Just In
- 1 hr ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 1 hr ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 3 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 3 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್
ಹೊಚ್ಚ ಹೊಸ ಕುಶಾಕ್ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿರುವ ಸ್ಕೋಡಾ ಕಂಪನಿಯು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಅನಾವರಣದ ನಂತರವೂ ಹೊಸ ಕಾರಿನ ತಾಂತ್ರಿಕ ಅಂಶಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ಮುಂದುವರೆದಿದೆ.
ಕುಶಾಕ್ ಆವೃತ್ತಿಯು ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿದ್ದು, ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯ ಭಾಗವಾಗಿ ಈ ಹೊಸ ಕಾರನ್ನು ನಿರ್ಮಾಣಗೊಳಿಸಿದೆ. ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್ಫಾರ್ಮ್ನಲ್ಲಿ ಹೊಸ ಕಾರು ಅಭಿವೃದ್ದಿಗೊಂಡಿದ್ದು, ಹೊಸ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.
ಕಂಪ್ಯಾಕ್ಟ್ ಎಸ್ಯುವಿ ಮಾದರಿಯಲ್ಲೇ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯಲ್ಲಿ ದೊಡ್ಡದಾದ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್, ಡ್ಯುಯಲ್ ಹೆಡ್ಲ್ಯಾಂಪ್, ಎಲ್ಇಡಿ ಡಿಆರ್ಎಲ್ಎಸ್, ಏರ್ ಇನ್ಟೆಕ್ ಮತ್ತು ಮುಂಭಾಗದ ಬಂಪರ್ನಲ್ಲಿ ಸ್ಕಫ್ ಪ್ಲೇಟ್ ಜೋಡಿಸಲಾಗಿದೆ.
ಹೊಸ ಕಾರಿನ ಎರಡು ಬದಿಯಲ್ಲಿ ಮತ್ತು ಹಿಂಭಾಗದ ಪೊಫೈಲ್ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, 17-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ವೀಂಡೋಗಳ ಸುತ್ತಲೂ ಕ್ರೋಮ್ ಸ್ಟ್ರೀಪ್, ಸ್ಲಿಕ್ ಎಲ್ಇಡಿ ಟೈಲ್ಲೈಟ್, ರೂಫ್ ಮೌಟೆಂಡ್ ಸ್ಪಾಯ್ಲರ್, ಎಲ್ಇಡಿ ಸ್ಟಾಪ್ ಲ್ಯಾಂಪ್ ಜೊತೆಗೆ ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಕೂಡಾ ಆಕರ್ಷಕವಾಗಿವೆ.
ಹಾಗೆಯೇ ವಿಶಾಲವಾದ ಕ್ಯಾಬಿನ್ನೊಂದಿಗೆ ವರ್ಚುವಲ್ ಕಾಕ್ಪಿಟ್ ಹೊಂದಿರುವ ಹೊಸ ಕಾರಿನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ಸೆಂಟರ್ ಕನ್ಸೊಲ್, 10-ಇಂಚಿನ ಇನ್ಪೋಟೈನ್ಮೆಂಟ್ ಸಿಸ್ಟಂ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಮಲ್ಟಿ ಫಂಕ್ಷನಲ್ ಟು ಸ್ಪೋಕ್ ಸ್ಟಿರಿಂಗ್ ವೀಲ್ಹ್ ಹೊಂದಿದೆ.
ಹೊಸ ಕಾರಿನಲ್ಲಿ ವೈರ್ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ಪ್ಲೇ, ಎಲೆಕ್ಟ್ರಿಕ್ ಸನ್ರೂಫ್, ಸಿ ಫೋರ್ಟ್ ವೈರ್ಲೆಸ್ ಚಾರ್ಜರ್ ಸೌಲಭ್ಯ ಸೇರಿದಂತೆ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್ನಲ್ಲಿ 4 ಏರ್ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್ಬ್ಯಾಗ್ ಸೌಲಭ್ಯಗಳಿವೆ.
ಜೊತೆಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್ಗಳಿವೆ.
MOST READ: ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
ಎಂಜಿನ್ ಮತ್ತು ಪರ್ಫಾಮೆನ್ಸ್
ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಆರಂಭಿಕ ಆವೃತ್ತಿಯು 113-ಬಿಎಚ್ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 148-ಬಿಎಚ್ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.
1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದ್ದು, 1.5-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಎಸ್ಜಿ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಮಾಡಬಹುದಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!
ಕ್ಯಾಂಡಿ ವೈಟ್, ರಿಫ್ಲೆಕ್ಸ್ ಸಿಲ್ವರ್, ಕಾರ್ಬನ್ ಸ್ಟೀಲ್, ಹನಿ ಆರೇಂಜ್ ಮತ್ತು ಟೊರಾಂಡೊ ರೆಡ್(ಡ್ಯುಯಲ್ ಟೋನ್) ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ನೀರಿಕ್ಷಿಸಲಾಗಿದೆ.