Just In
- 2 hrs ago
ಅನಾವರಣವಾಯ್ತು ಫೋಕ್ಸ್‌ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್‌ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್‌ವ್ಯಾಗನ್
Don't Miss!
- News
ಉತ್ತರಾಖಂಡ್: ದಿಢೀರ್ ಕೋರ್ ಕಮಿಟಿ ಸಭೆ ನಡೆಸಿದ ಬಿಜೆಪಿ
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರ್ಚ್ 18ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ ಸ್ಕೋಡಾ ಕುಶಾಕ್
2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕುಶಾಕ್ ಹೆಸರಿನೊಂದಿಗೆ ಅಂತಿಮವಾಗಿ ಉತ್ಪಾದನಾ ಮಾದರಿಯೊಂದಿಗೆ ಮಾದರಿಯೊಂದಿಗೆ ಅನಾವರಣಗೊಳ್ಳುತ್ತಿದ್ದು, ಮಾರ್ಚ್ 18ರಂದು ಹೊಸ ಕುಶಾಕ್ ಕಾರಿನ ಅನಾವರಣದೊಂದಿಗೆ ಎಂಜಿನ್ ಮಾಹಿತಿ ಬಹಿರಂಗವಾಗಲಿದೆ.

ಹೊಸ ಕುಶಾಕ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆಗೆ ಪವರ್‌ಫುಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದ್ದು, ಹೊಸ ಕಾರು ಫೋಕ್ಸ್‌ವ್ಯಾಗನ್ ಕಂಪನಿಯ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯೊಂದಿಗೂ ಕೆಲವು ಪ್ರಮುಖ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳಲಿದೆ. ಟೈಗನ್ ಕಾರು ಮಾದರಿಯಲ್ಲಿನ ಪ್ರಮುಖ ಫೀಚರ್ಸ್ ಜೊತೆಗೆ ಇನ್ನು ಕೆಲವು ಹೆಚ್ಚುವರಿ ಐಷಾರಾಮಿ ಫೀಚರ್ಸ್ ಪಡೆದುಕೊಳ್ಳಲಿರುವ ಸ್ಕೋಡಾ ಕುಶಾಕ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಸ್ಕೋಡಾ ಕಾಮಿಕ್ ಎಸ್‍ಯುವಿಯ ಮಾದರಿಯನ್ನು ಆಧರಿಸಿ ಅಭಿವೃದ್ದಿಗೊಂಡಿರುವ ಹೊಸ ಕುಶಾಕ್ ಕಾರಿನ ಉತ್ಪಾದನಾ ಮಾದರಿಯ ಅನಾವರಣ ದಿನದಿಂದಲೇ ಹೊಸ ಕಾರಿನ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದ್ದು, ಅನಾವರಣಗೊಂಡ ನಂತರ ಏಪ್ರಿಲ್ ಮೊದಲ ವಾರದಲ್ಲಿ ಖರೀದಿಗೆ ಲಭ್ಯವಾಗಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಲಿರುವ ಹೊಸ ಎಸ್‍ಯುವಿ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಜೋಡಣೆ ಮಾಡಲಾಗಿದ್ದು, ಡ್ಯುಯಲ್ ಹೆಡ್‍ಲ್ಯಾಂಪ್, ಏರ್ ಇನ್‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ವಿನ್ಯಾಸ ಹೊಂದಿದೆ.

ಕುಶಾಕ್ ಎಸ್‍ಯುವಿಯ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, ಹೊಸ ಎಸ್‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, 360 ಡಿಗ್ರಿ ಕ್ಯಾಮೆರಾ, ಸನ್‌ರೂಫ್ ಸೌಲಭ್ಯವಿದೆ.

ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಹೊಸ ಕಾರಿನಲ್ಲಿ ತಾಂತ್ರಿಕ ಅಂಶಗಳು ಜೋಡಣೆಯಾಗಲಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಎಸ್‌ಪಿ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯ ಆದ್ಯತೆ ಮೇರೆಗೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದೆ.

1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಮೂರು ಸಿಲಿಂಡರ್ ಸೌಲಭ್ಯದೊಂದಿಗೆ 120-ಬಿಎಚ್‌ಪಿ ಉತ್ಪದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ನಾಲ್ಕು ಸಿಲಿಂಡರ್ ಸೌಲಭ್ಯದೊಂದಿಗೆ 150-ಬಿಎಚ್‍ಪಿ ಉತ್ಪಾದನೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿಯೇ ಪವರ್‍ಫುಲ್ ಕಾರು ಮಾದರಿಯಾಗಿರಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಎಂಜಿನ್ ಆಯ್ಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗುತ್ತಿದ್ದು, ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿಯು ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಅಂತರದೊಂದಿಗೆ ಮಾರಾಟಗೊಳ್ಳಬಹುದಾಗಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಹೊಸ ಕಾರು ಎಂಜಿನ್ ಮತ್ತು ಬೆಲೆಗೆ ಆಧರಿಸಿ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನೊಂದಿಗೆ ಸ್ಕೋಡಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಪಾಲನ್ನು ಹೆಚ್ಚಿಸುವ ನೀರಿಕ್ಷೆಯಲ್ಲಿದೆ.