Just In
Don't Miss!
- News
ಕೊರೊನಾ ಸೋಂಕು ಹೆಚ್ಚಳ: ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Finance
ಮಹಾರಾಷ್ಟ್ರದಲ್ಲಿ ಲಾಕ್ಡೌನ್: ಕಾರುಗಳ ಉತ್ಪಾದನೆ ಮೇಲೆ ಭಾರೀ ಪರಿಣಾಮ
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕುಶಾಕ್ ಎಸ್‌ಯುವಿ ಕಾರಿನ ಟಿವಿಸಿ ಬಿಡುಗಡೆ ಮಾಡಿದ ಸ್ಕೋಡಾ
ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಅನಾವರಣಗೊಳಿಸಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಇದೀಗ ಹೊಸ ಕಾರಿನ ತಾಂತ್ರಿಕ ಮಾಹಿತಿ ಒಳಗೊಂಡ ಟಿವಿ ಜಾಹೀರಾತು ಬಿಡುಗಡೆ ಮಾಡಿದೆ.

ಹೊಸ ಕುಶಾಕ್ ಆವೃತ್ತಿಯು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿದ್ದು, ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯ ಭಾಗವಾಗಿ ನಿರ್ಮಾಣಗೊಳಿಸಿದೆ. ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಹೊಸ ಕಾರನ್ನು ನಿರ್ಮಾಣ ಮಾಡಲಾಗಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿರುವ ಹೊಸ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯಲ್ಲಿ ದೊಡ್ಡದಾದ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್, ಡ್ಯುಯಲ್ ಹೆಡ್‍ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಏರ್ ಇನ್‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್ ಜೋಡಿಸಲಾಗಿದೆ.
ಹೊಸ ಕಾರಿನ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, 17-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ವೀಂಡೋಗಳ ಸುತ್ತಲೂ ಕ್ರೋಮ್ ಸ್ಟ್ರೀಪ್, ಸ್ಲಿಕ್ ಎಲ್ಇಡಿ ಟೈಲ್‌ಲೈಟ್, ರೂಫ್ ಮೌಟೆಂಡ್ ಸ್ಪಾಯ್ಲರ್, ಎಲ್ಇಡಿ ಸ್ಟಾಪ್ ಲ್ಯಾಂಪ್ ಜೊತೆಗೆ ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಕೂಡಾ ಆಕರ್ಷಕವಾಗಿವೆ.

ಹಾಗೆಯೇ ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್ ಹೊಂದಿರುವ ಹೊಸ ಕಾರಿನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ಸೆಂಟರ್ ಕನ್ಸೊಲ್, 10-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಮಲ್ಟಿ ಫಂಕ್ಷನಲ್ ಟು ಸ್ಪೋಕ್ ಸ್ಟಿರಿಂಗ್ ವೀಲ್ಹ್ ಹೊಂದಿದೆ.

ಹೊಸ ಕಾರಿನಲ್ಲಿ ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, ಎಲೆಕ್ಟ್ರಿಕ್ ಸನ್‌ರೂಫ್, ಸಿ ಫೋರ್ಟ್ ವೈರ್‌ಲೆಸ್ ಚಾರ್ಜರ್ ಸೌಲಭ್ಯ ಸೇರಿದಂತೆ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಂಜಿನ್ ಮತ್ತು ಪರ್ಫಾಮೆನ್ಸ್
ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಆರಂಭಿಕ ಆವೃತ್ತಿಯು 113-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 148-ಬಿಎಚ್‍ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದ್ದು, 1.5-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಎಸ್‌ಜಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಮಾಡಬಹುದಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕ್ಯಾಂಡಿ ವೈಟ್, ರಿಫ್ಲೆಕ್ಸ್ ಸಿಲ್ವರ್, ಕಾರ್ಬನ್ ಸ್ಟೀಲ್, ಹನಿ ಆರೇಂಜ್ ಮತ್ತು ಟೊರಾಂಡೊ ರೆಡ್(ಡ್ಯುಯಲ್ ಟೋನ್) ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದೆಂದು ನೀರಿಕ್ಷಿಸಲಾಗಿದೆ.