ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಸ್ಕೋಡಾ ಕುಶಾಕ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರು ಖರೀದಿಗಾಗಿ 6 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಕೋಡಾ ಕುಶಾಕ್ ಮಾದರಿಯು ಇದುವರೆಗೆ ಸುಮಾರು 6 ಸಾವಿರ ಬುಕ್ಕಿಂಗ್‌ನೊಂದಿಗೆ ಮೊದಲ ತಿಂಗಳಿನಲ್ಲಿಯೇ ಎರಡೂವರೆ ಸಾವಿರಕ್ಕೂ ಹೆಚ್ಚು ಯುನಿಟ್ ಗ್ರಾಹಕರ ಕೈಸೇರಿವೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಬುಕ್ಕಿಂಗ್ ಆಧಾರದ ಹೊಸ ಕುಶಾಕ್ ಕಾರು ವಿತರಣೆ ಆರಂಭಿಸಿರುವ ಸ್ಕೋಡಾ ಕಂಪನಿಯು ಹೊಸ ಕಾರಿನೊಂದಿಗೆ ಮತ್ತಷ್ಟು ಹೊಸ ಮಾರಾಟ ಮಳಿಗೆಗಳಿಗೂ ಚಾಲನೆ ನೀಡುತ್ತಿದ್ದು, ಹೊಸ ಮಾರಾಟ ಮಳಿಗೆಗಳೊಂದಿಗೆ ಕುಶಾಕ್ ಕಾರು ಇನ್ನು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ದೇಶಾದ್ಯಂತ ಪ್ರಮುಖ ನಗರಗಳಲ್ಲಿ 150 ಕಾರು ಮಾರಾಟ ಮಳಿಗೆಗಳನ್ನು ಹೊಂದಿರುವ ಸ್ಕೋಡಾ ಕಂಪನಿಯು ಮುಂದಿನ ಎರಡು ವರ್ಷದೊಳಗೆ 75 ಹೊಸ ಮಾರಾಟ ಮಳಿಗೆಗಳೊಂದಿಗೆ 225 ಮಾರಾಟ ಮಳಿಗೆ ಹೊಂದುವ ಗುರಿಹೊಂದಿದ್ದು, ಹೊಸ ಮಾರಾಟ ಮಳಿಗೆಗಳು ಕುಶಾಕ್ ಸೇರಿದಂತೆ ವಿವಿಧ ಕಾರು ಮಾದರಿಗಳ ಮಾರಾಟ ಸಂಖ್ಯೆ ಹೆಚ್ಚಿಸಲು ಸಹಕಾರಿಯಾಗಲಿವೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಇನ್ನು ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರಿನ ಟಾಪ್ ಎಂಡ್ ಮಾದರಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಶೀಘ್ರದಲ್ಲೇ 1.5-ಲೀಟರ್ ಕುಶಾಕ್ ಮಾದರಿಯು ಕೂಡಾ ಗ್ರಾಹಕರ ಕೈಸೇರಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಕುಶಾಕ್ ಕಾರು ಮಾದರಿಯು ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಸದ್ಯಕ್ಕೆ ಹೊಸ ಕಾರಿನ 1.0-ಲೀಟರ್ ಪೆಟ್ರೋಲ್ ಮಾದರಿಯನ್ನು ಮಾತ್ರ ವಿತರಣೆ ಮಾಡಲಾಗುತ್ತಿದೆ. ಇದೇ ತಿಂಗಳು 13ರಂದು 1.5-ಲೀಟರ್ ಮಾದರಿಯು ಕೂಡಾ ವಿತರಣೆಯಾಗಲಿದ್ದು, ಹೈ ಎಂಡ್ ಮಾದರಿಯ ಪವರ್‌ಫುಲ್ ಎಂಜಿನ್ ಮಾದರಿಯಾಗಿರಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸ್ಕೋಡಾ ಕುಶಾಕ್ ಕಾರಿಗೆ ಭರ್ಜರಿ ಬೇಡಿಕೆ

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda kushaq compact suv booking crosses 6000 units.
Story first published: Wednesday, August 4, 2021, 0:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X