ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

ಸ್ಕೋಡಾ ಕಂಪನಿಯು ಇದೇ ತಿಂಗಳು 28ರಂದು ತನ್ನ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಂಪನಿಯು ಕುಶಾಕ್ ಕಾರಿನ ಇಂಟಿರಿಯರ್ ಚಿತ್ರದೊಂದಿಗೆ ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದೆ.

ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

ಹೊಸ ಕುಶಾಕ್ ಕಾರು ಮಾದರಿಯನ್ನು ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯಡಿ ಅಭಿವೃದ್ದಿಗೊಳಿಸಿದ್ದು, ಹೊಸ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

ಕುಶಾಕ್ ಕಾರು ಮಾದರಿಯು ಆಕ್ಟಿವ್, ಆಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆ ಸೇಫ್ಟಿ ಫೀಚರ್ಸ್‌ಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದೆ.

ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

ಸ್ಕೋಡಾ ಕಂಪನಿಯು ಹಂಚಿಕೊಂಡಿರುವ ಇಂಟಿರಿಯರ್ ಚಿತ್ರದಲ್ಲಿ ಹಲವಾರು ಫೀಚರ್ಸ್ ಸೆಗ್ಮೆಂಟ್ ಫಸ್ಟ್ ಸೌಲಭ್ಯಗಳಾಗಿದ್ದು, ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 25.4-ಇಂಚಿನ ಇನ್ಟೋಟೈನ್‌ಮೆಂಟ್ ಸಿಸ್ಟಂ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿವೆ.

ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

ಟಾಪ್ ಎಂಡ್ ಮಾದರಿಯಲ್ಲಿ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿರಲಿದ್ದು, ಪ್ರತಿ ಮಾದರಿಗಳಲ್ಲೂ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಿರುವುದು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪ್ರತಿಸ್ಪರ್ಧಿಯಾಗಲಿದೆ.

ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

ಹಾಗೆಯೇ ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿರುವ ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಜೋಡಿಸಲಾಗಿದೆ.

ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

1.0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌‌ಬಾಕ್ಸ್ ಆಯ್ಕೆ ಹೊಂದಿದ್ದು, 108-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 148-ಬಿಎಚ್‍‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

ಈ ಮೂಲಕ ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ನೀರಿಕ್ಷಿಸಲಾಗಿದೆ.

ಕುಶಾಕ್ ಕಾರಿನ ಇಂಟಿರಿಯರ್ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ

ಜೂನ್ 28ರಂದು ಹೊಸ ಕಾರು ಬಿಡುಗಡೆಯ ನಂತರ ಜುಲೈ ಮೊದಲ ವಾರದಲ್ಲಿ ಕಾರಿನ ವಿತರಣೆ ಆರಂಭವಾಗಲಿದ್ದು, ಸದ್ಯಕ್ಕೆ ಕಂಪನಿಯು 1.0-ಲೀಟರ್ ಪೆಟ್ರೋಲ್ ಮಾದರಿಯನ್ನು ಮಾತ್ರ ವಿತರಿಸಲು ನಿರ್ಧರಿಸಿದೆ. ಅಗಸ್ಟ್ ನಂತರವಷ್ಟೇ ಕಂಪನಿಯು 1.5-ಲೀಟರ್ ಪೆಟ್ರೋಲ್ ಮಾದರಿಯನ್ನು ವಿತರಿಸಲಿದ್ದು, 1.5 ಲೀಟರ್ ಮಾದರಿಗಾಗಿ ಈಗಿನಿಂದಲೇ ಬುಕ್ಕಿಂಗ್ ಪ್ರಕ್ರಿಯೆ ಮತ್ತು ಟೆಸ್ಟ್ ಡ್ರೈವ್ ಮಾದರಿಗಳು ಲಭ್ಯವಿರಲಿದೆ.

More from DriveSpark

Article Published On: Friday, June 25, 2021, 19:39 [IST]
English summary
Skoda Kushaq Interior Highlights Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+