ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.49 ಲಕ್ಷ ಬೆಲೆ ಹೊಂದಿದೆ.

ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಭಾರತದಲ್ಲಿ ಎಸ್‌ಯುವಿಗಳು ಹೆಚ್ಕು ಜನಪ್ರಿಯವಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ತಯಾರಕ ಕಂಪನಿಗಳು ಎಸ್‌ಯುವಿ ಕಾರು ಮಾದರಿಗಳ ಮೇಲೆ ಹೆಚ್ಚಿನ ಆಸಕ್ತಿ ತೊರುತ್ತಿದ್ದು,ಸ್ಕೋಡಾ ಕಂಪನಿಯು ಸಹ ಭಾರತದಲ್ಲಿ ಮೊದಲ ಬಾರಿಗೆ ಕುಶಾಕ್ ಮಾದರಿಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಸೆಗ್ಮೆಂಟ್ ಪ್ರವೇಶಿಸಿದೆ. ಭಾರತದಲ್ಲೇ ಭಾರತೀಯ ಮಾರುಕಟ್ಟೆಗಾಗಿ ಕುಶಾಕ್(ಸಂಸ್ಕೃತದಲ್ಲಿ ರಾಜನೆಂದು ಪ್ರತಿನಿಧಿಸುವ) ಮಾದರಿಯನ್ನು ಅಭಿವೃದ್ದಿಗೊಳಿಸಿದ್ದು, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಿದೆ.

ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗಲಿದೆ.

ಎಂಜಿನ್ ಮಾದರಿ ಆಕ್ಟಿವಾ ಆ್ಯಂಬಿನೆಷನ್ ಸ್ಟೈಲ್
1.0-ಲೀ ಟಿಎಸ್ಐ 6 ಎಂಟಿ ರೂ. 10,44,999 ರೂ. 12,79,999 ರೂ. 14,59,999
1.0-ಲೀ ಟಿಎಸ್ಐ 6ಎಟಿ NA ರೂ. 14,19,999 ರೂ. 15,79,999
1.5-ಲೀ ಟಿಎಸ್ಐ 6 ಎಂಟಿ NA NA ರೂ. 16,19,999
1.5-ಲೀ ಟಿಎಸ್ಐ 7 ಡಿಎಸ್‌ಜಿ NA NA ರೂ. 17,59,999
ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

1.0-ಲೀಟರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಕುಶಾಕ್ ಕಾರು ಮಾದರಿಯು ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆ ಸೇಫ್ಟಿ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದೆ.

ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, 6-ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಸ್ಕೋಡಾ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ

ಹೊಸ ಕುಶಾಕ್ ಕಾರು ಮಾದರಿಯನ್ನು ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯಡಿ ಅಭಿವೃದ್ದಿಗೊಳಿಸಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
Skoda Kushaq Launched In India At Rs 10.49 Lakh. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X