Just In
- 8 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 10 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 11 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಚ್ಚ ಹೊಸ ಸ್ಕೋಡಾ ಕುಶಾಕ್ ಕಾರಿನ ಡಿಸೈನ್ ಸ್ಕೆಚ್ ಬಹಿರಂಗ
ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯಾದ ಕುಶಾಕ್ ಆವೃತ್ತಿಯನ್ನು ಮುಂದಿನ ತಿಂಗಳು ಮಾರ್ಚ್ 18ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳಿಸುತ್ತಿದ್ದು, ಹೊಸ ಕಾರಿನ ಉತ್ಪಾದನಾ ಆವೃತ್ತಿಯ ಅನಾವರಣಕ್ಕೂ ಮುನ್ನ ಕಾರಿನ ವಿನ್ಯಾಸದ ಕುರಿತಾದ ರೇಖಾಚಿತ್ರಗಳು ಬಹಿರಂಗವಾಗಿವೆ.
ಹೊಸ ಸ್ಕೋಡಾ ಕುಶಾಕ್ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆಗೆ ಪವರ್ಫುಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದ್ದು, ಕುಶಾಕ್ ಕಾರು ಕಾಮಿಕ್ ಎಸ್ಯುವಿ ಮಾದರಿಯನ್ನು ಆಧರಿಸಿ ಅಭಿವೃದ್ದಿಗೊಂಡಿದೆ. ಹೊಸ ಕಾರು ಮಾತೃಸಂಸ್ಥೆಯಾದ ಫೋಕ್ಸ್ವ್ಯಾಗನ್ ಕಂಪನಿಯ ಟೈಗನ್ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಯೊಂದಿಗೂ ಕೆಲವು ಪ್ರಮುಖ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳಲಿದ್ದು, ಕಾರು ಅನಾವರಣ ದಿನದಿಂದಲೇ ಹೊಸ ಕಾರಿನ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ.
ಕಂಪ್ಯಾಕ್ಟ್ ಎಸ್ಯುವಿ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಲಿರುವ ಹೊಸ ಎಸ್ಯುವಿ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಜೋಡಣೆ ಮಾಡಲಾಗಿದ್ದು, ಡ್ಯುಯಲ್ ಹೆಡ್ಲ್ಯಾಂಪ್, ಏರ್ ಇನ್ಟೆಕ್ ಮತ್ತು ಮುಂಭಾಗದ ಬಂಪರ್ನಲ್ಲಿ ಸ್ಕಫ್ ಪ್ಲೇಟ್ಗಳೊಂದಿಗೆ ದೊಡ್ಡ ಗ್ರಿಲ್ ವಿನ್ಯಾಸ ಹೊಂದಿದೆ.
ಕುಶಾಕ್ ಎಸ್ಯುವಿಯ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, ಹೊಸ ಎಸ್ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದೆ.
ಹೊಸ ಕಾರಿನ ಇಂಟಿರಿಯರ್ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ವೈರ್ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ಪ್ಲೇ, 360 ಡಿಗ್ರಿ ಕ್ಯಾಮೆರಾ, ಸನ್ರೂಫ್ ಸೌಲಭ್ಯವಿದೆ. ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಹೊಸ ಕಾರಿನಲ್ಲಿ ತಾಂತ್ರಿಕ ಅಂಶಗಳು ಜೋಡಣೆಯಾಗಲಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್ನಲ್ಲಿ 4 ಏರ್ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಎಸ್ಪಿ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್ಗಳಿವೆ.
ಎಂಜಿನ್ ಮತ್ತು ಪರ್ಫಾಮೆನ್ಸ್
ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯ ಆದ್ಯತೆ ಮೇರೆಗೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದೆ.
1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಮೂರು ಸಿಲಿಂಡರ್ ಸೌಲಭ್ಯದೊಂದಿಗೆ 120-ಬಿಎಚ್ಪಿ ಉತ್ಪದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ನಾಲ್ಕು ಸಿಲಿಂಡರ್ ಸೌಲಭ್ಯದೊಂದಿಗೆ 150-ಬಿಎಚ್ಪಿ ಉತ್ಪಾದನೆಯೊಂದಿಗೆ ಕಂಪ್ಯಾಕ್ಟ್ ಎಸ್ಯುವಿ ಕಾರಿನಲ್ಲಿಯೇ ಪವರ್ಫುಲ್ ಕಾರು ಮಾದರಿಯಾಗಿರಲಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್ಯುವಿ ಕಾರುಗಳಿವು..!
ಎಂಜಿನ್ ಆಯ್ಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ನೀಡಲಾಗುತ್ತಿದ್ದು, ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.
ಈ ಮೂಲಕ ಕಂಪ್ಯಾಕ್ಟ್ ಎಸ್ಯುವಿಯು ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಅಂತರದೊಂದಿಗೆ ಮಾರಾಟಗೊಳ್ಳಬಹುದಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಹೊಸ ಕಾರು ಎಂಜಿನ್ ಮತ್ತು ಬೆಲೆಗೆ ಆಧರಿಸಿ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನೊಂದಿಗೆ ಸ್ಕೋಡಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಪಾಲನ್ನು ಹೆಚ್ಚಿಸುವ ನೀರಿಕ್ಷೆಯಲ್ಲಿದೆ.