ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾದ ಕುಶಾಕ್ ಆವೃತ್ತಿಯನ್ನು ಇದೇ ತಿಂಗಳು ಮಾರ್ಚ್ 18ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳಿಸುತ್ತಿದ್ದು, ಹೊಸ ಕಾರಿನ ಉತ್ಪಾದನಾ ಆವೃತ್ತಿಯ ಅನಾವರಣಕ್ಕೂ ಮುನ್ನ ಕಾರಿನ ಇಂಟಿರಿಯರ್ ರೇಖಾಚಿತ್ರಗಳು ಬಹಿರಂಗವಾಗಿವೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ಹೊಸ ಸ್ಕೋಡಾ ಕುಶಾಕ್ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆಗೆ ಪವರ್‌ಫುಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದ್ದು, ಕುಶಾಕ್ ಕಾರು ಕಾಮಿಕ್ ಎಸ್‍‍ಯುವಿ ಮಾದರಿಯನ್ನು ಆಧರಿಸಿ ಅಭಿವೃದ್ದಿಗೊಂಡಿದೆ. ಹೊಸ ಕಾರು ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಕಂಪನಿಯ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯೊಂದಿಗೂ ಕೆಲವು ಪ್ರಮುಖ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳಲಿದ್ದು, ಕಾರು ಅನಾವರಣ ದಿನದಿಂದಲೇ ಹೊಸ ಕಾರಿನ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಲಿರುವ ಹೊಸ ಎಸ್‍‍ಯುವಿ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಜೋಡಣೆ ಮಾಡಲಾಗಿದ್ದು, ಡ್ಯುಯಲ್ ಹೆಡ್‍‍ಲ್ಯಾಂಪ್‍, ಏರ್ ಇನ್‍‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ವಿನ್ಯಾಸ ಹೊಂದಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ಕುಶಾಕ್ ಎಸ್‍‍ಯುವಿಯ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, ಹೊಸ ಎಸ್‍‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿರುವ ಹೊಸ ಕಾರಿನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍‍‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ಸೆಂಟರ್ ಕನ್ಸೊಲ್, ಡಿಜಿಟಲ್ ಡಿಸ್‌ಪ್ಲೇ, ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಮಲ್ಟಿ ಫಂಕ್ಷನಲ್ ಸ್ಟಿರಿಂಗ್ ವೀಲ್ಹ್, ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, 360 ಡಿಗ್ರಿ ಕ್ಯಾಮೆರಾ, ಎಲೆಕ್ಟ್ರಿಕ್ ಸನ್‌ರೂಫ್ ವೈರ್‌ಲೆಸ್ ಚಾರ್ಜರ್, ಕಲರ್ ಆಕ್ಸೆಂಟ್ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ಇನ್ನು ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಹೊಸ ಕಾರಿನಲ್ಲಿ ತಾಂತ್ರಿಕ ಅಂಶಗಳು ಜೋಡಣೆಯಾಗಲಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಎಸ್‌ಪಿ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ಎಂಜಿನ್ ಮತ್ತು ಪರ್ಫಾಮೆನ್ಸ್

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯ ಆದ್ಯತೆ ಮೇರೆಗೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಮೂರು ಸಿಲಿಂಡರ್ ಸೌಲಭ್ಯದೊಂದಿಗೆ 120-ಬಿಎಚ್‌ಪಿ ಉತ್ಪದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ನಾಲ್ಕು ಸಿಲಿಂಡರ್ ಸೌಲಭ್ಯದೊಂದಿಗೆ 150-ಬಿಎಚ್‍‌ಪಿ ಉತ್ಪಾದನೆಯೊಂದಿಗೆ ಕಂಪ್ಯಾಕ್ಟ್ ಎಸ್‌‌ಯುವಿ ಕಾರಿನಲ್ಲಿಯೇ ಪವರ್‍‌ಫುಲ್ ಕಾರು ಮಾದರಿಯಾಗಿರಲಿದೆ.

MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ಎಂಜಿನ್ ಆಯ್ಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗುತ್ತಿದ್ದು, ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿಯು ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದೊಂದಿಗೆ ಮಾರಾಟಗೊಳ್ಳಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಇಂಟಿರಿಯರ್ ಡಿಸೈನ್ ಬಹಿರಂಗ

ಹೊಸ ಕಾರು ಎಂಜಿನ್ ಮತ್ತು ಬೆಲೆಗೆ ಆಧರಿಸಿ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನೊಂದಿಗೆ ಸ್ಕೋಡಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಪಾಲನ್ನು ಹೆಚ್ಚಿಸುವ ನೀರಿಕ್ಷೆಯಲ್ಲಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda Kushaq Interiors Sketches Officially Revealed. Read in Kannada.
Story first published: Thursday, March 4, 2021, 15:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X