Just In
- 9 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 9 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 11 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 11 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ
ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಹೊಸ ಕುಶಾಕ್ ಕಾರಿನೊಂದಿಗೆ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಆರಂಭಿಕ ಆವೃತ್ತಿಯಲ್ಲಿ ಮತ್ತೊಂದು ಆಟೋಮ್ಯಾಟಿಕ್ ಆವೃತ್ತಿಯು ಶೀಘ್ರದಲ್ಲೇ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.
ಕುಶಾಕ್ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯು ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್ಗಳನ್ನು ಹೊಂದಿದ್ದು, ಸ್ಟ್ಯಾಂಡರ್ಡ್ ಆಗಿ ಪ್ರತಿ ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯಿದೆ. ಟಾಪ್ ಎಂಡ್ ಮಾದರಿಗಳಲ್ಲಿ ಮಾತ್ರ 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.
ಆದರೆ ಕುಶಾಕ್ ಕಾರಿನ ಎಂಟ್ರಿ ಲೆವಲ್ ಮಾದರಿಗಳಲ್ಲಿ ಆಟೋಮ್ಯಾಟಿಕ್ ವರ್ಷನ್ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಮಾದರಿಯನ್ನು ಬಿಡುಗಡೆ ಮಾಡಲಿರುವ ಸ್ಕೋಡಾ ಕಂಪನಿಯು ಆಕ್ಟಿವಾ ವೆರಿಯೆಂಟ್ನಲ್ಲಿ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸುತ್ತಿದೆ.
ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್ಜಿ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.
ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರಿನಲ್ಲಿ ಸದ್ಯ ಆರಂಭಿಕ ಆಟೋಮ್ಯಾಟಿಕ್ ಮಾದರಿಯ ಬೆಲೆಯು ರೂ. 14.19 ಲಕ್ಷ ಬೆಲೆ ಹೊಂದಿದೆ.
ಬಿಡುಗಡೆಯಾಗಲಿರುವ ಹೊಸ ಕುಶಾಕ್ ಆಕ್ಟಿವಾ ಆಟೋಮ್ಯಾಟಿಕ್ ಮಾದರಿಯು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಅಪ್ಡೆಟ್ ಪಡೆದುಕೊಳ್ಳಲಿದೆ.
ಪ್ರೀಮಿಯಂ ಕಂಪ್ಯಾಕ್ಟ್ ಎಸ್ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಸ್ಕೋಡಾ ಕುಶಾಕ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರು ಖರೀದಿಗಾಗಿ ಈಗಾಗಲೇ 6 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.
ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಕೋಡಾ ಕುಶಾಕ್ ಮಾದರಿಯು ಇದುವರೆಗೆ ಸುಮಾರು 6 ಸಾವಿರ ಬುಕ್ಕಿಂಗ್ನೊಂದಿಗೆ ಮೊದಲ ತಿಂಗಳಿನಲ್ಲಿಯೇ ಎರಡೂವರೆ ಸಾವಿರಕ್ಕೂ ಹೆಚ್ಚು ಯುನಿಟ್ ಗ್ರಾಹಕರ ಕೈಸೇರಿವೆ.
ಹೊಸ ಕಾರಿನ ಪ್ರತಿ ವೆರಿಯೆಂಟ್ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್ಜಿ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದು, 1.0-ಲೀಟರ್ ಪೆಟ್ರೋಲ್ ಮಾದರಿಯು 108-ಬಿಎಚ್ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್ಪಿ, 250-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.
ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳ ಜೊತೆ ಸೇಫ್ಟಿ ಫೀಚರ್ಸ್ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರಿನ ಟಾಪ್ ಎಂಡ್ ಮಾದರಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.
ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಟೈಲ್ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.
ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್ನೊಂದಿಗೆ ವರ್ಚುವಲ್ ಕಾಕ್ಪಿಟ್ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ಪ್ಲೇ ಸರ್ಪೊಟ್ ಮಾಡುವ 10.1-ಇಂಚಿನ ಇನ್ಪೋಟೈನ್ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.
ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, 6-ಏರ್ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್ಗಳಿವೆ.
ಹೊಸ ಕುಶಾಕ್ ಕಾರು ಮಾದರಿಯನ್ನು ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯಡಿ ಅಭಿವೃದ್ದಿಗೊಳಿಸಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್ಫಾರ್ಮ್ನಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.
ಹೊಸ ಕಾರಿನ ಮೂಲಕ ಸ್ಕೋಡಾ ಕಂಪನಿಯು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಿದ್ದು, ಆರಂಭವಾಗುತ್ತಿರುವ ಸ್ಕೋಡಾ ಕಂಪನಿಯ ಹೊಸ ಮಾರಾಟ ಮಳಿಗೆಗಳು ಸ್ಕೋಡಾ ಕಂಪನಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳಲಿದೆ.