ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಸ್ಕೋಡಾ ಕಂಪನಿಯು ತನ್ನ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಮಾರ್ಚ್ ಮೊದಲ ವಾರದಲ್ಲಿ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರಿನ ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಹೊಸ ಕುಶಾಕ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆಗೆ ಪವರ್‌ಫುಲ್ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಹೊಸ ಕಾರು ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಕಂಪನಿಯ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯೊಂದಿಗೂ ಹಲವು ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳಲಿದೆ. ಟೈಗನ್ ಕಾರು ಮಾದರಿಯಲ್ಲಿ ಕೆಲವು ಪ್ರಮುಖ ಫೀಚರ್ಸ್ ಜೊತೆಗೆ ಇನ್ನು ಕೆಲವು ಹೆಚ್ಚುವರಿ ಐಷಾರಾಮಿ ಫೀಚರ್ಸ್ ಪಡೆದುಕೊಳ್ಳಲಿರುವ ಸ್ಕೋಡಾ ಕುಶಾಕ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಸ್ಕೋಡಾ ಕಂಪನಿಯ ತನ್ನ ಸರಣಿಯಲ್ಲಿರುವ ಕಾಮಿಕ್ ಎಸ್‍‍ಯುವಿಯ ಮಾದರಿಯನ್ನು ಆಧರಿಸಿ ಹೊಸ ಕುಶಾಕ್ ಕಾರನ್ನು ಅಭಿವೃದ್ದಿಗೊಳಿಸುತ್ತಿದ್ದು, ಮಾರ್ಚ್‌ನಲ್ಲಿ ಹೊಸ ಕಾರು ಮಾದರಿಯ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿ ಮಾರಾಟ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲು ಸಿದ್ದತೆಯಲ್ಲಿದೆ.

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಹೊಸ ಎಸ್‍‍ಯುವಿ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಜೋಡಣೆ ಹೊಂದಿದ್ದು, ಡ್ಯುಯಲ್ ಹೆಡ್‍‍ಲ್ಯಾಂಪ್‍, ಏರ್ ಇನ್‍‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ವಿನ್ಯಾಸ ಹೊಂದಿದೆ.

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಕುಶಾಕ್ ಎಸ್‍‍ಯುವಿಯ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, ಹೊಸ ಎಸ್‍‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍‍‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍‍‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, 360 ಡಿಗ್ರಿ ಕ್ಯಾಮೆರಾ, ಸನ್‌ರೂಫ್ ಸೌಲಭ್ಯವಿದೆ.

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಹೊಸ ಕಾರಿನಲ್ಲಿ ತಾಂತ್ರಿಕ ಅಂಶಗಳು ಜೋಡಣೆಯಾಗಲಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಎಸ್‌ಪಿ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಎಂಜಿನ್ ಮತ್ತು ಪರ್ಫಾಮೆನ್ಸ್

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯ ಆದ್ಯತೆ ಮೇರೆಗೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದೆ.

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಮೂರು ಸಿಲಿಂಡರ್ ಸೌಲಭ್ಯದೊಂದಿಗೆ 120-ಬಿಎಚ್‌ಪಿ ಉತ್ಪದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ನಾಲ್ಕು ಸಿಲಿಂಡರ್ ಸೌಲಭ್ಯದೊಂದಿಗೆ 150-ಬಿಎಚ್‍‌ಪಿ ಉತ್ಪಾದನೆಯೊಂದಿಗೆ ಕಂಪ್ಯಾಕ್ಟ್ ಎಸ್‌‌ಯುವಿ ಕಾರಿನಲ್ಲಿಯೇ ಪವರ್‍‌ಫುಲ್ ಕಾರು ಮಾದರಿಯಾಗಿರಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಎಂಜಿನ್ ಆಯ್ಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗುತ್ತಿದ್ದು, ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿಯು ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಅಂತರದೊಂದಿಗೆ ಮಾರಾಟಗೊಳ್ಳಬಹುದಾಗಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಬಿಡುಗಡೆಗೂ ಮುನ್ನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಸ್ಕೋಡಾ ಕುಶಾಕ್

ಹೊಸ ಕಾರು ಎಂಜಿನ್ ಮತ್ತು ಬೆಲೆಗೆ ಆಧರಿಸಿ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದ್ದು, ಈ ತಿಂಗಳಾಂತ್ಯಕ್ಕೆ ಅಥವಾ ಮಾರ್ಚ್ ಆರಂಭದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ.

Article Published On: Tuesday, February 16, 2021, 23:52 [IST]
English summary
Skoda Kushaq Launching In 2021 March, Spotted In Final Testing. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+