms launch timeline revealed
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+