ಇದೇ ತಿಂಗಳು 28ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಸ್ಕೋಡಾ ಕುಶಾಕ್

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳು 28ರಂದು ಬಿಡುಗಡೆ ಮಾಡುವುದಾಗಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರು ಖರೀದಿಗಾಗಿ ಇಂದಿನಿಂದಲೇ ಬುಕ್ಕಿಂಗ್ ಪ್ರಕ್ರಿಯೆ ಆರಂಭಿಸಿರುವುದಾಗಿ ಮಾಹಿತಿ ನೀಡಿದೆ.

ಇದೇ ತಿಂಗಳು 28ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಸ್ಕೋಡಾ ಕುಶಾಕ್

ಹೊಸ ಕುಶಾಕ್ ಕಾರು ಮಾದರಿಯನ್ನು ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯಡಿ ನಿರ್ಮಾಣಗೊಳಿಸಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಂಡಿರುವ ಹೊಸ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಇದೇ ತಿಂಗಳು 28ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಸ್ಕೋಡಾ ಕುಶಾಕ್

ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯಲ್ಲಿ ಆಕರ್ಷಕ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್, ಡ್ಯುಯಲ್ ಹೆಡ್‍‍ಲ್ಯಾಂಪ್‍, ಎಲ್ಇಡಿ ಡಿಆರ್‌ಎಲ್ಎಸ್, ಏರ್ ಇನ್‍‍ಟೆಕ್ ಮತ್ತು ಸ್ಕಫ್ ಪ್ಲೇಟ್‍ ಹೊಂದಿದೆ.

ಇದೇ ತಿಂಗಳು 28ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಸ್ಕೋಡಾ ಕುಶಾಕ್

ಕಾರಿಗೆ ಬಲಿಷ್ಠ ವಿನ್ಯಾಸ ನೀಡಲು ಹಲವಾರು ಸ್ಪೋರ್ಟಿ ಫೀಚರ್ಸ್ ಮತ್ತು ಶಾರ್ಪ್ ಎಡ್ಜ್ ನೀಡಲಾಗಿದ್ದು, 17-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ವೀಂಡೋಗಳ ಸುತ್ತಲೂ ಕ್ರೋಮ್ ಸ್ಟ್ರೀಪ್, ಸ್ಲಿಕ್ ಎಲ್ಇಡಿ ಟೈಲ್‌ಲೈಟ್, ರೂಫ್ ಮೌಟೆಂಡ್ ಸ್ಪಾಯ್ಲರ್, ಎಲ್ಇಡಿ ಸ್ಟಾಪ್ ಲ್ಯಾಂಪ್ ಜೊತೆಗೆ ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಕೂಡಾ ಆಕರ್ಷಕವಾಗಿವೆ.

ಇದೇ ತಿಂಗಳು 28ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಸ್ಕೋಡಾ ಕುಶಾಕ್

ಹೊಸ ಕಾರಿನಲ್ಲಿ ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿರುವ ಮಲ್ಟಿ ಲೆಯರ್ಡ್ ಡ್ಯಾಶ್‍‍‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ಸೆಂಟರ್ ಕನ್ಸೊಲ್, 10-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಮಲ್ಟಿ ಫಂಕ್ಷನಲ್ ಟು ಸ್ಪೋಕ್ ಸ್ಟಿರಿಂಗ್ ವೀಲ್ಹ್ ಹೊಂದಿದೆ.

ಇದೇ ತಿಂಗಳು 28ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಸ್ಕೋಡಾ ಕುಶಾಕ್

ಪ್ರೀಮಿಯಂ ಫೀಚರ್ಸ್‌ಗಳಾದ ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, ಎಲೆಕ್ಟ್ರಿಕ್ ಸನ್‌ರೂಫ್, ಸಿ ಫೋರ್ಟ್ ವೈರ್‌ಲೆಸ್ ಚಾರ್ಜರ್ ಸೌಲಭ್ಯ ಸೇರಿದಂತೆ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್ ಸೌಲಭ್ಯಗಳಿವೆ.

ಇದೇ ತಿಂಗಳು 28ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಸ್ಕೋಡಾ ಕುಶಾಕ್

ಜೊತೆಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಇದೇ ತಿಂಗಳು 28ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಸ್ಕೋಡಾ ಕುಶಾಕ್

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಆರಂಭಿಕ ಆವೃತ್ತಿಯು 113-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 148-ಬಿಎಚ್‍‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಇದೇ ತಿಂಗಳು 28ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಸ್ಕೋಡಾ ಕುಶಾಕ್

ಕ್ಯಾಂಡಿ ವೈಟ್, ರಿಫ್ಲೆಕ್ಸ್ ಸಿಲ್ವರ್, ಕಾರ್ಬನ್ ಸ್ಟೀಲ್, ಹನಿ ಆರೇಂಜ್ ಮತ್ತು ಟೊರಾಂಡೊ ರೆಡ್(ಡ್ಯುಯಲ್ ಟೋನ್) ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Skoda Kushaq India Launch On June 28. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X