ಕುಶಾಕ್ ಕಾರಿನ ಬಿಡುಗಡೆ ಮತ್ತು ವಿತರಣೆ ಮಾಹಿತಿ ಹಂಚಿಕೊಂಡ ಸ್ಕೋಡಾ ಇಂಡಿಯಾ
ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿರುವ ಸ್ಕೋಡಾ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಹೊಸ ಕಾರನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ರಸ್ತೆಗಿಳಿಯುತ್ತಿದೆ.

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರು ಮಾದರಿಯನ್ನು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆಯ ಭಾಗವಾಗಿ ನಿರ್ಮಾಣಗೊಳಿಸುತ್ತಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಂಡಿರುವ ಕುಶಾಕ್ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಹೊಸ ಕಾರಿನ ಬಿಡುಗಡೆ ಮತ್ತು ವಿತರಣೆ ಕುರಿತಂತೆ ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿರುವ ಸ್ಕೋಡಾ ಇಂಡಿಯಾ ಮುಖ್ಯಸ್ಥ ಜಾಕ್ ಹೊಲಿಸ್ ಅವರು, ಹೊಸ ಕಾರು ಇದೇ ತಿಂಗಳು ಜೂನ್ ಕೊನೆಯಲ್ಲಿ ಬಿಡುಗಡೆಯಾಗಲಿದ್ದು, ಜುಲೈ ಆರಂಭದಲ್ಲಿ ಹೊಸ ಕಾರು ಗ್ರಾಹಕರ ಕೈ ಸೇರಲಿದೆ ಎಂದಿದ್ದಾರೆ.

ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯಲ್ಲಿ ದೊಡ್ಡದಾದ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್, ಡ್ಯುಯಲ್ ಹೆಡ್‍ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಏರ್ ಇನ್‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್ ಜೋಡಿಸಲಾಗಿದೆ.

ಹೊಸ ಕಾರಿನ ಎರಡು ಬದಿಯಲ್ಲಿ ಮತ್ತು ಹಿಂಭಾಗದ ಪೊಫೈಲ್‌ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, 17-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, ಸಿಲ್ವರ್ ಫೀನಿಶ್ಡ್ ರೂಫ್ ರೈಲ್ಸ್, ವೀಂಡೋಗಳ ಸುತ್ತಲೂ ಕ್ರೋಮ್ ಸ್ಟ್ರೀಪ್, ಸ್ಲಿಕ್ ಎಲ್ಇಡಿ ಟೈಲ್‌ಲೈಟ್, ರೂಫ್ ಮೌಟೆಂಡ್ ಸ್ಪಾಯ್ಲರ್, ಎಲ್ಇಡಿ ಸ್ಟಾಪ್ ಲ್ಯಾಂಪ್ ಜೊತೆಗೆ ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಕೂಡಾ ಆಕರ್ಷಕವಾಗಿವೆ.

ಹಾಗೆಯೇ ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್ ಹೊಂದಿರುವ ಹೊಸ ಕಾರಿನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ಸೆಂಟರ್ ಕನ್ಸೊಲ್, 10-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೈಮೆಟ್ ಕಂಟ್ರೋಲ್ ಸಿಸ್ಟಂ, ಮಲ್ಟಿ ಫಂಕ್ಷನಲ್ ಟು ಸ್ಪೋಕ್ ಸ್ಟಿರಿಂಗ್ ವೀಲ್ಹ್ ಹೊಂದಿದೆ.

ಹೊಸ ಕಾರಿನಲ್ಲಿ ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, ಎಲೆಕ್ಟ್ರಿಕ್ ಸನ್‌ರೂಫ್, ಸಿ ಫೋರ್ಟ್ ವೈರ್‌ಲೆಸ್ ಚಾರ್ಜರ್ ಸೌಲಭ್ಯ ಸೇರಿದಂತೆ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್ ಸೌಲಭ್ಯಗಳಿವೆ.
MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಜೊತೆಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಆರಂಭಿಕ ಆವೃತ್ತಿಯು 113-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 148-ಬಿಎಚ್‍ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.
MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ 1.-0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, ಆರಂಭಿಕ ಆವೃತ್ತಿಯು 113-ಬಿಎಚ್‌ಪಿ, 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 148-ಬಿಎಚ್‍ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.


Click it and Unblock the Notifications








