ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಸ್ಕೋಡಾ ಇಂಡಿಯಾ ಕಂಪನಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಹೊಸ ಕಾರಿನ 1.5-ಲೀಟರ್ ಮಾದರಿಯ ವಿತರಣೆಯನ್ನು ಸಹ ಆರಂಭಿಸಿದೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಸ್ಕೋಡಾ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹೊಸ ಕುಶಾಕ್ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ನೀಡಿದ್ದು, ಆರಂಭದಲ್ಲಿ 1.0-ಲೀಟರ್ ಪೆಟ್ರೋಲ್ ಮಾದರಿಯನ್ನು ಮಾತ್ರ ವಿತರಣೆಯನ್ನು ಆರಂಭಿಸಿತ್ತು. ಕಾರಣಾಂತರಗಳಿಂದ 1.5-ಲೀಟರ್ ಮಾದರಿಯ ವಿತರಣೆಯನ್ನು ತಡೆಹಿಡಿದಿದ್ದ ಸ್ಕೋಡಾ ಕಂಪನಿಯು ಇದೀಗ ಹೈ ಎಂಡ್ ಮಾದರಿಯನ್ನು ವಿತರಿಸುತ್ತಿದೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಸ್ಕೋಡಾ ಕಂಪನಿಯು 1.0-ಲೀಟರ್ ಸಾಮರ್ಥ್ಯದ ಕುಶಾಕ್ ಮಾದರಿಯ ಬಿಡುಗಡೆಯ ಜೊತೆಯಲ್ಲಿಯೇ 1.5-ಲೀಟರ್ ಮಾದರಿಯ ಬೆಲೆ ಮತ್ತು ತಾಂತ್ರಿಕ ಸೌಲಭ್ಯಗಳ ಮಾಹಿತಿಯನ್ನು ಹಂಚಿಕೊಂಡಿದ್ದು, 1.5-ಲೀಟರ್ ಮಾದರಿಗೂ ಈಗಾಗಲೇ ಸಾವಿರಾರು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಸ್ಕೋಡಾ ಕುಶಾಕ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರು ಖರೀದಿಗಾಗಿ ಈಗಾಗಲೇ 6 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಕೋಡಾ ಕುಶಾಕ್ ಮಾದರಿಯು ಇದುವರೆಗೆ ಸುಮಾರು 6 ಸಾವಿರ ಬುಕ್ಕಿಂಗ್‌ನೊಂದಿಗೆ ಮೊದಲ ತಿಂಗಳಿನಲ್ಲಿಯೇ ಎರಡೂವರೆ ಸಾವಿರಕ್ಕೂ ಹೆಚ್ಚು ಯುನಿಟ್ ಗ್ರಾಹಕರ ಕೈಸೇರಿವೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರಿನ ಟಾಪ್ ಎಂಡ್ ಮಾದರಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 1.0-ಲೀಟರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಕುಶಾಕ್ ಕಾರು ಮಾದರಿಯು ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆ ಸೇಫ್ಟಿ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1-ಇಂಚಿನ ಇನ್ಪೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, 6-ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಕುಶಾಕ್ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಹೊಸ ಕುಶಾಕ್ ಕಾರು ಮಾದರಿಯನ್ನು ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯಡಿ ಅಭಿವೃದ್ದಿಗೊಳಿಸಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

 ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ 1.5-ಲೀಟರ್ ಪೆಟ್ರೋಲ್ ಮಾದರಿಯ ವಿತರಣೆಯನ್ನು ಆರಂಭಿಸಿದ ಸ್ಕೋಡಾ ಇಂಡಿಯಾ

ಹೊಸ ಕಾರಿನ ಮೂಲಕ ಸ್ಕೋಡಾ ಕಂಪನಿಯು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಿದ್ದು, ಆರಂಭವಾಗುತ್ತಿರುವ ಸ್ಕೋಡಾ ಕಂಪನಿಯ ಹೊಸ ಮಾರಾಟ ಮಳಿಗೆಗಳು ಸ್ಕೋಡಾ ಕಂಪನಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳಲಿದೆ.

Article Published On: Friday, August 13, 2021, 16:34 [IST]
English summary
Skoda kushaq 1 5 litre tsi compact suv delivery begins details.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+