ಒಂದೇ ದಿನದಲ್ಲಿ 50 ಸ್ಕೋಡಾ ಕುಶಾಕ್ ಕಾರುಗಳನ್ನು ವಿತರಣೆ ಮಾಡಿದ ಪಿಪಿಎಸ್ ಮೋಟಾರ್ಸ್
ಸ್ಕೋಡಾ ಕಂಪನಿಯು ತನ್ನ ಬಹುನೀರಿಕ್ಷಿತ ಕುಶಾಕ್ ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಹೊಸ ಕಾರು ಬಿಡುಗಡೆಯಾದ ಕೇವಲ ಎರಡು ವಾರಗಳಲ್ಲಿ 3 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ. ಬುಕ್ಕಿಂಗ್ ಆಧಾರದ ಹೊಸ ಕಾರು ವಿತರಣೆ ಆರಂಭವಾಗಿದ್ದು, ನಮ್ಮ ಬೆಂಗಳೂರಿನಲ್ಲೂ ಹೊಸ ಕಾರಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದೆ.

ಕರ್ನಾಟಕದಲ್ಲಿ ಅತಿ ದೊಡ್ಡ ಕಾರು ಮಾರಾಟ ಜಾಲ ಹೊಂದಿರುವ ಪಿಪಿಎಸ್ ಮೋಟಾರ್ಸ್ ಕಂಪನಿಯು ಹೊಸ ಕಾರಿನ ವಿತರಣೆ ಆರಂಭಿಸಿದ್ದು, ನಿನ್ನೆ ಒಂದೇ ದಿನದಲ್ಲಿ 50 ಯುನಿಟ್ ವಿತರಣೆ ಮಾಡಿ ಹೊಸ ದಾಖಲೆಗೆ ಕಾರಣವಾಗಿದೆ.

ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗಲಿದೆ.

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಕುಶಾಕ್ ಕಾರು ಮಾದರಿಯು ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆ ಸೇಫ್ಟಿ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದೆ.

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.


Click it and Unblock the Notifications








