Just In
- 8 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 10 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 10 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 11 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬ್ರೆಜಿಲ್: ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 3462 ಮಂದಿ ಸಾವು!
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರ್ಚ್ 18ರಂದು ಬಿಡುಗಡೆಯಾಗಲಿರುವ ಸ್ಕೋಡಾ ಕುಶಾಕ್ ಕಾರಿನ ವಿಶೇಷತೆಗಳೇನು?
ಮಧ್ಯಮ ಕ್ರಮಾಂಕದ ಎಸ್ಯುವಿ ಮತ್ತು ಸೆಡಾನ್ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಹೊಂದಿರುವ ಸ್ಕೋಡಾ ಇಂಡಿಯಾ ಕಂಪನಿಯು ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯಾದ ಕುಶಾಕ್ ಆವೃತ್ತಿಯನ್ನು ಭಾರತದಲ್ಲಿ ಇದೇ ತಿಂಗಳು ಮಾರ್ಚ್ 18ರಂದು ಉತ್ಪಾದನಾ ಆವೃತ್ತಿ ಅನಾವರಣಗೊಳಿಸುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಮಧ್ಯಮ ಕ್ರಮಾಂಕದ ಎಸ್ಯುವಿ ಮತ್ತು ಸೆಡಾನ್ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಹೊಂದಿರುವ ಸ್ಕೋಡಾ ಇಂಡಿಯಾ ಕಂಪನಿಯು ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯಾದ ಕುಶಾಕ್ ಆವೃತ್ತಿಯನ್ನು ಭಾರತದಲ್ಲಿ ಇದೇ ತಿಂಗಳು ಮಾರ್ಚ್ 18ರಂದು ಉತ್ಪಾದನಾ ಆವೃತ್ತಿ ಅನಾವರಣಗೊಳಿಸುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಹೊಸ ಸ್ಕೋಡಾ ಕುಶಾಕ್ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆಗೆ ಪವರ್ಫುಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದ್ದು, ಕುಶಾಕ್ ಕಾರು ಕಾಮಿಕ್ ಎಸ್ಯುವಿ ಮಾದರಿಯನ್ನು ಆಧರಿಸಿ ಅಭಿವೃದ್ದಿಗೊಂಡಿದೆ.

ಹೊಸ ಕಾರು ಮಾತೃಸಂಸ್ಥೆಯಾದ ಫೋಕ್ಸ್ವ್ಯಾಗನ್ ಕಂಪನಿಯ ಟೈಗನ್ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯೊಂದಿಗೂ ಕೆಲವು ಪ್ರಮುಖ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳಲಿದ್ದು, ಕಂಪ್ಯಾಕ್ಟ್ ಎಸ್ಯುವಿ ಮಾದರಿಯಲ್ಲೇ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿದೆ.

ಹೊಸ ಎಸ್ಯುವಿ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಜೋಡಣೆ ಮಾಡಲಾಗಿದ್ದು, ಡ್ಯುಯಲ್ ಹೆಡ್ಲ್ಯಾಂಪ್, ಏರ್ ಇನ್ಟೆಕ್ ಮತ್ತು ಮುಂಭಾಗದ ಬಂಪರ್ನಲ್ಲಿ ಸ್ಕಫ್ ಪ್ಲೇಟ್ಗಳೊಂದಿಗೆ ದೊಡ್ಡ ಗ್ರಿಲ್ ವಿನ್ಯಾಸ ಹೊಂದಿದೆ. ಕುಶಾಕ್ ಎಸ್ಯುವಿಯ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, ಹೊಸ ಎಸ್ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದೆ.

ವಿಶಾಲವಾದ ಕ್ಯಾಬಿನ್ನೊಂದಿಗೆ ವರ್ಚುವಲ್ ಕಾಕ್ಪಿಟ್ ಹೊಂದಿರುವ ಹೊಸ ಕಾರಿನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ಸೆಂಟರ್ ಕನ್ಸೊಲ್, ಡಿಜಿಟಲ್ ಡಿಸ್ಪ್ಲೇ, ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಮಲ್ಟಿ ಫಂಕ್ಷನಲ್ ಸ್ಟಿರಿಂಗ್ ವೀಲ್ಹ್, ವೈರ್ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ಪ್ಲೇ, 360 ಡಿಗ್ರಿ ಕ್ಯಾಮೆರಾ, ಎಲೆಕ್ಟ್ರಿಕ್ ಸನ್ರೂಫ್ ವೈರ್ಲೆಸ್ ಚಾರ್ಜರ್, ಕಲರ್ ಆಕ್ಸೆಂಟ್ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಹೊಸ ಕಾರಿನಲ್ಲಿ ತಾಂತ್ರಿಕ ಅಂಶಗಳು ಜೋಡಣೆಯಾಗಲಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್ನಲ್ಲಿ 4 ಏರ್ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಎಸ್ಪಿ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್ಗಳಿವೆ.

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯ ಆದ್ಯತೆ ಮೇರೆಗೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದೆ.
MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಮೂರು ಸಿಲಿಂಡರ್ ಸೌಲಭ್ಯದೊಂದಿಗೆ 120-ಬಿಎಚ್ಪಿ ಉತ್ಪದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ನಾಲ್ಕು ಸಿಲಿಂಡರ್ ಸೌಲಭ್ಯದೊಂದಿಗೆ 150-ಬಿಎಚ್ಪಿ ಉತ್ಪಾದನೆಯೊಂದಿಗೆ ಕಂಪ್ಯಾಕ್ಟ್ ಎಸ್ಯುವಿ ಕಾರಿನಲ್ಲಿಯೇ ಪವರ್ಫುಲ್ ಕಾರು ಮಾದರಿಯಾಗಿರಲಿದೆ.

ಎಂಜಿನ್ ಆಯ್ಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ನೀಡಲಾಗುತ್ತಿದ್ದು, ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಈ ಮೂಲಕ ಕಂಪ್ಯಾಕ್ಟ್ ಎಸ್ಯುವಿಯು ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದೆ.