ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಹೊಸ ಕುಶಾಕ್ ಕಾರಿನೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನ ಆರಂಭಿಕ ಆವೃತ್ತಿಯಲ್ಲಿ ಮತ್ತೊಂದು ಆಟೋಮ್ಯಾಟಿಕ್ ಆವೃತ್ತಿಯು ಶೀಘ್ರದಲ್ಲೇ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಸ್ಟ್ಯಾಂಡರ್ಡ್ ಆಗಿ ಪ್ರತಿ ಮಾದರಿಯಲ್ಲೂ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಿದೆ. ಟಾಪ್ ಎಂಡ್ ಮಾದರಿಗಳಲ್ಲಿ ಮಾತ್ರ 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಆದರೆ ಕುಶಾಕ್ ಕಾರಿನ ಎಂಟ್ರಿ ಲೆವಲ್ ಮಾದರಿಗಳಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಮಾದರಿಯನ್ನು ಬಿಡುಗಡೆ ಮಾಡಲಿರುವ ಸ್ಕೋಡಾ ಕಂಪನಿಯು ಆಕ್ಟಿವಾ ವೆರಿಯೆಂಟ್‌ನಲ್ಲಿ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸುತ್ತಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರಿನಲ್ಲಿ ಸದ್ಯ ಆರಂಭಿಕ ಆಟೋಮ್ಯಾಟಿಕ್ ಮಾದರಿಯ ಬೆಲೆಯು ರೂ. 14.19 ಲಕ್ಷ ಬೆಲೆ ಹೊಂದಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಬಿಡುಗಡೆಯಾಗಲಿರುವ ಹೊಸ ಕುಶಾಕ್ ಆಕ್ಟಿವಾ ಆಟೋಮ್ಯಾಟಿಕ್ ಮಾದರಿಯು ರೂ. 12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿದ್ದು, ಮುಂಬರುವ ದಿನಗಳಲ್ಲಿ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಅಪ್‌ಡೆಟ್ ಪಡೆದುಕೊಳ್ಳಲಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಸ್ಕೋಡಾ ಕುಶಾಕ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರು ಖರೀದಿಗಾಗಿ ಈಗಾಗಲೇ 6 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಕೋಡಾ ಕುಶಾಕ್ ಮಾದರಿಯು ಇದುವರೆಗೆ ಸುಮಾರು 6 ಸಾವಿರ ಬುಕ್ಕಿಂಗ್‌ನೊಂದಿಗೆ ಮೊದಲ ತಿಂಗಳಿನಲ್ಲಿಯೇ ಎರಡೂವರೆ ಸಾವಿರಕ್ಕೂ ಹೆಚ್ಚು ಯುನಿಟ್ ಗ್ರಾಹಕರ ಕೈಸೇರಿವೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 1.0-ಲೀಟರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆ ಸೇಫ್ಟಿ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರಿನ ಟಾಪ್ ಎಂಡ್ ಮಾದರಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1-ಇಂಚಿನ ಇನ್ಪೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, 6-ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕುಶಾಕ್ ಕಾರು ಮಾದರಿಯನ್ನು ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯಡಿ ಅಭಿವೃದ್ದಿಗೊಳಿಸಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಕುಶಾಕ್ ಕಾರಿನ ಆರಂಭಿಕ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡಲಿದೆ ಸ್ಕೋಡಾ

ಹೊಸ ಕಾರಿನ ಮೂಲಕ ಸ್ಕೋಡಾ ಕಂಪನಿಯು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮಾದರಿಗಳಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಿದ್ದು, ಆರಂಭವಾಗುತ್ತಿರುವ ಸ್ಕೋಡಾ ಕಂಪನಿಯ ಹೊಸ ಮಾರಾಟ ಮಳಿಗೆಗಳು ಸ್ಕೋಡಾ ಕಂಪನಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳಲಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda kushaq compact suv to get new entry level at gearbox option
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X