ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾದ ಕುಶಾಕ್ ಆವೃತ್ತಿಯನ್ನು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳಿಸಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿದೆ.

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಭಾರತದಲ್ಲಿ ಕಳೆದ ವರ್ಷ ವಿಷನ್ ಇನ್ ಕಾನ್ಸೆಪ್ಟ್ ಮಾದರಿಯಲ್ಲಿ ಹೊಸ ಕಾರನ್ನು ಅನಾವರಣಗೊಳಿಸಿದ್ದ ಸ್ಕೋಡಾ ಕಂಪನಿಯು ಕಳೆದ ತಿಂಗಳ ಹಿಂದಷ್ಟೇ ಕುಶಾಕ್ ಹೆಸರನೊಂದಿಗೆ ಹೊಸ ಕಾರನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಇದೀಗ ಕಾನ್ಸೆಪ್ಟ್ ಮಾದರಿಯನ್ನು ಕುಶಾಕ್ ಹೆಸರಿನೊಂದಿಗೆ ಉತ್ಪಾದನಾ ಮಾದರಿಯನ್ನು ಅನಾವರಗೊಳಿಸುವ ಮೂಲಕ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ಸುಳಿವು ನೀಡಿದೆ.

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಸ್ಕೋಡಾ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯ ಭಾಗವಾಗಿ ನಿರ್ಮಾಣಗೊಂಡಿದ್ದು, ಹೊಸ ಕುಶಾಕ್ ಉತ್ಪಾದನೆಗಾಗಿ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡಲಾಗಿದೆ.

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯಲ್ಲಿ ದೊಡ್ಡದಾದ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್, ಡ್ಯುಯಲ್ ಹೆಡ್‍‍ಲ್ಯಾಂಪ್‍, ಎಲ್ಇಡಿ ಡಿಆರ್‌ಎಲ್ಎಸ್, ಏರ್ ಇನ್‍‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ ಜೋಡಿಸಲಾಗಿದೆ.

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಕುಶಾಕ್ ಎಸ್‍‍ಯುವಿಯ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, 17-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ವೀಂಡೋಗಳ ಸುತ್ತಲೂ ಕ್ರೋಮ್ ಸ್ಟ್ರೀಪ್, ಸ್ಲಿಕ್ ಎಲ್ಇಡಿ ಟೈಲ್‌ಲೈಟ್, ರೂಫ್ ಮೌಟೆಂಡ್ ಸ್ಪಾಯ್ಲರ್, ಎಲ್ಇಡಿ ಸ್ಟಾಪ್ ಲ್ಯಾಂಪ್ ಜೊತೆಗೆ ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಕೂಡಾ ಆಕರ್ಷಕವಾಗಿವೆ.

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿರುವ ಹೊಸ ಕಾರಿನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍‍‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ಸೆಂಟರ್ ಕನ್ಸೊಲ್, 10-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಮಲ್ಟಿ ಫಂಕ್ಷನಲ್ ಟು ಸ್ಪೋಕ್ ಸ್ಟಿರಿಂಗ್ ವೀಲ್ಹ್ ಹೊಂದಿದೆ.

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಹೊಸ ಕಾರಿನಲ್ಲಿ ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, ಎಲೆಕ್ಟ್ರಿಕ್ ಸನ್‌ರೂಫ್, ಸಿ ಫೋರ್ಟ್ ವೈರ್‌ಲೆಸ್ ಚಾರ್ಜರ್ ಸೌಲಭ್ಯ ಸೇರಿದಂತೆ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿನ್ ಮತ್ತು ಪರ್ಫಾಮೆನ್ಸ್

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯ ಆದ್ಯತೆ ಮೇರೆಗೆ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪರಿಚಯಿಸಿದ್ದು, ಆರಂಭಿಕ ಕಾರು ಮಾದರಿಯು 1.-0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು ಮೂರು ಸಿಲಿಂಡರ್ ಸೌಲಭ್ಯದೊಂದಿಗೆ 113-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪದನೆ ಮಾಡಿದ್ದಲ್ಲಿ 1.5-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು ನಾಲ್ಕು ಸಿಲಿಂಡರ್ ಸೌಲಭ್ಯದೊಂದಿಗೆ 148-ಬಿಎಚ್‍‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪವರ್‍‌ಫುಲ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾಗಲಿದೆ.

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಕುಶಾಕ್ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದ್ದು, 1.5-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಎಸ್‌ಜಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಮಾಡಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಕ್ಯಾಂಡಿ ವೈಟ್, ರಿಫ್ಲೆಕ್ಸ್ ಸಿಲ್ವರ್, ಕಾರ್ಬನ್ ಸ್ಟೀಲ್, ಹನಿ ಆರೇಂಜ್ ಮತ್ತು ಟೊರಾಂಡೊ ರೆಡ್(ಡ್ಯುಯಲ್ ಟೋನ್) ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಮುಂದಿನ ತಿಂಗಳು ಏಪ್ರಿಲ್ ಮಧ್ಯಂತರದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.

ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಂಡ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಮಾದರಿಗಳಿಗೆ ಪೈಪೋಟಿಯಾಗಿ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ನೀರಿಕ್ಷಿಸಲಾಗಿದೆ.

More from DriveSpark

Article Published On: Thursday, March 18, 2021, 17:51 [IST]
English summary
All-New Skoda Kushaq SUV Globally Unveiled In India Ahead Of Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+