ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲು ಸಜ್ಜಾಗಿರುವ ಫೋಕ್ಸ್‌ವ್ಯಾಗನ್ ಟೈಗನ್ ಮತ್ತು ಸ್ಕೋಡಾ ಕುಶಾಕ್ ಕಾರುಗಳು ಮುಂಬರುವ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹೊಸ ಕಾರುಗಳು ಬಿಡುಗಡೆಗೂ ಮುನ್ನ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿವೆ.

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗೂಡಿ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿಯಲ್ಲಿ ತನ್ನ ಹೊಚ್ಚ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಅನಾವರಣಗೊಳಿಸಿ ಶೀಘ್ರದಲ್ಲೇ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಸ್ಕೋಡಾ ಹೊಸ ಕಾರು ಫೋಕ್ಸ್‌ವ್ಯಾಗನ್ ಕಂಪನಿಯ ಹೊಸ ಟೈಗನ್ ಮಾದರಿಯೊಂದಿಗೆ ಹಲವಾರು ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳಲಿವೆ.

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಕುಶಾಕ್ ಮತ್ತು ಟೈಗನ್ ಕಾರುಗಳು ಫೋಕ್ಸ್‌ವ್ಯಾಗನ್ ಕಂಪನಿಯ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಹೊಸ ಕಾರು ಅಭಿವೃದ್ದಿಗೊಂಡಿದ್ದರೂ ಸಹ ಪ್ರತ್ಯೇಕವಾಗಿ ಮಾರಾಟಗೊಳ್ಳಲಿದ್ದು, ವಿಭಿನ್ನವಾದ ವಿನ್ಯಾಸಗಳ ಮೂಲಕ ತಮ್ಮದೆ ಆದ ಜನಪ್ರಿಯತೆಯೊಂದಿಗೆ ಗ್ರಾಹಕರನ್ನು ಸೆಳೆಯಲಿವೆ.

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಹೊಸ ಕಾರುಗಳು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಎರಡು ಕಾರುಗಳು ಒಂದೇ ಮಾದರಿಯ ತಾಂತ್ರಿಕ ಅಂಶಗಳು ಮತ್ತು ಎಂಜಿನ್ ಆಯ್ಕೆಯೊಂದಿಗೆ ಬೆಲೆಯಲ್ಲೂ ಒಂದೇ ಆಗಿರಲಿವೆ.

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಹಾಗೆಯೇ ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿರುವ ಹೊಸ ಕಾರುಗಳು ಮಲ್ಟಿ ಲೆಯರ್ಡ್ ಡ್ಯಾಶ್‍‍‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ಸೆಂಟರ್ ಕನ್ಸೊಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಮಲ್ಟಿ ಫಂಕ್ಷನಲ್ ಸ್ಟಿರಿಂಗ್ ವೀಲ್ಹ್ ಹೊಂದಿದ್ದು, ಎಲೆಕ್ಟ್ರಿಕ್ ಸನ್‌ರೂಫ್, ಸಿ ಫೋರ್ಟ್ ವೈರ್‌ಲೆಸ್ ಚಾರ್ಜರ್ ಸೌಲಭ್ಯ ಸೇರಿದಂತೆ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್ ಸೌಲಭ್ಯಗಳಿವೆ.

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಟಾಪ್ ಎಂಡ್ ಮಾದರಿಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಆರಂಭಿಕ ಆವೃತ್ತಿಯು 113-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 148-ಬಿಎಚ್‍‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಟೈಗನ್ ಹೊಸ ಕಾರಿನಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ನಲ್ಲಿ ಬಳಕೆ ಮಾಡಲಾಗಿರುವ 108-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು 148-ಬಿಎಚ್‌ಪಿ ಸಾಮರ್ಥ್ಯದ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಟೈಗನ್‌ನಲ್ಲಿ ಜೋಡಿಸಲಾಗಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಸ್ಕೋಡಾ ಕಂಪನಿಯು ಫೋಕ್ಸ್‌ವ್ಯಾಗನ್ ಟೈಗನ್ ಮಾದರಿಗಿಂತಲೂ ತುಸು ವಿಭಿನ್ನವಾಗಿ ಗುರುತಿಸಲು ಕೆಲವು ಐಷಾರಾಮಿ ಫೀಚರ್ಸ್‌ಗಳನ್ನು ಸೇರ್ಪಡೆ ಮಾಡಿದ್ದು, ಟೈಗನ್ ಕಾರಿಗಿಂತಲೂ ಕುಶಾಕ್ ಕಾರು ತುಸು ದುಬಾರಿಯಾಗಿರುವುದರಲ್ಲಿ ಯಾವುದೇ ಅನುಮಾನವಿಲ್ಲ.

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಟೈಗನ್ ಕಂಪ್ಯಾಕ್ಟ್ ಎಸ್‍‍ಯುವಿ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದರೆ ಸ್ಕೋಡಾ ಕುಶಾಕ್ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಉತ್ತಮ ಪೈಪೋಟಿ ನೀಡಲಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಫೋಕ್ಸ್‌ವ್ಯಾಗನ್ ಟೈಗನ್‌ ಜೊತೆ ರೋಡ್ ಟೆಸ್ಟಿಂಗ್ ನಡೆಸಿದ ಕುಶಾಕ್

ಹೊಸ ಟೈಗನ್ ಬೆಲೆಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.50 ಲಕ್ಷದಿಂದ ರೂ. 14 ಲಕ್ಷ ಮತ್ತು ಸ್ಕೋಡಾ ಕುಶಾಕ್ ಕಾರು ರೂ. 11.50 ಲಕ್ಷದಿಂದ ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Skoda Kushaq And Volkswagen Taigun SUV Spotted Testing Together. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X