Just In
- 10 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 11 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 12 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 12 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಶಾಕ್ ಎಸ್ಯುವಿ ಕಾರಿನ ಉತ್ಪಾದನಾ ಮಾದರಿಯ ಅನಾವರಣಕ್ಕೆ ಸಜ್ಜಾದ ಸ್ಕೋಡಾ
ಸ್ಕೋಡಾ ಇಂಡಿಯಾ ಕಂಪನಿಯ ತನ್ನ ಬಹನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್ಯುವಿ ಆವೃತ್ತಿಯನ್ನು ಮುಂದಿನ ತಿಂಗಳು ಮಾರ್ಚ್ ಆರಂಭದಲ್ಲಿ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸುವುದಾಗಿ ಹೇಳಿಕೊಂಡಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆಗೆ ಪವರ್ಫುಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.
ಕುಶಾಕ್ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಸದ್ಯ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿರುವ ಸ್ಕೋಡಾ ಕಂಪನಿಯು ಮಾರ್ಚ್ನಲ್ಲಿ ಹೊಸ ಕಾರು ಮಾದರಿಯ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿ ಮಾರಾಟ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲು ಸಿದ್ದತೆಯಲ್ಲಿದ್ದು, ಹೊಸ ಕಾರು ಮಾತೃಸಂಸ್ಥೆಯಾದ ಫೋಕ್ಸ್ವ್ಯಾಗನ್ ಕಂಪನಿಯ ಟೈಗನ್ ಕಾರು ಮಾದರಿಯೊಂದಿಗೂ ಹಲವು ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳಲಿದೆ.
ಫೋಕ್ಸ್ವ್ಯಾಗನ್ ನಿರ್ಮಾಣದ ಟೈಗನ್ ಕಾರು ಮಾದರಿಯಲ್ಲಿ ಕೆಲವು ಪ್ರಮುಖ ಫೀಚರ್ಸ್ ಜೊತೆಗೆ ಇನ್ನು ಕೆಲವು ಹೆಚ್ಚುವರಿ ಐಷಾರಾಮಿ ಫೀಚರ್ಸ್ ಪಡೆದುಕೊಳ್ಳಲಿರುವ ಸ್ಕೋಡಾ ಕುಶಾಕ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್ಯುವಿಯ ಮಾದರಿಯನ್ನು ಆಧರಿಸಿ ಹೊಸ ಕಾರು ಅಭಿವೃದ್ದಿಗೊಳ್ಳುತ್ತಿದೆ.
ಹೊಸ ಎಸ್ಯುವಿ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಜೋಡಣೆ ಹೊಂದಿದ್ದು, ಡ್ಯುಯಲ್ ಹೆಡ್ಲ್ಯಾಂಪ್, ಏರ್ ಇನ್ಟೆಕ್ ಮತ್ತು ಮುಂಭಾಗದ ಬಂಪರ್ನಲ್ಲಿ ಸ್ಕಫ್ ಪ್ಲೇಟ್ಗಳೊಂದಿಗೆ ದೊಡ್ಡ ಗ್ರಿಲ್ ವಿನ್ಯಾಸ ಹೊಂದಿದೆ.
ಕುಶಾಕ್ ಎಸ್ಯುವಿಯ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, ಹೊಸ ಎಸ್ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ವೈರ್ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ಪ್ಲೇ, 360 ಡಿಗ್ರಿ ಕ್ಯಾಮೆರಾ, ಸನ್ರೂಫ್ ಸೌಲಭ್ಯವಿದೆ.
ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಹೊಸ ಕಾರಿನಲ್ಲಿ ತಾಂತ್ರಿಕ ಅಂಶಗಳು ಜೋಡಣೆಯಾಗಲಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್ನಲ್ಲಿ 4 ಏರ್ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಎಸ್ಪಿ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್ಗಳಿವೆ.
ಎಂಜಿನ್ ಮತ್ತು ಪರ್ಫಾಮೆನ್ಸ್
ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯ ಆದ್ಯತೆ ಮೇರೆಗೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದೆ.
1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಮೂರು ಸಿಲಿಂಡರ್ ಸೌಲಭ್ಯದೊಂದಿಗೆ 120-ಬಿಎಚ್ಪಿ ಉತ್ಪದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ನಾಲ್ಕು ಸಿಲಿಂಡರ್ ಸೌಲಭ್ಯದೊಂದಿಗೆ 150-ಬಿಎಚ್ಪಿ ಉತ್ಪಾದನೆಯೊಂದಿಗೆ ಕಂಪ್ಯಾಕ್ಟ್ ಎಸ್ಯುವಿ ಕಾರಿನಲ್ಲಿಯೇ ಪವರ್ಫುಲ್ ಕಾರು ಮಾದರಿಯಾಗಿರಲಿದೆ.
MOST READ: ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಕಾರು ಖರೀದಿದಾರರಿಗೆ ರೂ. 3 ಲಕ್ಷದ ತನಕ ಸಬ್ಸಡಿ
ಎಂಜಿನ್ ಆಯ್ಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ನೀಡಲಾಗುತ್ತಿದ್ದು, ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.
ಈ ಮೂಲಕ ಕಂಪ್ಯಾಕ್ಟ್ ಎಸ್ಯುವಿಯು ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಅಂತರದೊಂದಿಗೆ ಮಾರಾಟಗೊಳ್ಳಬಹುದಾಗಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್ಯುವಿ ಕಾರುಗಳಿವು..!
ಹೊಸ ಕಾರು ಎಂಜಿನ್ ಮತ್ತು ಬೆಲೆಗೆ ಆಧರಿಸಿ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದ್ದು, ಈ ತಿಂಗಳಾಂತ್ಯಕ್ಕೆ ಅಥವಾ ಮಾರ್ಚ್ ಆರಂಭದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ.