ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಇದೇ ತಿಂಗಳು 28ರಂದು ಬಿಡುಗಡೆಗೊಳ್ಳುತ್ತಿದ್ದು, ಕಂಪನಿಯು ಹೊಸ ಕಾರಿನಲ್ಲಿ ಸದ್ಯಕ್ಕೆ 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯನ್ನು ಮಾತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ.

ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಂಡಿದ್ದು, ಇದೇ ಜೂನ್ 28ರಂದು ಸ್ಕೋಡಾ ಕಂಪನಿಯು 1.0-ಲೀಟರ್ ಪೆಟ್ರೋಲ್ ಮಾದರಿಯನ್ನು ಮಾತ್ರ ಬಿಡುಗಡೆ ಮಾಡುತ್ತಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.

ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಆರಂಭದಲ್ಲಿ ಕುಶಾಕ್ 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯನ್ನು ಮಾತ್ರ ಮಾರಾಟ ಮಾಡಲಿರುವ ಸ್ಕೋಡಾ ಕಂಪನಿಯು ಮುಂಬರುವ ಅಗಸ್ಟ್ ಹೊತ್ತಿಗೆ ಹೈ ಎಂಡ್ ಆವೃತ್ತಿಯಾಗಿರುವ 1.5-ಲೀಟರ್ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಹೊಸ ಎಂಜಿನ್ ಮಾದರಿಯಾಗಿರುವ 1.5-ಲೀಟರ್ ಪೆಟ್ರೋಲ್ ಮಾದರಿಯನ್ನು ಇನ್ನು ಕೂಡಾ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸ್ಕೋಡಾ ಕಂಪನಿಯು ಸದ್ಯಕ್ಕೆ ರೋಡ್ ಟೆಸ್ಟಿಂಗ್ ಪೂರ್ಣಗೊಂಡಿರುವ 1.0-ಲೀಟರ್ ಮಾದರಿಯನ್ನು ಬಿಡುಗಡೆಗೆ ನಿರ್ಧರಿಸಿದ್ದು, ಹೊಸ ಕಾರು ವಿವಿಧ ಎಂಜಿನ್ ಆಯ್ಕೆ, ಅತ್ಯುತ್ತಮ ಫೀಚರ್ಸ್ ಒಳಗೊಂಡಂತೆ ಬೆಲೆ ವಿಚಾರದಲ್ಲೂ ಗಮನಸೆಳೆಯಲಿದೆ.

ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಸ್ಕೋಡಾ ಹೊಸ ಕುಶಾಕ್ ಕಾರು ಮಾದರಿಯನ್ನು ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯಡಿ ಅಭಿವೃದ್ದಿಗೊಳಿಸಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಮಾಹಿತಿಗಳ ಪ್ರಕಾರ, ಕುಶಾಕ್ ಕಾರು ಮಾದರಿಯು ಆಕ್ಟಿವ್, ಆಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಮ್ಯಾನುವಲ್, ಆಟೋಮ್ಯಾಟಿಕ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಂಡಿರಲಿದೆ.

ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಹೊಸ ಕುಶಾಕ್ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಜೋಡಿಸಲಾಗಿದೆ.

ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಟಾಪ್ ಎಂಡ್ ಮಾದರಿಯಲ್ಲಿ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿರಲಿದ್ದು, ಪ್ರತಿ ಮಾದರಿಗಳಲ್ಲೂ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಿರುವುದು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪ್ರತಿಸ್ಪರ್ಧಿಯಾಗಲಿದೆ.

ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಕುಶಾಕ್ ಕಾರಿನ ಆರಂಭಿಕ ಮಾದರಿಗಳಲ್ಲಿರುವ 1.0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌‌ಬಾಕ್ಸ್ ಆಯ್ಕೆ ಹೊಂದಿದ್ದು, 108-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 148-ಬಿಎಚ್‍‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಇನ್ನಷ್ಟು ತಡವಾಗಲಿದೆ ಸ್ಕೋಡಾ ಕುಶಾಕ್ 1.5-ಲೀಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಈ ಮೂಲಕ ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ನೀರಿಕ್ಷಿಸಲಾಗಿದೆ

More from DriveSpark

Article Published On: Monday, June 21, 2021, 11:14 [IST]
English summary
Skoda Kushaq 1.5-litre engine will be available from August 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+