ಹೊಸ Kushaq ಎಸ್‌ಯುವಿ ಮಾದರಿಯೊಂದಿಗೆ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಸ್ಕೋಡಾ ಇಂಡಿಯಾ(skoda) ಕಂಪನಿಯು ಕಾರು ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿದ್ದು, ಕಂಪನಿಯ ಕಾರು ಮಾರಾಟದಲ್ಲಿ ಹೊಚ್ಚ ಹೊಸ ಕುಶಾಕ್(kushaq) ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮಹತ್ವದ ಪಾತ್ರ ವಹಿಸುತ್ತಿದೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಸ್ಕೋಡಾ ಇಂಡಿಯಾ ಕಂಪನಿಯು ಕಳೆದ ತಿಂಗಳು ಸೆಪ್ಟೆಂಬರ್ ಅವಧಿಯ ಕಾರು ಮಾರಾಟದಲ್ಲಿ ಕಳೆದ ವರ್ಷದ ಸೆಪ್ಟೆಂಬರ್ ಅವಧಿಗಿಂತಲೂ ಶೇ. 131ರಷ್ಟು ಬೆಳವಣಿಗೆ ಸಾಧಿಸಿದ್ದು, ಕಂಪನಿಯ ಹೊಸ ಕಾರು ಮಾರಾಟದಲ್ಲಿ ಕುಶಾಕ್ ಮಾದರಿಯೇ ಅಗ್ರಸ್ಥಾನದಲ್ಲಿದೆ. ಕಳೆದ ತಿಂಗಳು ಸ್ಕೋಡಾ ಕಂಪನಿಯು 3,027 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಕಳೆದ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ ಕೇವಲ 1,312 ಯುನಿಟ್ ಕಾರುಗಳು ಮಾರಾಟವಾಗಿದ್ದವು.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಉತ್ತಮ ಬೇಡಿಕೆಯೊಂದಿಗೆ ಸ್ಕೋಡಾ ಕಂಪನಿಗೆ ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಕಳೆದ ಕೆಲ ವರ್ಷಗಳಿಂದ ಕಾರು ಮಾರಾಟದಲ್ಲಿ ಸತತ ಹಿನ್ನಡೆ ಅನುಭವಿಸಿದ್ದ ಕಂಪನಿಗೆ ಇದೀಗ ಕುಶಾಕ್ ಕಾರು ಮರುಜೀವ ನೀಡಿದೆ ಎಂದರೆ ತಪ್ಪಾಗುವುದಿಲ್ಲ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ರ‍್ಯಾಪಿಡ್ ಸೆಡಾನ್ ಹೊರತುಪಡಿಸಿ ಇನ್ನುಳಿದ ಕಾರು ಮಾದರಿಗಳ ಮಾರಾಟದಲ್ಲಿ ಸೀಮಿತ ಬೇಡಿಕೆ ಹೊಂದಿರುವ ಸ್ಕೋಡಾ ಕಂಪನಿಯು ಕುಶಾಕ್ ಮಾದರಿಯ ಬಿಡುಗಡೆಯ ಮೂಲಕ ಕಂಪನಿಯ ದಿಕ್ಕನ್ನೇ ಬದಲಿಸಿದ್ದು, ಮುಂಬರುವ ದಿನಗಳಲ್ಲಿ ಕಂಪನಿಯು ಹೊಸ ಕಾರುಗಳ ಮಾರಾಟದಲ್ಲಿ ಮತ್ತಷ್ಟು ಹೊಸ ಬದಲಾವಣೆ ತರುವ ಯೋಜನೆಯಲ್ಲಿದೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಫೋಕ್ಸ್‌ವ್ಯಾಗನ್ ಕಂಪನಿಯ ಜೊತೆಗೆ ಸಹಭಾಗಿತ್ವದಲ್ಲಿ ಹೊಸ ಕಾರುಗಳನ್ನು ಅಭಿವೃದ್ದಿಗೊಳಿಸುತ್ತಿರುವ ಸ್ಕೋಡಾ ಕಂಪನಿಯು ಮಧ್ಯಮ ಗಾತ್ರದ ಐಷಾರಾಮಿ ಕಾರುಗಳ ಮಾರಾಟವನ್ನು ಹೊಂದಿದ್ದು, ರ‍್ಯಾಪಿಡ್ ನಂತರ ಕುಶಾಕ್ ಮಾದರಿಯನ್ನು ಆಕರ್ಷಕ ಬೆಲೆಯೊಂದಿಗೆ ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯುತ್ತಿದೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಸ್ಕೋಡಾ ಕಂಪನಿಯು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಕುಶಾಕ್ ಕಾರು ಮಾದರಿಯ ಮೂಲಕ ಗ್ರಾಹಕರ ಆಯ್ಕೆಯನ್ನೇ ಬದಲಿಸುವಲ್ಲಿ ಯಶಸ್ವಿಯಾಗುತ್ತಿದ್ದು, ಕಂಪನಿಯು ಸಿ ಸೆಗ್ಮೆಂಟ್ ಸೆಡಾನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಸ್ಥಗಿತಗೊಳಿಸಿ ರ‍್ಯಾಪಿಡ್‌ಗಿಂತಲೂ ಉತ್ತಮ ವಿನ್ಯಾಸದ ಮತ್ತೊಂದು ಕಾರು ಮಾದರಿಯೊಂದನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಸ್ಕೋಡಾ ರ‍್ಯಾಪಿಡ್ ಮಾತ್ರವಲ್ಲದೆ ಫೋಕ್ಸ್‌‌ವ್ಯಾಗನ್ ವೆಂಟೊ ಕಾರು ಮಾದರಿಯು ಕೂಡಾ ಮಾರಾಟದಿಂದ ಸ್ಥಗಿತಗೊಳ್ಳುತ್ತಿದ್ದು, ರ‍್ಯಾಪಿಡ್ ಮತ್ತು ವೆಂಟೊ ಸ್ಥಾನಕ್ಕೆ ಹೊಸ ವಿನ್ಯಾಸ ಮತ್ತು ಪವರ್‌ಫುಲ್ ಎಂಜಿನ್ ಆಯ್ಕೆ ಹೊಸ ಸೆಡಾನ್ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿವೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಕಾರು ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನೆಯಿಂದ ಸ್ಥಗಿತಗೊಳಿಸುತ್ತಿರುವ ಬಗ್ಗೆ ಸ್ಕೋಡಾ ಇಂಡಿಯಾ ಮುಖ್ಯಸ್ಥರೇ ಮಾಹಿತಿ ಹಂಚಿಕೊಂಡಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ರ‍್ಯಾಪಿಡ್ ಸ್ಥಾನಕ್ಕೆ ಸಂಪೂರ್ಣವಾಗಿ ಹೊಸ ಮಾದರಿಯೊಂದನ್ನು ಸಿದ್ದಪಡಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿಗೊಳ್ಳುತ್ತಿರುವ ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ ಹೊಸ ಸೆಡಾನ್ ಕಾರು ಮಾದರಿಯು ತಾಂತ್ರಿಕವಾಗಿ ಮತ್ತು ಎಂಜಿನ್ ಆಯ್ಕೆಯಲ್ಲಿ ಬಹುತೇಕ ಒಂದೇ ಆಗಿರಲಿದ್ದು, ವಿನ್ಯಾಸದಲ್ಲಿ ತುಸು ಬದಲಾವಣೆಯೊಂದಿಗೆ ತಮ್ಮದೇ ಆದ ಗ್ರಾಹಕ ವರ್ಗವನ್ನು ಸೆಳೆಯಲಿವೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಹೊಸ ಕಾರು ಕುಶಾಕ್ ಮಾದರಿಯಲ್ಲೇ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಆಯ್ಕೆ ಮುಂಚೂಣಿ ಸಾಧಿಸುವ ತವಕದಲ್ಲಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಸೆಡಾನ್ ಮಾರಾಟದಲ್ಲಿ ಎರಡು ಕಾರುಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ ಮೊದಲ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕುಶಾಕ್ ಮಾದರಿಯು ಈಗಾಗೇ ಬಿಡುಗಡೆಯಾದ ಅತಿ ಕಡಿಮೆ ಅವಧಿಯಲ್ಲಿ 10 ಸಾವಿರ ಬುಕ್ಕಿಂಗ್‌ ಗುರಿತಲುಪಿದ್ದು, ಹೊಸ ಕಾರು ವಿತರಣೆ ಆರಂಭಿಸಿದ ನಂತರ ಇದುವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಯುನಿಟ್ ಗ್ರಾಹಕರ ಕೈಸೇರಿವೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಬುಕ್ಕಿಂಗ್ ಆಧಾರದ ಹೊಸ ಕುಶಾಕ್ ಕಾರು ವಿತರಣೆ ಆರಂಭಿಸಿರುವ ಸ್ಕೋಡಾ ಕಂಪನಿಯು ಹೊಸ ಕಾರಿನೊಂದಿಗೆ ಮತ್ತಷ್ಟು ಹೊಸ ಮಾರಾಟ ಮಳಿಗೆಗಳಿಗೂ ಚಾಲನೆ ನೀಡುತ್ತಿದ್ದು, ಹೊಸ ಮಾರಾಟ ಮಳಿಗೆಗಳೊಂದಿಗೆ ಕುಶಾಕ್ ಕಾರಿಗೆ ಇನ್ನು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ದೇಶಾದ್ಯಂತ ಪ್ರಮುಖ ನಗರಗಳಲ್ಲಿ 150 ಕಾರು ಮಾರಾಟ ಮಳಿಗೆಗಳನ್ನು ಹೊಂದಿರುವ ಸ್ಕೋಡಾ ಕಂಪನಿಯು ಮುಂದಿನ ಎರಡು ವರ್ಷದೊಳಗೆ 75 ಹೊಸ ಮಾರಾಟ ಮಳಿಗೆಗಳೊಂದಿಗೆ 225 ಮಾರಾಟ ಮಳಿಗೆ ಹೊಂದುವ ಗುರಿಹೊಂದಿದ್ದು, ಹೊಸ ಮಾರಾಟ ಮಳಿಗೆಗಳು ಕುಶಾಕ್ ಸೇರಿದಂತೆ ವಿವಿಧ ಕಾರು ಮಾದರಿಗಳ ಮಾರಾಟ ಸಂಖ್ಯೆ ಹೆಚ್ಚಿಸಲು ಸಹಕಾರಿಯಾಗುತ್ತಿವೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Skoda

ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda kushaq suv getting high demand in september 2021 sales report
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X