ಹೊಸ ಸೇಫ್ಟಿ ಫೀಚರ್ಸ್‌ಗಳೊಂದಿಗೆ Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಮಧ್ಯಮ ಗಾತ್ರದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಸ್ಕೋಡಾ(Skoda) ಕಂಪನಿಯು ತನ್ನ ಹೊಸ ಕಾರು ಮಾದರಿ ಕುಶಾಕ್(Kushaq) ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹೊಸ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಹೊಸ ಸೇಫ್ಟಿ ಜೋಡಣೆಯೊಂದಿಗೆ ಹೊಸ ಕಾರಿನ ಬೆಲೆಯಲ್ಲೂ ತುಸು ಹೆಚ್ಚಳವಾಗಿದೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಸ್ಕೋಡಾ ಕಂಪನಿಯು ಕುಶಾಕ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೊಳಿಸಿದ ನಂತರ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಇದೀಗ ಹೊಸ ಕಾರಿನ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ ಕೆಲವು ಸೇಫ್ಟಿ ಫೀಚರ್ಸ್‌ಗಳನ್ನು ಉನ್ನತೀಕರಿಸಿ ಬಿಡುಗಡೆ ಮಾಡಿದೆ. ಕುಶಾಕ್ ಕಾರಿನ ಸ್ಟೈಲ್ ವೆರಿಯೆಂಟ್‌ನಲ್ಲಿರುವ 1.0 ಲೀಟರ್ ಟಿಎಸ್ಐ ಎಟಿ ಮತ್ತು 1.5 ಲೀಟರ್ ಟಿಎಸ್ಐ ಡಿಜಿಎಸ್ ಮಾದರಿಗಳನ್ನು ಉನ್ನತೀಕರಿಸಲಾಗಿದೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಕುಶಾಕ್ ಕಾರಿನ 1.0 ಲೀಟರ್ ಟಿಎಸ್ಐ ಎಟಿ ಮತ್ತು 1.5 ಲೀಟರ್ ಟಿಎಸ್ಐ ಡಿಜಿಎಸ್ ಮಾದರಿಗಳಲ್ಲಿ ಈ ಹಿಂದೆ ನಾಲ್ಕು ಏರ್‌ಬ್ಯಾಗ್ ಜೋಡಣೆ ಮಾಡಿದ್ದ ಕಂಪನಿಯು ಇದೀಗ ಎರಡು ಮಾದರಿಯಲ್ಲೂ ಆರು ಏರ್‌ಬ್ಯಾಗ್ ಜೋಡಣೆ ಮಾಡಿದ್ದು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಸೌಲಭ್ಯವನ್ನು ಸಹ ಹೊಸದಾಗಿ ಸೇರಿಸಿದೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಹೊಸ ಸೇಫ್ಟಿ ಫೀಚರ್ಸ್‌ಗಳ ನಂತರ 1.0 ಲೀಟರ್ ಟಿಎಸ್ಐ ಎಟಿ ಮತ್ತು 1.5 ಲೀಟರ್ ಟಿಎಸ್ಐ ಡಿಜಿಎಸ್ ಮಾದರಿಗಳ ಬೆಲೆಯನ್ನು ಕ್ರಮವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 15.80 ಲಕ್ಷದಿಂದ ರೂ. 16.20 ಲಕ್ಷಕ್ಕೆ ಮತ್ತು ರೂ.17.60 ಲಕ್ಷದಿಂದ ರೂ.18 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

1.0 ಲೀಟರ್ ಟಿಎಸ್ಐ ಎಟಿ ಮತ್ತು 1.5 ಲೀಟರ್ ಟಿಎಸ್ಐ ಡಿಜಿಎಸ್ ಮಾದರಿಗಳು ಹೆಚ್ಚುವರಿಯಾಗಿ ರೂ.40 ಸಾವಿರದಷ್ಟು ದುಬಾರಿಯಾಗಿದ್ದು, ಇನ್ನುಳಿದಂತೆ ಯಾವುದೇ ಮಾದರಿಗಳ ಬೆಲೆಯಲ್ಲಿ ಬದಲಾವಣೆ ಮಾಡಲಾಗಿಲ್ಲ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಇನ್ನು ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ ಕುಶಾಕ್ ಕಾರು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ದುಬಾರಿ ಬೆಲೆ ನಡುವೆಯೂ ಹೊಸ ಕಾರು ಖರೀದಿಗಾಗಿ ನೀರಿಕ್ಷೆಗೂ ಮೀರಿ ಬುಕ್ಕಿಂಗ್ ದಾಖಲಾಗುತ್ತಿದೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಕೋಡಾ ಕುಶಾಕ್ ಮಾದರಿಯು ಅತಿ ಕಡಿಮೆ ಅವಧಿಯಲ್ಲಿ 10 ಸಾವಿರ ಬುಕ್ಕಿಂಗ್‌ ಗುರಿತಲುಪಿದ್ದು, ಹೊಸ ಕಾರು ವಿತರಣೆ ಆರಂಭಿಸಿದ ನಂತರ ಇದುವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಯುನಿಟ್ ಗ್ರಾಹಕರ ಕೈಸೇರಿವೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ಹೊಸ ಸೇಫ್ಟಿ ಫೀಚರ್ಸ್‌ನೊಂದಿಗೆ ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಮಾದರಿಗಳನ್ನು ಮಾರಾಟ ಮಾಡಲಾಗುತ್ತಿದೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಆಟೋಮ್ಯಾಟಿಕ್ ಮಾದರಿಗಳು ಉತ್ತಮ ಬೇಡಿಕೆ ಹೊಂದಿವೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

Skoda Kushaq ಬೆಲೆಯಲ್ಲಿ ರೂ. 40 ಸಾವಿರ ಹೆಚ್ಚಳ

ಇದರೊಂದಿಗೆ ಕಂಪನಿಯು ಕುಶಾಕ್ ಕಾರಿನ ಎಂಟ್ರಿ ಲೆವಲ್ ಮಾದರಿಗಳಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಆಕ್ಟಿವಾ ವೆರಿಯೆಂಟ್‌ನಲ್ಲಿ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸುತ್ತಿದೆ.

Article Published On: Wednesday, September 22, 2021, 13:19 [IST]
English summary
Skoda kushaq style variant now gets 6 airbags and tpms details
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+